ಸಿಎಂ, ಸಚಿವರ ಹೆಸರಲ್ಲಿ ಎಸ್‌ಡಿಎ ನೌಕರನ ವಂಚನೆ

Team Udayavani, Aug 5, 2017, 7:45 AM IST

Ban05081706Med.jpg

ಬೆಂಗಳೂರು: ನಿಮಗೆ ಸರ್ಕಾರಿ ಕೆಲಸ ಬೇಕಾ? ಯಾವ ಇಲಾಖೇಲಿ ಏನ್‌ ಕೆಲಸಾ ಆಗಬೇಕು ಹೇಳಿ? ಯಾರಿಗಾದರೂ ವರ್ಗಾವಣೆ ಆಗಬೇಕಿದೆಯಾ? ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೊತ್ತು.

ಇಂಧನ ಸಚಿವ ಡಿ.ಕೆ.ಶಿವಕುಮಾರೂ ಗೊತ್ತು. ಸಚಿವರೆಲ್ಲ ನಂಗೆ ಪರಿಚಯ, ನಾನು ರಾಜ್ಯ ಸರ್ಕಾರಿ ನೌಕರರ ಸಂಘದ ಸಂಚಾಲಕ….. ಹೀಗಂತ ಹೇಳಿಕೊಂಡು ಪಶು ಸಂಗೋಪನೆ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿರುವ ಜೆ.ಮಂಜುನಾಥ ವಿಧಾನಸೌಧದಲ್ಲಿ ತಿರುಗಾಡುತ್ತಾ ಜನರನ್ನು ವಂಚಿಸುತ್ತಿದ್ದಾನೆ.

ವಿಶೇಷವೆಂದರೆ ಈ ಮಂಜುನಾಥ ಇಂಥದ್ದೇ ಎರಡೂ¾ರು ವಂಚನೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ. ಆದರೂ
ವಿಧಾನಸೌಧದಲ್ಲಿ ಯಾವುದೇ ತೊಂದರೆ ಇಲ್ಲದೇ ತಿರುಗಾಡಿಕೊಂಡಿದ್ದಾನೆ. ಸಿಎಂ ಸಿದ್ದರಾಮಯ್ಯ, ಇಂಧನ ಸಚಿವ ಡಿ.ಕೆ.ಶಿವಕುಮಾರ್‌, ವಸತಿ ಸಚಿವ ಎಂ.ಕೃಷ್ಣಪ್ಪ, ವಿಧಾನ ಪರಿಷತ್‌ ಸದಸ್ಯ ಎಚ್‌.ಎಂ.ರೇವಣ್  ಹಾಗೂ ಇತ್ತೀಚೆಗೆ ಬೆಂಗಳೂರು ನಗರ ಪೊಲೀಸ್‌ಆಯುಕ್ತರಾಗಿರುವ ಸುನೀಲ್‌ ಕುಮಾರ್‌ ಅವರೊಂದಿಗೂ ಫೋಟೋ ತೆಗೆಸಿಕೊಂಡಿರುವ ಮಂಜುನಾಥ, ಆ ಫೋಟೋಗಳನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಅಮಾಯಕರಿಗೆ ವಂಚಿಸಿದ್ದಾನೆ. ಈ ರೀತಿ ನಾಯಕರೊಂದಿಗಿದ್ದಾಗ ಫೋಟೋ ತೆಗೆಯಲೆಂದೇ ಒಬ್ಬ ಸಹಾಯಕನನ್ನೂಇಟ್ಟುಕೊಂಡಿದ್ದಾನೆ.

ಜೆ. ಮಂಜುನಾಥ್‌ ತಮ್ಮ ಸ್ನೇಹಿತ ಎಸ್‌.ಪಿ ವರದರಾಜು ಎನ್ನುವವರ ಬಳಿ 2013ರಲ್ಲಿ 3 ಲಕ್ಷ ರೂ. ಕೈ ಸಾಲ ಪಡೆದು, ಹಣ ಇಲ್ಲದ ಬ್ಯಾಂಕ್‌ನ ಚೆಕ್‌ ನೀಡಿದ್ದ. ಆ ಚೆಕ್‌ ಬೌನ್ಸ್‌ ಆಗಿ ಬೆಂಗಳೂರಿನ 12ನೇ ಎಸಿಎಂಎಂ ನ್ಯಾಯಾಲಯವು 3 ಲಕ್ಷ  ಅಸಲು, 15 ಸಾವಿರ ದಂಡ ಹಾಗೂ ಎರಡು ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಿತ್ತು. ಇನ್ನೊಂದು ಪ್ರಕರಣದಲ್ಲಿ ಚಿಂತಾಮಣಿಯ ನಾಗರಾಜ್‌ ರೆಡ್ಡಿ ಎನ್ನುವವರಿಗೆ ಪಿಡಿಒ ಕೆಲಸ ಕೊಡಿಸುವುದಾಗಿ ಹೇಳಿ 12 ಲಕ್ಷ ರೂ.ಗೆ ಡೀಲ್‌ ಕುದುರಿಸಿ ಆರು ಲಕ್ಷ ರೂ. ಮುಂಗಡವಾಗಿ ಪಡೆದಿದ್ದ. ಕೆಲಸ ಕೊಡಿಸಲು ಸಾಧ್ಯವಾಗದೆ ಹಣ ವಾಪಸ್‌ ನೀಡುವಾಗ ಹಣವೇ ಇಲ್ಲದ ಬ್ಯಾಂಕ್‌ನ ಚೆಕ್‌ ನೀಡಿದ್ದ. ಆ ಚೆಕ್ಕೂ ಬೌನ್ಸ್‌ ಆಗಿ ಚಿಂತಾಮಣಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೂಂದು ಪ್ರಕರಣದಲ್ಲಿ ರಾಜು ಲಕ್ಷ್ಮಣ ಜಾಧವ ಎನ್ನುವವರಿಗೆ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಜೊತೆಗಿರುವ ಫೋಟೋ ತೋರಿಸಿ ಕೆಇಬಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ 2 ಲಕ್ಷ ರೂ. ಮುಂಗಡ ಪಡೆದುಕೊಂಡಿದ್ದಾನೆ. ಮೋಸ ಹೋದ ಜಾಧವನಿಗೆ ಸರ್ಕಾರಿ ನೌಕರರ ಸಂಘದ ಹೆಸರು ಹೇಳಿಕೊಂಡು ಬೆದರಿಸಿದ್ದಾನೆ.

ಈ ರೀತಿ ಮಂಜುನಾಥನಿಂದ ಮೋಸ ಹೋದವರೆಲ್ಲಾ ನೌಕರರ ಸಂಘಕ್ಕೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯತ್ವದಿಂದಲೇ ಮಂಜುನಾಥನನ್ನು ವಜಾಗೊಳಿಸಲಾಗಿದೆ. ಅಲ್ಲದೇ ಅವರ ಮೇಲೆ ಕೆಸಿಎಸ್‌ಆರ್‌ ಹಾಗೂ ಸಿಸಿಎ ಕಂಡಕ್ಟ್ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿಕೊಂಡಿದ್ದಾರೆ.

ಇನ್ನೂ ಇಲಾಖೆ ವಿಚಾರಣೆ ನಡೆದಿಲ್ಲ: ಸರ್ಕಾರಿ ನೌಕರರ ವಿರುದಟಛಿ ಯಾವುದೇ ಆರೋಪ ಕೇಳಿ ಬಂದ ತಕ್ಷಣ ಸರ್ಕಾರ ಅವರ ವಿರುದಟಛಿ ಸಿಸಿಎ ನಿಯಮದ ಪ್ರಕಾರ ಇಲಾಖಾ ತನಿಖೆಗೆ ಆದೇಶಿಸಿ, ಸಂಬಂಧಪಟ್ಟ ಸಿಬ್ಬಂದಿಯನ್ನು ಅಮಾನತಿನಲ್ಲಿಡಲಾಗುತ್ತದೆ. ಆದರೆ  ಮಂಜುನಾಥ ಪ್ರಕರಣದಲ್ಲಿ ಮೇಲಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಅನುಮಾನಕ್ಕೆ ಕಾರಣವಾಗಿದೆ. ದೊಡ್ಡವರೊಂದಿಗಿನ ಫೋಟೊಗಳನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಕ್ಲರ್ಕ್‌ಗೆ ನಿಜವಾಗಲೂ ದೊಡ್ಡವರ ಆಶೀರ್ವಾದ ಇದೆಯಾ ಎನ್ನುವ ಮಾತು ಸರ್ಕಾರಿ ನೌಕರರ ವಲಯದಲ್ಲಿ ಚರ್ಚಿತವಾಗುತ್ತಿದೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.