ಡಿಕೆಶಿ ವಿರುದ್ಧ ದೂರು ಕ್ರಮಬದ್ಧವಾಗಿದೆ: ಐಟಿ

Team Udayavani, Jun 5, 2019, 3:05 AM IST

ಬೆಂಗಳೂರು: ದೆಹಲಿಯ ಫ್ಲ್ಯಾಟ್‌ನಲ್ಲಿ ದೊರೆತ ಹಣ ಹಾಗೂ ಇತರ ವಸ್ತುಗಳಿಗೆ ಡಿ.ಕೆ.ಶಿವಕುಮಾರ್‌ ಸೇರಿದಂತೆ ಇತರ ಆರೋಪಿತರು ಸಮರ್ಪಕ ದಾಖಲೆ ಸಲ್ಲಿಸಿಲ್ಲ. ಹೀಗಾಗಿ, ತೆರಿಗೆ ವಂಚನೆ ಸಂಬಂಧ ದೂರು ದಾಖಲಿಸಿರುವುದು ಸರಿಯಾಗಿದೆ ಎಂದು ಆದಾಯ ತೆರಿಗೆ ಇಲಾಖೆಯು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದೆ.

ಆದಾಯ ತೆರಿಗೆ ವಂಚನೆ ಆರೋಪ ಸಂಬಂಧ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹಾಗೂ ಮತ್ತಿತರರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ನಡೆಸಿತು.

ಆದಾಯ ತೆರಿಗೆ ಇಲಾಖೆ ಪರ ವಾದ ಮಂಡಿಸಿದ ಸಾಲಿಸಿಟರ್‌ ಜನರಲ್‌ ಪ್ರಭುಲಿಂಗ ನಾವಡಗಿ, ಐಟಿ ದಾಳಿ ವೇಳೆ ವಶಪಡಿಸಿಕೊಂಡ ಹಣ ಅಥವಾ ಇನ್ನಿತರ ವಸ್ತುಗಳಿಗೆ ಸಂಬಂಧಿಸಿದಂತೆ ಆರೋಪಿತರು 120 ದಿನಗಳ ಒಳಗೆ ದಾಖಲೆ ಸಲ್ಲಿಸಬೇಕು.

ಆದರೆ, ಡಿ.ಕೆ.ಶಿವಕುಮಾರ್‌ ಅವರು ಮತ್ತು ಸಹ ಆರೋಪಿಗಳು ದಾಖಲೆ ಸಲ್ಲಿಸಿಲ್ಲ. ಹೀಗಾಗಿ, ದೂರು ದಾಖಲಿಸಿರುವುದು ಕ್ರಮಬದ್ಧವಾಗಿದೆ. ಜತೆಗೆ ಆರ್ಥಿಕ ವರ್ಷ ಪೂರ್ಣಗೊಳ್ಳುವ ಮುನ್ನವೇ ದಾಳಿ ನಡೆಸುವ ಅಧಿಕಾರವಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ವಿಚಾರಣೆಗೆ ಸಚಿವ ಡಿ.ಕೆ.ಶಿವಕುಮಾರ್‌, ಇತರ ಆರೋಪಿಗಳಾದ ರಾಜೇಂದ್ರ , ಆಂಜನೇಯ, ಸುನೀಲ್‌ ಶರ್ಮಾ ಹಾಜರಿದ್ದರು. ಪ್ರಕರಣದ ವಿಚಾರಣೆಯನ್ನು ಜೂನ್‌ 7ಕ್ಕೆ ನ್ಯಾಯಾಲಯ ಮುಂದೂಡಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಪಾಲಿಕೆಯ 12 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ ಕೊನೆಗೂ ಶನಿವಾರ ನಡೆಯಿತು. ಸ್ಥಾನ ವಂಚಿತ ಕೆಲವು ಸದಸ್ಯರ ಅಸಮಾಧಾನ, ಆಕ್ರೋಶ, ಕಣ್ಣೀರಿನ ನಡುವೆಯೇ ಎಲ್ಲ...

  • ಬೆಂಗಳೂರು: ಒಳಚರಂಡಿ ಸಂಪರ್ಕ ಪಡೆಯದೇ ಅನಧಿಕೃತವಾಗಿ ಮಳೆನೀರು ಕಾಲುವೆಗೆ ಶೌಚಾಲಯ ಸೇರಿ ಮನೆಯ ತ್ಯಾಜ್ಯ ನೀರು ಹರಿಯಬಿಟ್ಟಿದ್ದೀರಾ? ಹಾಗಾದರೆ ನಿಮ್ಮ ಮನೆ ವಿದ್ಯುತ್‌...

  • ಬೆಂಗಳೂರು: "ನಾಟಕ ಕಂಪನಿ ನಡೆಸಲು ಸಾಲ ಕೊಟ್ಟವರು ಹಾರ್ಮೋನಿಯಂ ತೆಗೆದುಕೊಂಡು ಹೋಗುವಾಗ ತಾಯಿಯೊಬ್ಬರು ತನ್ನ ತಾಳಿ ಕೊಟ್ಟು ಸಾಲ ತೀರಿಸಿದ್ದರಿಂದಲೇ ಇಂದು...

  • ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ ಹಿನ್ನೆಲೆಯಲ್ಲಿ ನಗರದ ಬಹುತೇಕ ಪ್ರದೇಶಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು. ಇದೇ ಮೊದಲ ಬಾರಿಗೆ ಕೇಂದ್ರ...

  • ಬೆಂಗಳೂರು: ಸಮಾಜ ಘಾತುಕ ಶಕ್ತಿಗಳಿಗೆ ಬೆಂಬಲ ನೀಡಿದ ಆರೋಪಕ್ಕೆ ಸಿಲುಕಿರುವ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯ್‌ (ಪಿಎಫ್ಐ) ಹಾಗೂ ಎಸ್‌ಡಿಪಿಐ ಸಂಘಟನೆಗಳ ಮೇಲೆ...

ಹೊಸ ಸೇರ್ಪಡೆ