ಮಹಿಳಾ ಆಯೋಗಕ್ಕೆ ಶೃತಿ ದೂರು
Team Udayavani, Nov 15, 2018, 11:22 AM IST
ಬೆಂಗಳೂರು: ನಟ ಅರ್ಜುನ್ ಸರ್ಜಾ ಬೆಂಬಲಿಗರು ಹಾಗೂ ಸಂಬಂಧಿಕರು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಪದ ಬಳಸಿ ತಮ್ಮನ್ನು ನಿಂದಿಸುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ನಟಿ ಶೃತಿ ಹರಿಹರನ್ ರಾಜ್ಯ ಮಹಿಳಾ ಆಯೋಗಕ್ಕೆ ಬುಧವಾರ ದೂರು ನೀಡಿದ್ದಾರೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ, ಶೃತಿ ಹರಿಹರನ್ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು ಆಯೋಗ ಈಗಾಗಲೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿತ್ತು. ಇದೀಗ, ಅರ್ಜುನ್ ಸರ್ಜಾ ಬೆಂಬಲಿಗರು ಮತ್ತು ಸಂಬಂಧಿಕರು ಫೇಸ್ಬುಕ್, ವಾಟ್ಸ್ಆ್ಯಪ್ ಮೂಲಕ ಅತೀ ಕೆಟ್ಟ ಪದಗಳಿಂದ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿ, ಸುಮಾರು 150 ಸಂದೇಶಗಳ ಪ್ರತಿಗಳನ್ನು ಖುದ್ದು ಶೃತಿ ಅವರೇ ನೀಡಿದ್ದಾರೆ. ಜತೆಗೆ ಸಿನಿಮಾ ಕ್ಷೇತ್ರದಲ್ಲಿ ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆಯೂ ಹೇಳಿಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಸೈಬರ್ ಕ್ರೈಂ ಪೊಲೀಸರಿಗೆ ಸೂಚಿಸುತ್ತೇನೆ. ಅಲ್ಲದೆ, ಪ್ರಕರಣ ಕೋರ್ಟ್ನಲ್ಲಿ ಇರುವುದರಿಂದ ಮುಂದಿನ ಯಾವುದೇ ಕ್ರಮಕ್ಕೂ ಕೋರ್ಟ್ ಸೂಚನೆ ಅಗತ್ಯವಿದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ