ಗೈರಾದ ಶಾಸಕರ ಅನರ್ಹತೆಗೆ ದೂರು

Team Udayavani, Jul 25, 2019, 3:00 AM IST

Udayavani Kannada Newspaper

ಬೆಂಗಳೂರು: ವಿಶ್ವಾಸ ಮತ ಯಾಚನೆಗೆ ಹಾಜರಾಗುವಂತೆ ವಿಪ್‌ ಜಾರಿ ಮಾಡಿದ್ದರೂ. ರಾಜೀನಾಮೆ ಸಲ್ಲಿಸಿರುವ ಹನ್ನೆರಡು ಶಾಸಕರು ಹಾಗೂ ರಾಜೀನಾಮೆ ಸಲ್ಲಿಸದೇ ಗೈರು ಹಾಜರಾಗಿರುವ ಶ್ರೀಮಂತ ಪಾಟೀಲ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಸ್ಪೀಕರ್‌ಗೆ ಮತ್ತೂಂದು ದೂರು ಸಲ್ಲಿಸಿದ್ದಾರೆ.

ವಿಧಾನಸಭೆಯ ಅಧಿವೇಶನದಲ್ಲಿ ಪ್ರತಿ ದಿನವೂ ಪಾಲ್ಗೊಳ್ಳುವಂತೆ ವಿಪ್‌ ಜಾರಿಗೊಳಿಸಲಾಗಿತ್ತು. ಆದರೂ. ಶಾಸಕರು ಹಾಜರಾಗದೇ ಸುಪ್ರೀಂ ಕೋರ್ಟ್‌ನಿಂದ ವಿನಾಯಿತಿ ಪಡೆಯುವ ಪ್ರಯತ್ನ ನಡೆಸಿದ್ದಾರೆ. ಆ ಕಾರಣದಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆಯ ದಿನ ಕಡ್ಡಾಯವಾಗಿ ಹಾಜರಿರುವಂತೆ ಎಲ್ಲ ಶಾಸಕರಿಗೆ ಮತ್ತೂಂದು ಬಾರಿ ವಿಪ್‌ ಜಾರಿಗೊಳಿಸಲಾಗಿತ್ತು. ಆದರೂ ರಾಜೀನಾಮೆ ಸಲ್ಲಿಸಿರುವ ಕಾಂಗ್ರೆಸ್‌ನ ಯಾವ ಶಾಸಕರೂ ಸದನಕ್ಕೆ ಹಾಜರಾಗಿರಲಿಲ್ಲ. ಅವರೊಂದಿಗೆ ರಾಜೀನಾಮೆ ಸಲ್ಲಿಸದೇ ಇರುವ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್‌ ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಕೂಡ ಗೈರು ಹಾಜರಾಗಿದ್ದರು.

ಆದರೆ, ಬಿ.ನಾಗೇಂದ್ರ ಹೃದಯ ಸಂಬಂಧಿ ಕಾಯಿಲೆಯಿಂದ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಅವರನ್ನು ಪಕ್ಷದ ನಾಯಕರು ನೇರವಾಗಿ ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು ಅವರ ವಿರುದ್ಧ ಯಾವುದೇ ಕ್ರಮಕ್ಕೆ ದೂರು ಸಲ್ಲಿಸಿಲ್ಲ ಎಂದು ತಿಳಿದು ಬಂದಿದೆ. ಶ್ರೀಮಂತ ಪಾಟೀಲ್‌ ಪಕ್ಷ ನೀಡಿರುವ ವಿಪ್‌ ಪಡೆದುಕೊಂಡು ಸ್ವೀಕೃತಿ ಪತ್ರಕ್ಕೂ ಸಹಿ ಹಾಕಿರುವುದರಿಂದ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಅವರ ಶಾಸಕತ್ವವನ್ನೂ ಅನರ್ಹಗೊಳಿಸುವಂತೆ ಕಾಂಗ್ರೆಸ್‌ ನಾಯಕರು ಸ್ಪೀಕರ್‌ ರಮೇಶ್‌ ಕುಮಾರ್‌ಗೆ ದೂರು ಸಲ್ಲಿಸಿದ್ದಾರೆ.

ಬಿಜೆಪಿಯವರು ಚುನಾಯಿತ ಸರ್ಕಾರವನ್ನು ಉರುಳಿಸಿದೆ. ನಮ್ಮ ಶಾಸಕರನ್ನು ಕರೆದುಕೊಂಡು ಮುಂಬೈನಲ್ಲಿಟ್ಟು ವಾಮ ಮಾರ್ಗದಲ್ಲಿ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ನಾವು ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸಲು ನಿರ್ಧರಿಸಿದ್ದೇವೆ.
-ಈಶ್ವರ್‌ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ.

ಬಿಜೆಪಿಯವರಿಗೆ ಸರ್ಕಾರ ರಚನೆಗೆ ರಾಜ್ಯಪಾಲರು ಹಾಗೂ ಅವರ ವರಿಷ್ಠರು ಅವಕಾಶ ಕೊಟ್ಟಿಲ್ಲ ಎಂಬ ಮಾಹಿತಿ ಇದೆ. ಮೈತ್ರಿ ಪಕ್ಷಗಳು ಎರಡನೇ ಬಾರಿಗೆ ಸರ್ಕಾರ ರಚನೆಗೆ ಅವಕಾಶ ನೀಡುವ ಬಗ್ಗೆ ಮಾಹಿತಿ ಇಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕಾದರೆ, ಮೈತ್ರಿ ಅನಿವಾರ್ಯ ಇದೆ.
-ಸತೀಶ್‌ ಜಾರಕಿಹೊಳಿ, ಕಾಂಗ್ರೆಸ್‌ ನಾಯಕ

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.