ವಲಸಿಗರ ತೆರವಿಗೆ ಚರ್ಚಿಸಿ ತೀರ್ಮಾನ


Team Udayavani, Dec 5, 2018, 11:50 AM IST

gangambike-mayor.jpg

ಬೆಂಗಳೂರು: ಮಹದೇವಪುರ ವಲಯದ ತೂಬರಹಳ್ಳಿ ಹಾಗೂ ಕುಂದಲಹಳ್ಳಿ ಬಳಿ ಖಾಸಗಿ ಜಮೀನಿನಲ್ಲಿ ವಾಸಿಸುತ್ತಿರುವ ವಲಸೆ ಕಾರ್ಮಿಕರ ಸಮಸ್ಯೆ ಹಾಗೂ ಅವರ ಗುಡಿಸಲು ತೆರವು ಕಾರ್ಯ ಕುರಿತು ಉಪಮುಖ್ಯಮಂತ್ರಿಗಳು, ಸ್ಥಳೀಯ ಶಾಸಕರು ಹಾಗೂ ಪಾಲಿಕೆ ಅಧಿಕಾರಿಗಳ ಜತೆಗೆ ಸಭೆ ನಡೆಸಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾನೂನು ಬದ್ಧವಾಗಿ ಕೈಗೊಳ್ಳಲಾಗುವುದು ಎಂದು ಮೇಯರ್‌ ಗಂಗಾಂಬಿಕೆ ತಿಳಿಸಿದರು.

ಇಲ್ಲಿನ ಬಹುತೇಕರು ಚಿಂದಿ ಆಯುವ, ಕಟ್ಟಡ ಕಟ್ಟುವ ಕೆಲಸ ಮಾಡಿಕೊಂಡು ಹತ್ತಾರು ವರ್ಷಗಳಿಂದ ಖಾಸಗಿ ಜಮೀನಿನು ಒಂದರಲ್ಲಿ ಬಾಡಿಗೆ ನೀಡಿ ಗುಡಿಸಲು ಹಾಕಿಕೊಂಡು ವಾಸಮಾಡುತ್ತಿದ್ದಾರೆ. ಇವರು ಕಸದ ರಾಶಿ ಹಾಕುತ್ತಾರೆ. ಸುತ್ತಮುತ್ತಲ ಪ್ರದೇಶವನ್ನು ಮಲಿನ ಮಾಡುತ್ತಿದ್ದಾರೆ. ಜತೆಗೆ ಅಕ್ರಮ ಬಾಂಗ್ಲಾ ವಾಸಿಗಳಿದ್ದಾರೆ ಎಂಬಿತ್ಯಾದಿ ದೂರುಗಳು ಸ್ಥಳೀಯ ಅಪಾರ್ಟ್‌ಮೆಂಟ್‌ ನಿವಾಸಿಗಳಿಂದ ಪಾಲಿಕೆ ಅಧಿಕಾರಿಗಳಿಗೆ ಬಂದಿದ್ದವು.

ಈ ಹಿನ್ನೆಲೆಯಲ್ಲಿ ಪಾಲಿಕೆಯ ಮಹದೇವಪುರ ವಲಯದ ಅಧಿಕಾರಿಗಳು ಬೇಟಿ ನೀಡಿ ಜಾಗ ಖಾಲಿ ಮಾಡುವಂತೆ ಸಾಕಷ್ಟು ಬಾರಿ ಸೂಚಿಸಿದ್ದರು. ಆದರೆ, ನಿವಾಸಿಗಳು ಮಾತು ಕೇಳದ ಹಿನ್ನೆಲೆ ಪಾಲಿಕೆ ಅಧಿಕಾರಿಗಳು ಸೋಮವಾರ ಬೆಳಗ್ಗೆ ಪೊಲೀಸ್‌ ಸಿಬ್ಬಂದಿ ಹಾಗೂ ಜೆಸಿಬಿಗಳೊಂದಿಗೆ ಸ್ಥಳಕ್ಕೆ ತೆರಳಿದ್ದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ಅಲ್ಲಿನ ನಿವಾಸಿಗಳು ಧರಣಿ ಕುಳಿತು ತೆರವು ಕಾರ್ಯಾಚರಣೆ ನಡೆಸಲು ಅವಕಾಶ ನೀಡಿರಲಿಲ್ಲ. ಇವರಿಗೆ ಸರ್ಕಾರೇತರ ಸಂಸ್ಥೆಗಳು, ಮಾನವ ಹಕ್ಕು ಹೋರಾಟ ಸಂಘಟನೆಗಳು ಬೆಂಬಲ ಸೂಚಿಸಿದರು. ಹೀಗಾಗಿ, ಪಾಲಿಕೆ ಅಧಿಕಾರಿಗಳು ಮೂರು ದಿನ ಕಾಲಾವಕಾಶ ನೀಡಿದ್ದರು.

ಸರ್ಕಾರದೊಂದಿಗೆ ಚರ್ಚೆ: ಕುಂದಲಹಳ್ಳಿ ಬಳಿ ಖಾಸಗಿ ಜಮೀನಿನಲ್ಲಿ ನೆಲೆಸಿರುವವರು ಬಾಂಗ್ಲಾ ದೇಶದಿಂದ ಬಂದ ಅಕ್ರಮ ವಲಸಿಗರೇ ಎಂಬ ಕುರಿತು ಹಾಗೂ ಸ್ಥಳೀಯರ ಆ ನಿರಾಶ್ರಿತರ ಬಗ್ಗೆ ನೀಡಿರುವ ದೂರುಗಳ ಬಗ್ಗೆ ತನಿಖೆ ನಡಿಸಿ ಮೂರ್‍ನಾಲ್ಕು ದಿನದಲ್ಲಿ ವರದಿ ಕೊಡುವಂತೆ ಮಹದೇವಪುರ ವಲಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ಆನಂತರ ಸರ್ಕಾರದ ಜತೆಗೆ ಚರ್ಚಿಸಿ ತೆರವು ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸದ್ಯ ಸ್ಥಾಯಿ ಸಮಿತಿಗಳ ಚುನಾವಣೆಯ ಒತ್ತಡದಲ್ಲಿದ್ದು, ಮುಂದಿನ 2 -3 ದಿನಗಳಲ್ಲಿ ಆ ಸ್ಥಳಕ್ಕೆ ಉಪಮುಖ್ಯಮಂತ್ರಿ ಹಾಗೂ ಆಯುಕ್ತರೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಮೇಯರ್‌ ಗಂಗಾಂಬಿಕೆ ತಿಳಿಸಿದರು.

ಟಾಪ್ ನ್ಯೂಸ್

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

siddaramaiah

ಯಾವ ಸಾಧನೆಗೆ 100 ಕೋಟಿ ಲಸಿಕೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ?

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

PM Narendra Modi to address nation at 10 am today

ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

rwytju11111111111

ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಂದ ಪ್ರಶಸ್ತಿ ಪ್ರದಾನ

ಟಿವಿಎಸ್‌ ಮೋಟಾರ್ಸ್‌ಗೆ ಗ್ರೀನ್‌ ಎನರ್ಜಿ ಅವಾರ್ಡ್‌

ಭಕ್ತ, ಕಳವು, udayavanipaper, kannadanews,

ಭಕ್ತರ ಸೋಗಿನಲ್ಲಿ ತೆರಳಿ ಕಳವು

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

free school

ಉಚಿತ ಪಾಠ-ಪ್ರವಚನ ತರಗತಿಗಳ ಉದ್ಘಾಟನೆ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಂದ ಪ್ರಶಸ್ತಿ ಪ್ರದಾನ

ಟಿವಿಎಸ್‌ ಮೋಟಾರ್ಸ್‌ಗೆ ಗ್ರೀನ್‌ ಎನರ್ಜಿ ಅವಾರ್ಡ್‌

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

3

ಪ್ರಚಾರದ ಗೀಳಿನಿಂದ ರಾಹುಲ್‌ ಬಗ್ಗೆ ಕಟೀಲ್‌ ಹೇಳಿಕೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಭಕ್ತ, ಕಳವು, udayavanipaper, kannadanews,

ಭಕ್ತರ ಸೋಗಿನಲ್ಲಿ ತೆರಳಿ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.