Udayavni Special

ಅಭ್ಯರ್ಥಿ ಆಯ್ಕೆಗಾಗಿ ಮೈತ್ರಿ ಒಳಜಗಳ


Team Udayavani, May 11, 2019, 3:07 AM IST

bbmp3

ಬೆಂಗಳೂರು: ಬಿಬಿಎಂಪಿಯ ಎರಡು ವಾರ್ಡ್‌ಗಳ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮೈತ್ರಿ ಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ ನಡುವೆ ಒಳ ಜಗಳ ಉಂಟಾಗಿದ್ದು, ಇದರ ಲಾಭ ಪಡೆಯಲು ಬಿಜೆಪಿ ಮುಂದಾಗಿದೆ.

ಎರಡು ವಾರ್ಡ್‌ಗಳ ಪೈಕಿ ತಲಾ ಒಂದು ವಾರ್ಡ್‌ ಹಂಚಿಕೊಳ್ಳಲು ಕಾಂಗ್ರೆಸ್‌-ಜೆಡಿಎಸ್‌ ನಿರ್ಧರಿಸಿದ್ದು, ಎರಡೂ ವಾರ್ಡ್‌ಗಳಲ್ಲಿ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಸಲು ಯೋಜನೆ ರೂಪಿಸಿದ್ದವು. ಆದರೆ, ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದು ಮೈತ್ರಿ ಪಕ್ಷಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಕಾವೇರಿಪುರ ವಾರ್ಡ್‌ ಪಾಲಿಕೆ ಸದಸ್ಯೆ ರಮೀಳಾ ಉಮಾಶಂಕರ್‌ ಹಾಗೂ ಸಗಾಯಪುರ ವಾರ್ಡ್‌ ಪಾಲಿಕೆ ಸದಸ್ಯ ಏಳುಮಲೈ ಅಕಾಲಿಕ ನಿಧನದಿಂದ ತೆರವಾಗಿರುವ ಪಾಲಿಕೆ ಸದಸ್ಯರ ಸ್ಥಾನಕ್ಕೆ ಮೇ 29ರಂದು ಚುನಾವಣೆ ನಡೆಯಲಿದೆ. ಆ ಹಿನ್ನೆಲೆಯಲ್ಲಿ ಎರಡೂ ವಾರ್ಡ್‌ಗಳಲ್ಲಿ ಅನುಕಂಪದ ಆಧಾರದ ಮೇಲೆ ಮೃತ ಸದಸ್ಯರ ಕುಟುಂಬದವರಿಗೆ ಟಿಕೆಟ್‌ ನೀಡುವ ಬಗ್ಗೆ ಪರ-ವಿರುದ್ಧ ಚರ್ಚೆಗಳು ನಡೆಯುತ್ತಿವೆ.

ಇದರ ನಡುವೆ ಟಿಕೆಟ್‌ ತಮಗೇ ನೀಡಬೇಕೆಂದು ಪಾಲಿಕೆ ಮಾಜಿ ಸದಸ್ಯರು ಎರಡೂ ಪಕ್ಷಗಳ ಮುಖಂಡ ಬೆನ್ನುಬಿದ್ದಿದ್ದಾರೆ. ಒಂದೊಮ್ಮೆ ಪಕ್ಷದಿಂದ ಟಿಕೆಟ್‌ ದೊರೆಯದಿದ್ದರೆ ಪಕ್ಷೇತರರಾಗಿ ಸ್ಪರ್ಧಿಸಲು ಕೆಲವರು ಸಜ್ಜಾಗಿರುವುದು ಮೈತ್ರಿ ನಾಯಕರಿಗೆ ತಲೆನೋವಾಗಿದೆ.

ಕಾವೇರಿಪುರ ವಾರ್ಡ್‌ನಲ್ಲಿ ಸಹೋದರಿ ಜಯಲಕ್ಷ್ಮಮ್ಮ ಅವರಿಗೆ ಜೆಡಿಎಸ್‌ನಿಂದ ಟಿಕೆಟ್‌ ದೊರೆಯುತ್ತದೆ ಎಂದು ಮೃತ ರಮೀಳಾ ಪತಿ ಉಮಾಶಂಕರ್‌ ಭಾವಿಸಿದ್ದರು. ಆದರೆ, ಜೆಡಿಎಸ್‌ ವರಿಷ್ಠರು ಅಭ್ಯರ್ಥಿ ಆಯ್ಕೆ ಜವಾಬ್ದಾರಿಯನ್ನು ನಗರ ಘಟಕ ಅಧ್ಯಕ್ಷ ಪ್ರಕಾಶ್‌ಗೆ ವಹಿಸಿದ್ದು, ಯಾವುದೇ ಕಾರಣಕ್ಕೂ ಉಮಾಶಂಕರ್‌ ಸಂಬಂಧಿಕರಿಗೆ ಟಿಕೆಟ್‌ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಇದು ಉಮಾಶಂಕರ್‌-ಪ್ರಕಾಶ್‌ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದ್ದು, ಕಾವೇರಿಪುರ ಜೆಡಿಎಸ್‌ನಲ್ಲಿ ಒಳಜಗಳ ಆರಂಭವಾಗಿದೆ. ಅದನ್ನು ಬಂಡವಾಳ ಮಾಡಿಕೊಳ್ಳಲು ಯೋಜನೆ ರೂಪಿಸಿರುವ ಬಿಜೆಪಿ, ಪಾಲಿಕೆ ಮಾಜಿ ಸದಸ್ಯ ಚನ್ನಪ್ಪ ಅವರ ಪುತ್ರಿ ಪಲ್ಲವಿ ಅವರನ್ನು ಕಾವೇರಿಪುರದಿಂದ ಕಣಕ್ಕಿಳಿಸಲು ಯೋಜನೆ ರೂಪಿಸಿದೆ. ಜತೆಗೆ ಉಮಾಶಂಕರ್‌ರನ್ನು ಬಿಜೆಪಿಗೆ ಸೆಳೆದು, ಮೈತ್ರಿ ಆಡಳಿತಕ್ಕೆ ಹಿನ್ನಡೆ ಉಂಟು ಮಾಡಲು ಯೋಜಿಸಿದೆ.

ಸಗಾಯಪುರದಲ್ಲಿ ಅಸಮಾಧಾನ: ಏಳುಮಲೈ ಕಾಂಗ್ರೆಸ್‌ ಬೆಂಬಲಿತ ಸದಸ್ಯರಾಗಿದ್ದ ಹಿನ್ನೆಲೆಯಲ್ಲಿ ಉಪಚುಣಾವಣೆಯಲ್ಲಿ ಅವರ ಪತ್ನಿ ಲೀನಾ ಅವರಿಗೆ ಟಿಕೆಟ್‌ ನೀಡಲು ಕಾಂಗ್ರೆಸ್‌ ಮುಂದಾಗಿತ್ತು. ಆದರೆ, ಲೀನಾಗೆ ಟಿಕೆಟ್‌ ನೀಡಿದರೆ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಏಳುಮಲೈ ಸಹೋದರ ತಿಳಿಸಿದ ಹಿನ್ನೆಲೆಯಲ್ಲಿ, ಏಳುಮಲೈ ಸಹೋದರಿ ಪಳನಿಯಮ್ಮಾಳ್‌ಗೆ ಟಿಕೆಟ್‌ ನೀಡುವುದು ಬಹುತೇಕ ಖಚಿತವಾಗಿದೆ.

ಇದರ ನಡುವೆ ಏಳುಮಲೈ ಕುಟುಂಬದಲ್ಲಿ ಉಂಟಾಗಿರುವ ಗೊಂದಲಗಳನ್ನು ಲಾಭ ಮಾಡಿಕೊಳ್ಳಲು ಪಾಲಿಕೆ ಮಾಜಿ ಸದಸ್ಯೆ ಮಾರಿಮುತ್ತು ಮುಂದಾಗಿದ್ದು, ಜೆಡಿಎಸ್‌ನಿಂದ ಟಿಕೆಟ್‌ ದೊರೆಯದಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇನ್ನು ಪೌರಕಾರ್ಮಿಕರ ಮುಖಂಡರೊಬ್ಬರನ್ನು ಕಣಕ್ಕಿಳಿಸಲು ಬಿಜೆಪಿ ಯೋಜನೆ ರೂಪಿಸಿದೆ ಎನ್ನಲಾಗಿದೆ.

ಒಟ್ಟಾರೆ ಎರಡೂ ಪಕ್ಷಗಳಲ್ಲಿ ಉಂಟಾಗಿರುವ ಒಳಜಗಳದ ಲಾಭ ಪಡೆಯಲು ಸದ್ದಿಲ್ಲದೆ ಯೋಜನೆ ರೂಪಿಸಿರುವ ಬಿಜೆಪಿ, ಎರಡೂ ವಾರ್ಡ್‌ಗಳಲ್ಲಿ ಗೆದ್ದು, ಪಾಲಿಕೆಯಲ್ಲಿ ತನ್ನ ಬಲವನ್ನು 103ಕ್ಕೆ ಹೆಚ್ಚಿಸಿಕೊಳ್ಳುವ ತವಕದಲ್ಲಿದೆ. ಒಂದೊಮ್ಮೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದರೆ ಕೊನೆಯ ಅವಧಿಯ ಮೇಯರ್‌ ಚುನಾವಣೆಯಲ್ಲಿ ಮತ್ತೆ ಸಂಖ್ಯಾಬಲದ ಲೆಕ್ಕಾಚಾರ ಮುನ್ನೆಲೆಗೆ ಬರಲಿದೆ.

ಟಾಪ್ ನ್ಯೂಸ್

shambo shiva shankara kannada film

ಮಾತಿನ ಮನೆಯಲ್ಲಿ ‘ಶಂಭೋ ಶಿವಶಂಕರ’

07

ನಟಿ ಮಿನಿಶಾ ಮೇಲೆ ಹಣ ಕಳುವು ಆರೋಪ ಕೇಳಿ ಬಂದಿತ್ತು: ಅಷ್ಟಕ್ಕೂ ಅಂದು ನಡೆದಿದ್ದೇನು ?

ಕುಲಹಳ್ಳಿಯಲ್ಲಿ ಅಕ್ರಮ ಅಕ್ಕಿ ಸಂಗ್ರಹ ವಶ: ಬನಹಟ್ಟಿ ಪೊಲೀಸರಿಂದ ಇಬ್ಬರ ಬಂಧನ

ಕುಲಹಳ್ಳಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ವಶ: ಇಬ್ಬರ ಬಂಧನ

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ: ಡಿ.ಕೆ. ಶಿವಕುಮಾರ್

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ: ಡಿ.ಕೆ. ಶಿವಕುಮಾರ್

ಸಿ.ಪಿ.ಯೋಗೇಶ್ವರ್

ಪರೀಕ್ಷೆ ಬರೆದಿದ್ದೇವೆ, ಫಲಿತಾಂಶಕ್ಕೆ ಕಾಯೋಣ: ಬಿಜೆಪಿ ಬೆಳವಣಿಗೆ ಬಗ್ಗೆ ಯೋಗೇಶ್ವರ್

ಕಲಿಕಾ ನಿರಂತರತೆಗೆ ಕಾರ್ಯಪಡೆ ರಚನೆ: ಸಚಿವ ಸುರೇಶ್ ಕುಮಾರ್

ಕಲಿಕಾ ನಿರಂತರತೆಗೆ ಕಾರ್ಯಪಡೆ ರಚನೆ: ಸಚಿವ ಸುರೇಶ್ ಕುಮಾರ್

cpy

ಮುಂದಿನ ವಾರದಿಂದ ಪ್ರವಾಸೋದ್ಯಮಕ್ಕೆ ಅವಕಾಶ: ಸಚಿವ ಯೋಗೇಶ್ವರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rekha-kadiresh

ರೇಖಾ ಕದಿರೇಶ್ ಕೊಲೆ ಪ್ರಕರಣ: ಸಂಬಂಧಿಗಳಿಂದಲೇ ಕೊಲೆ! ಫೈರಿಂಗ್ ಮಾಡಿ ಇಬ್ಬರ ಬಂಧನ

ಯತರ3456543ತಯ

ಡ್ರಗ್ಸ್‌ ಪ್ರಕರಣ: ಟೆಕ್ಕಿ ಸೇರಿ ಐವರ ಬಂಧನ

ಎರತಯುಯತರೆಡಟಡೆರತಯ

ಮೂವರು ಮಕ್ಕಳ ಮೇಲೆ ಮೃಗೀಯ ವರ್ತನೆ

09

ಕೋವಿಡ್ : ರಾಜ್ಯದಲ್ಲಿಂದು 9768 ಸೋಂಕಿತರು ಗುಣಮುಖ; 3979 ಹೊಸ ಪ್ರಕರಣ ಪತ್ತೆ

ಬೆಂಗಳೂರು: ಹಾಡುಹಗಲೇ ಕಚೇರಿ ಮುಂದೆ ಮಾಜಿ ಕಾರ್ಪೊರೇಟರ್ ಭೀಕರ ಹತ್ಯೆ

ಬೆಂಗಳೂರು: ಹಾಡುಹಗಲೇ ಕಚೇರಿ ಮುಂದೆ ಮಾಜಿ ಕಾರ್ಪೊರೇಟರ್ ಭೀಕರ ಹತ್ಯೆ

MUST WATCH

udayavani youtube

4G ಜಮಾನದಲ್ಲೂ ನೆಟ್ವರ್ಕ್ ಇಲ್ಲದೇ ಮಡಾಮಕ್ಕಿ ಮಕ್ಕಳ ಪರದಾಟ!

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

ಹೊಸ ಸೇರ್ಪಡೆ

rಗಹಗರ್ಗನಬಗ್ನಹಗ್

ಸಚಿವರ ವಿರುದ್ದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ

shambo shiva shankara kannada film

ಮಾತಿನ ಮನೆಯಲ್ಲಿ ‘ಶಂಭೋ ಶಿವಶಂಕರ’

07

ನಟಿ ಮಿನಿಶಾ ಮೇಲೆ ಹಣ ಕಳುವು ಆರೋಪ ಕೇಳಿ ಬಂದಿತ್ತು: ಅಷ್ಟಕ್ಕೂ ಅಂದು ನಡೆದಿದ್ದೇನು ?

ಕುಲಹಳ್ಳಿಯಲ್ಲಿ ಅಕ್ರಮ ಅಕ್ಕಿ ಸಂಗ್ರಹ ವಶ: ಬನಹಟ್ಟಿ ಪೊಲೀಸರಿಂದ ಇಬ್ಬರ ಬಂಧನ

ಕುಲಹಳ್ಳಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ವಶ: ಇಬ್ಬರ ಬಂಧನ

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ: ಡಿ.ಕೆ. ಶಿವಕುಮಾರ್

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ: ಡಿ.ಕೆ. ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.