ರಾಜಧಾನಿಯಲ್ಲಿ ಕಾಂಗ್ರೆಸ್‌ಗೆ ಸಂಕಷ್ಟ?

Team Udayavani, Jul 7, 2019, 3:00 AM IST

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು ಪಕ್ಷದ ನಿಷ್ಠಾವಂತರೂ ಆಗಿದ್ದ ರಾಮಲಿಂಗಾರೆಡ್ಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ಪುತ್ರಿ ಸೌಮ್ಯರೆಡ್ಡಿ ಅವರ ಕೈಲೂ ರಾಜೀನಾಮೆ ಕೊಡಿಸಿ ಪಕ್ಷ ಬಿಡುವ ತೀರ್ಮಾನ ಕೈಗೊಂಡಿದ್ದೇ ಆದರೆ ಕಾಂಗ್ರೆಸ್‌ಗೆ ನಗರದಲ್ಲಿ ಕಷ್ಟವಾಗಲಿದೆ.

ಜತೆಗೆ, ನಗರದ ಶಾಸಕರಾದ ಮುನಿರತ್ನ, ಎಸ್‌.ಟಿ.ಸೋಮಶೇಖರ್‌, ಬೈರತಿ ಬಸವರಾಜ್‌ ಅವರು ರಾಮಲಿಂಗಾರೆಡ್ಡಿ ಅವರೊಂದಿಗೆ ರಾಜೀನಾಮೆ ನೀಡಿರುವುದರಿಂದ ಐದೂ ಜನರ ರಾಜೀನಾಮೆ ಅಂಗೀಕಾರವಾದರೆ ಮುಂದಿನ ಸೆಪ್ಟೆಂಬರ್‌ನಲ್ಲಿ ನಡೆಯುವ ಬಿಬಿಎಂಪಿ ಮೇಯರ್‌ -ಉಪ ಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಅಧಿಕಾರ ಹಿಡಿಯಲು ಸಾಧ್ಯವಾಗದು.

ಅಷ್ಟೇ ಅಲ್ಲದೆ ಐವರೂ ಶಾಸಕರು ಕಾಂಗ್ರೆಸ್‌ನಿಂದ ದೂರವಾದರೆ ಅವರವರ ಕ್ಷೇತ್ರಗಳಲ್ಲಿರುವ ಪಾಲಿಕೆ ಸದಸ್ಯರು ಅವರನ್ನು ಹಿಂಬಾಲಿಸಿದರೆ ನಗರದಲ್ಲಿ ಪಕ್ಷದ ಅಸ್ತಿತ್ವಕ್ಕೂ ಧಕ್ಕೆಯಾಗಲಿದೆ. ಇದು ಮುಂದಿನ ವರ್ಷ ನಡೆಯಲಿರುವ ಬಿಬಿಎಂಪಿ ಚುನಾವಣೆ ಮೇಲೂ ಪರಿಣಾಮ ಬೀರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.


ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಅಸಂಘಟಿತ ಕಾರ್ಮಿಕರ ಭವಿಷ್ಯ ನಿಧಿ ಕಾನೂನು ಜಾರಿ, ಅಂಬೇಡ್ಕರ್‌ ಸ್ಮಾರ್ಟ್‌ ಕಾರ್ಡ್‌ ವಿತರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ...

  • ಬೆಂಗಳೂರು: ನಗರದಲ್ಲಿ ಹೊಸ ವಾಹನ ಖರೀದಿಸುವವರು ಕಡ್ಡಾಯವಾಗಿ ಆ ವಾಹನ ನಿಲುಗಡೆಗೆ ಜಾಗ ಇರುವ ಬಗ್ಗೆ ದೃಢೀಕರಣ ಪತ್ರ ನೀಡಬೇಕು. ಇನ್ನು ಈಗಾಗಲೇ ವಾಹನ ಇರುವವರಿಗೆ...

  • ಬೆಂಗಳೂರು: "ಬಯಲು ಬಹಿರ್ದೆಸೆ ಮುಕ್ತ' (ಒಡಿಎಫ್) ಎಂದು ಬೆಂಗಳೂರು ಅಧಿಕೃತವಾಗಿ ಪ್ರಮಾಣೀಕರಿಸಿಕೊಳ್ಳದ ಹಿನ್ನೆಲೆಯಲ್ಲಿ ಈ ಬಾರಿಯೂ ಬಿಬಿಎಂಪಿ ಸ್ವಚ್ಛ ಸರ್ವೇಕ್ಷಣ್‌ನಲ್ಲಿ...

  • ಬೆಂಗಳೂರು: ರಸ್ತೆಯಲ್ಲಿನ ಕಸ ಗಾಳಿಗೆ ಹಾರಿ ಮನೆಯೊಳಗೆ ಬರುತ್ತದೆ ಅಂತ ಮನೆಗೆ ಬೀಗಹಾಕಿ ಎಲ್ಲರೂ ಹೊರಗೆ ವಾಸವಿದ್ದರೆ ಹೇಗಿರುತ್ತದೆ? ಕೇಳಲಿಕ್ಕೂ ಇದು ಹಾಸ್ಯಾಸ್ಪದ....

  • ಬೆಂಗಳೂರು: ಮಟನ್‌ ಪ್ರಿಯರಿಗೆ ಸಿಹಿ ಸುದ್ದಿ. ರಾಜ್ಯ ಸರ್ಕಾರವೇ ಈಗ ಕುರಿ ಮಾಂಸದ ಸಂಚಾರಿ ಮಳಿಗೆಗಳನ್ನು ತೆರೆಯುವ ಮೂಲಕ ಮಾಂಸ ಪ್ರಿಯರಿಗೆ ತಾಜಾ ಮಾಂಸದ ಊಟ ನೀಡಲು...

ಹೊಸ ಸೇರ್ಪಡೆ