ಮಂಗಳಮುಖಿಯರ ಅನುದಾನ ಬಳಕೆಗೆ ಸಮಿತಿ

Team Udayavani, Mar 5, 2020, 3:05 AM IST

mangalamuki

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ಮಂಗಳಮುಖಿಯರಿಗೆ ಪಾಲಿಕೆ ಮೀಸಲಿಟ್ಟಿರುವ ಅನುದಾನ ಸರ್ಮಪಕವಾಗಿ ಬಳಸುವ ನಿಟ್ಟಿನಲ್ಲಿ ಸಮಿತಿ ರಚನೆ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ತಿಳಿಸಿದ್ದಾರೆ.

ಕರ್ನಾಟಕ ಟ್ರಾನ್ಸ್‌ಜೆಂಡರ್‌ ಪಾಲಿಸಿ -2017ರ ಅನುಷ್ಠಾನ ಹಾಗೂ ಪಾಲಿಕೆ ಪ್ರತಿವರ್ಷ ಮಂಗಳ ಮುಖಿಯರಿಗೆ ಮೀಸಲಿಡುತ್ತಿರುವ ಅನುದಾನದ ಬಳಕೆಗೆ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತ ಬುಧವಾರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಮಂಗಳಮುಖಿ ಸಂಘಟನೆಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ಅವರು, ಮುಂಗಳಮುಖಿಯರ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಅವರ ಅನುದಾನ ಅವರಿಗೆ ತಲುಪುವಂತೆ ಮಾಡುವ ಉದ್ದೇಶದಿಂದ ಪಾಲಿಕೆ ವತಿಯಿಂದ ಮಂಗಳಮುಖಿಯರ ಸಮಿತಿ ರಚನೆ ಮಾಡಲಾಗುವುದು.

ಸಮಿತಿಯಲ್ಲಿ ಆಯುಕ್ತರು, ಅಧಿಕಾರಿಗಳು ಹಾಗೂ ಮಂಗಳಮುಖಿಯರ ಪರವಾಗಿ ಸೇವೆ ಸಲ್ಲಿಸುತ್ತಿರುವ ಸಂಘಸಂಸ್ಥೆಗಳ ಸದಸ್ಯರು ಇರಲಿದ್ದಾರೆ. ಈ ಸಮಿತಿಯ ಮೂಲಕ ಯೋಜನೆ ಅನುಷ್ಠಾನ ಮಾಡಲಾಗುವುದು ಎಂದರು. ಮಂಗಳಮುಖಿಯರಿಗೆ ವಸತಿ, ಸ್ವ-ಉದ್ಯೋಗ ಹಾಗೂ ಸಬಲೀಕರಣಕ್ಕೆ ಪೂರಕವಾದ ಯೋಜನೆಗಳನ್ನು ರೂಪಿಸುವಂತೆ ಪ್ರತಿನಿಧಿಗಳು ಸಲಹೆ ನೀಡಿದ್ದಾರೆ.

ಮುಂಗಳಮುಖಿಯರಿಗೆ ಕೌಶಲ್ಯಾಭಿವೃದ್ಧಿ ಯೋಜನೆಗಳನ್ನು ರೂಪಿಸಿಕೊಳ್ಳುವ ಬಗ್ಗೆಯೂ ಚಿಂತನೆ ಇದೆ. ಅವರ ಪ್ರತಿನಿಧಿಗಳು ನೀಡಿರುವ ಸಲಹೆ ಮತ್ತು ಅವರ ಬೇಡಿಕೆಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಯೋಜನೆ ಜಾರಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಈ ವೇಳೆ ಮಂಗಳಮುಖಿಯರ ತಂಡ ಬಿಬಿಎಂಪಿ ಆಯುಕ್ತರಿಗೆ “ಹಿಯರಿಂಗ್‌ ದಿ ವಾಯ್ಸ’ ಪುಸ್ತಕ ನೀಡಿದರು.

ಉದಯವಾಣಿ ವಿಶೇಷ ವರದಿ ಪ್ರಕಟಿಸಿತ್ತು: ಪಾಲಿಕೆ ವ್ಯಾಪ್ತಿಯಲ್ಲಿನ ವಾಸವಿರುವ ಮಂಗಳಮುಖಿಯರ ಶ್ರೇಯೋಭಿವೃದ್ಧಿ ಹಾಗೂ ಅವರ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಕಳೆದ ಮೂರು ವರ್ಷಗಳಿಂದ ಪಾಲಿಕೆಯ ಬಜೆಟ್‌ನಲ್ಲಿ ತಲಾ ಒಂದು ಕೋಟಿ ರೂ.ಅನುದಾನ ಮೀಸಲಿರಿಸುತ್ತಿದೆ.

ಆದರೆ, ಇದರಲ್ಲಿ ನಯಾ ಪೈಸೆಯೂ ಫ‌ಲಾನುಭವಿಗಳನ್ನು ತಲುಪುತ್ತಿಲ್ಲ ಎನ್ನುವ ಬಗ್ಗೆ ಉದಯವಾಣಿ ಫೆ.21ರಂದು “ಮಂಗಳಮುಖಿಯರ ಕೈಗೆಟುಕದ 3ಕೋಟಿ!’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಉದಯವಾಣಿಯೊಂದಿಗೆ ಮಾತನಾಡಿದ್ದ ಆಯುಕ್ತರು ಮಂಗಳಮುಖಿ ಸಂಘಟನೆ ಸದಸ್ಯರೊಂದಿಗೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.