ಸಿಎಂ ಇಬ್ರಾಹಿಂ ಅವಿರೋಧ ಆಯ್ಕೆ?
Team Udayavani, Aug 19, 2017, 7:30 AM IST
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಗಸ್ಟ್ 31 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ
ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿದೆ.
ಸೋಮವಾರ ಇಬ್ರಾಹಿಂ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಸದಸ್ಯೆ ವಿಮಲಾಗೌಡ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಲ್ಲಿ ಸಂಖ್ಯಾ ಬಲದ ಕೊರತೆಯಿಂದ ಅಭ್ಯರ್ಥಿಗಳನ್ನು ಹಾಕದಿರಲು ನಿರ್ಧರಿಸಿವೆ. ಹೀಗಾಗಿ ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.