ದೂರದಿಂದ ಬಂದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಸಮಸ್ಯೆ

Team Udayavani, Mar 24, 2020, 11:57 AM IST

ದೂರದಿಂದ ಬಂದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಸಮಸ್ಯೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್ 19 ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿನ 200 ಗ್ರಂಥಾಲಯಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವವರಿಗೆ ತೊಂದರೆಯಾಗಿದೆ. ಇನ್ನೊಂದೆಡೆ ಕೋಚಿಂಗ್‌ ಸೆಂಟರ್‌ಗಳು ಬಂದ್‌ ಆಗಿದ್ದು, ದೂರದ ಊರಿನಿಂದ ವ್ಯಾಸಂಗಕ್ಕಾಗಿ ಬಂದವರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.

ಏಪ್ರಿಲ್‌, ಮೇ, ಜೂನ್‌ ತಿಂಗಳಲ್ಲಿ ಕೆ- ಸೆಟ್‌, ಪ್ರಥಮ, ದ್ವಿತೀಯ ದರ್ಜೆ ಸಹಾಯಕ ಹುದ್ದೆ, ಶಿಕ್ಷಕರ ಅರ್ಹತಾ ಪರೀಕ್ಷೆ, ಪೊಲೀಸ್‌ ಕಾನ್ಸ್‌ ಸ್ಟೇಬಲ್‌ ಹುದ್ದೆ ನೇಮಕಾತಿ, ಕೆಎಎಸ್‌ ಪರೀಕ್ಷೆ ಸೇರಿದಂತೆ ಹಲವು ಪರೀಕ್ಷೆಗಳಿವೆ. ತರಬೇತಿಗಾಗಿ ಬಳ್ಳಾರಿ, ಕೊಪ್ಪಳ, ಬೀದರ್‌, ಗದಗ, ಬೆಳಗಾವಿ, ಬಾಗಲಕೋಟೆ, ಚಿತ್ರದುರ್ಗ ಸೇರಿದಂತೆ ನಾನಾ ಜಿಲ್ಲೆಗಳಿಂದ ಆಗಮಿಸಿ ಕೋಚಿಂಗ್‌ ಅಕಾಡೆಮಿಗಳಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಪರೀಕ್ಷಾರ್ಥಿಗಳು ಅತಿ ಹೆಚ್ಚು ಸಮಯವನ್ನು ಸಮೀಪದ ಗ್ರಂಥಾಲಯದಲ್ಲಿ ಓದುವುದಕ್ಕೆ ಮೀಸಲಿಟ್ಟಿದ್ದಾರೆ. ಆದರೀಗ ವೈರಾಣು ಭೀತಿ ಗ್ರಂಥಾಲಯಗಳು, ಕೋಚಿಂಗ್‌ ಸೆಂಟರ್‌ ಬಂದ್‌ ಆಗಿದ್ದು, ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ.

ಪಿಜಿಗಳು ಖಾಲಿ ಖಾಲಿ: ವಿವಿಧ ಊರುಗಳಿಂದ ಬರುವ ಸ್ಪರ್ಧಾಕಾಂಕ್ಷಿಗಳು ಪಿಜಿಗಳಲ್ಲಿ ನೆಲೆಸುವುದು ಸಾಮಾನ್ಯ. ವಿಜಯನಗರ ಭಾಗದ 100ಕ್ಕೂ ಅಧಿಕ ಪಿ.ಜಿ.ಗಳಲ್ಲಿ ಸಾವಿರಾರು ಪರೀಕ್ಷಾರ್ಥಿಗಳಿದ್ದರು. ಕೋವಿಡ್ 19 ಭೀತಿಯಿಂದ ತಾತ್ಕಲಿಕವಾಗಿ ಪಿಜಿಗಳನ್ನು ಮುಚ್ಚಬೇಕೆಂಬ ಆದೇಶದ ಹಿನ್ನೆಲೆ ಕೆಲವರು ಊರಿಗೆ ತೆರಳಿದ್ದಾರೆ. ಗ್ರಂಥಾಲಯಕ್ಕೆ ಪ್ರವೇಶವಿಲ್ಲದೆ ಸಮಸ್ಯೆ ಎದುರಾಗಿದೆ ಎನ್ನುತ್ತಾರೆ ವಿದ್ಯಾರ್ಥಿಗಳು.

80ಕ್ಕೂ ಅಧಿಕ ಕೋಚಿಂಗ್‌ ಸೆಂಟರ್‌ ಬಂದ್‌: ಮಲ್ಲೇಶ್ವರ, ಜಯನಗರ, ವಿಜಯನಗರ ಸೇರಿದಂತೆ ಹಲವೆಡೆ 80ಕ್ಕೂ ಅಧಿಕ ಕೋಚಿಂಗ್‌ ಸೆಂಟರ್‌ ಗಳಿದ್ದು, ಒಂದು ವಾರದಿಂದ ತರಗತಿಗಳನ್ನು ಬಂದ್‌ ಮಾಡಲಾಗಿದೆ. ಪೊಲೀಸ್‌ ಕಾನ್ಸ್‌ಸ್ಟೆಬಲ್‌, ಎಸ್‌ಐ, ಎಫ್ಡಿಎ, ಕೆಎಎಸ್‌ ನ ಹೊಸ ಬ್ಯಾಚ್‌ ಗಳು ಆರಂಭವಾಗಿ ಕೇವಲ 15 ದಿನಗಳಲ್ಲಿಯೇ ಕೋವಿಡ್ 19 ಭೀತಿಯಿಂದ ತರಗತಿಗಳನ್ನು ರದ್ದಾಗಿದೆ. ಉ.ಕರ್ನಾಟಕ ಭಾಗದ ಕೆಲವರು ಊರುಗಳಿಗೆ ವಾಪಾಸ್ಸಾಗಿದ್ದಾರೆ ಎಂದು ಉಜ್ವಲ ಅಕಾಡೆಮಿನಿರ್ದೇಶಕ ಕೆ.ಯು.ಮಂಜುನಾಥ ತಿಳಿಸಿದರು.

ಗ್ರಂಥಾಲಯಗಳಲ್ಲಿ ಶೇ. 5ರಷ್ಟೂ ಜನರಿಲ್ಲ! :  ಬೆಂಗಳೂರಿನಲ್ಲಿ 200 ಗ್ರಂಥಾಲಯಗಳಿದ್ದು, ಪ್ರತಿದಿನ ಸುಮಾರು 25 ಸಾವಿರಕ್ಕೂ ಅಧಿಕ ಜನರು ಭೇಟಿ ನೀಡುತ್ತಾರೆ. ಅದರಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವವರೇ ಹೆಚ್ಚು. ಇದರಲ್ಲಿ ಪ್ರತಿದಿನ 2 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ. ಆದರೀಗ ಪುಸ್ತಕ ಪಡೆಯುವವರು, ಹಿಂದಿರುಗಿಸುವವರು ಬರುತ್ತಿಲ್ಲ. ಗ್ರಂಥಾಲಯದಲ್ಲಿ ಶೇ. 5ರಷ್ಟು ಮಂದಿ ಕೂಡ ಬರುತ್ತಿಲ್ಲ ಎಂದು ಗ್ರಂಥಾಲಯದ ಅಧಿಕಾರಿ ತಿಳಿಸಿದ್ದಾರೆ.

ಇನ್ನೆರಡು ತಿಂಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಆರಂಭವಾಗಲಿವೆ. ಸೋಂಕು ಹಿನ್ನೆಲೆ ತರಗತಿ ಬಂದ್‌ ಆಗಿವೆ. ಕೆಲ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಿದ್ದು, ಇನ್ನೂ ಕೆಲವರು ಬೆಂಗಳೂರಿನಲ್ಲಿಯೇ ಇದ್ದಾರೆ. ಇವರು ಓದಲು ಗ್ರಂಥಾಲಯಗಳ ಪ್ರವೇಶವಿಲ್ಲದೆ ತೊಡಕಾಗಿದ್ದು, ಪರೀಕ್ಷೆಯನ್ನು ಮುಂದೂಡಬೇಕಿದೆ.  ಕೆ.ಯು.ಮಂಜುನಾಥ, ಉಜ್ವಲ ಅಕಾಡೆಮಿ ನಿರ್ದೇಶಕ

ಸರ್ಕಾರದ ಸೂಚನೆಯಲ್ಲಿ ಗ್ರಂಥಾಲಯಗಳ ಪ್ರವೇಶ ನಿಷೇಧಿಸಿ, ಪುಸ್ತಕ ಎರವಲು ಪಡೆಯುವ ಅವಕಾಶ ಮುಂದುವರಿಸಲಾಗಿದೆ. ಹಂಪಿನಗರ, ವಿಜಯನಗರದ ಗ್ರಂಥಾಲಯಗಳು ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ನಡೆಸುವವರ ಮನೆಯಾಗಿ ಮಾರ್ಪಟ್ಟಿದ್ದವು. ಈಗ ದೂರ ದೂರದಲ್ಲಿ ಕುಳಿತು ಓದಲು ಅವಕಾಶ ನೀಡಲು ಚಿಂತಿಸಲಾಗಿದೆ. ಸತೀಶ್‌ ಹೊಸಮನಿ, ಗ್ರಂಥಾಲಯ ಇಲಾಖೆ ನಿರ್ದೇಶಕ

-ಮಂಜುನಾಥ ಗಂಗಾವತಿ

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.