ಸೀಟು ಹಂಚಿಕೆ ಗೆಲುವೇ ಸೂತ್ರ

Team Udayavani, Feb 26, 2019, 12:30 AM IST

190225kpn79.jpg

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ನಾಯಕರು ಪ್ರತಿಷ್ಠೆ ಬಿಟ್ಟು ಗೆಲುವಿನ ಆಧಾರದಲ್ಲಿ ಕ್ಷೇತ್ರಗಳ ಹಂಚಿಕೆ ಮಾಡಿಕೊಳ್ಳಲು ತೀರ್ಮಾನಿಸಿದ್ದಾರೆ.

ರಾಜ್ಯದ 28 ಕ್ಷೇತ್ರಗಳಲ್ಲಿ ಯಾವ ಪಕ್ಷ ಎಲ್ಲಿ ಗೆಲ್ಲುವ ಸಾಧ್ಯತೆ ಇದೆ ಎನ್ನುವ ಕುರಿತಂತೆ ಎರಡೂ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದು, ಜಂಟಿಯಾಗಿ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಪೂರಕವಾಗುವ ರೀತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು ಎನ್ನಲಾಗಿದೆ.

ಕಾಂಗ್ರೆಸ್‌ನಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌,  ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌. ವಿಶ್ವನಾಥ್‌, ಲೋಕೋಪಯೋಗಿ ಸಚಿವ ಎಚ್‌. ಡಿ. ರೇವಣ್ಣ , ರಾಜ್ಯಸಭೆ ಸದಸ್ಯ ಕುಪೇಂದ್ರರೆಡ್ಡಿ ಸೋಮವಾರ ಕುಮಾರಕೃಪಾ ಅತಿಥಿಗೃಹದಲ್ಲಿ  ಮೊದಲ ಅಧಿಕೃತ ಸಭೆ  ನಡೆಸಿದರು.

10 ಕ್ಷೇತ್ರಕ್ಕೆ ಬೇಡಿಕೆ: ಮೊದಲ ಹಂತದ ಸಭೆಯಲ್ಲಿ ಜೆಡಿಎಸ್‌ ಪಕ್ಷದಿಂದ 10  ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿ¨ªಾರೆ ಎಂದು ತಿಳಿದು ಬಂದಿದೆ. ಅವುಗಳಲ್ಲಿ ಕಾಂಗ್ರೆಸ್‌ನ ಹಾಲಿ ಸಂಸದರಿರುವ ಕ್ಷೇತ್ರಗಳು ಸೇರಿವೆ. ಹಾಲಿ ಸಂಸದರ ಕ್ಷೇತ್ರ ಬಿಟ್ಟು ಕೊಡುವ ಬಗ್ಗೆ ಸ್ಪಷ್ಟ ನಿಲುವು ವ್ಯಕ್ತಪಡಿಸದ ರಾಜ್ಯ ನಾಯಕರು ಈ ಕುರಿತ ಹೈ ಕಮಾಂಡ್‌ ಮಟ್ಟದಲ್ಲಿ ತೀರ್ಮಾನವಾಗಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಮಂಡ್ಯ, ಹಾಸನ, ಮೈಸೂರು, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ತುಮಕೂರು, ವಿಜಯಪುರ, ರಾಯಚೂರು, ಕೋಲಾರ, ಶಿವಮೊಗ್ಗ  ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿ¨ªಾರೆ ಎಂದು ತಿಳಿದು ಬಂದಿದೆ. ಆದರೆ, ಕಾಂಗ್ರೆಸ್‌ನವರು ಆರು ಕ್ಷೇತ್ರಗಳನ್ನು ಬಿಟ್ಟುಕೊಡುವ ಬಗ್ಗೆ ಮುಕ್ತವಾಗಿದ್ದಾರೆ. ಜೆಡಿಎಸ್‌ ಒತ್ತಡ ಹೆಚ್ಚಾದರೆ, ಇನ್ನೊಂದು ಅಥವಾ ಎರಡು ಕ್ಷೇತ್ರ ಬಿಟ್ಟು ಕೊಡಬಹುದು ಎನ್ನುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ನಾಯಕರಿದ್ದಾರೆ ಎಂದು ಹೇಳಲಾಗುತ್ತಿದೆ.

ಎರಡು ಕ್ಷೇತ್ರ ತ್ಯಾಗದ ಲೆಕ್ಕ: ಹಾಲಿ ಕ್ಷೇತ್ರಗಳನ್ನು ಬಿಟ್ಟು ಕೊಡಬಾರದು ಎಂದು ರಾಜ್ಯ ಕಾಂಗ್ರೆಸ್‌  ನಾಯಕರು ಪಟ್ಟು ಹಿಡಿದಿದ್ದು, ಆದರೂ ಹೈಕಮಾಂಡ್‌ ತೀರ್ಮಾನಕ್ಕೆ ಬದ್ದರಾಗಿರಲು ರಾಜ್ಯ ಕಾಂಗ್ರೆಸ್‌ ನಾಯಕರು ಬಂದಿ¨ªಾರೆ. ಹಾಲಿ ಕಾಂಗ್ರೆಸ್‌ ಸಂಸದರಿರುವ ಚಿಕ್ಕಬಳ್ಳಾಪುರ ಹಾಗೂ ತುಮಕೂರು ಕ್ಷೇತ್ರಗಳನ್ನು ಜೆಡಿಎಸ್‌ ಬಯಸಿದ್ದು, ಅನಿವಾರ್ಯವಾದರೆ ಆ ಎರಡೂ  ಕ್ಷೇತ್ರಗಳನ್ನು ತ್ಯಾಗ ಮಾಡಲು ಮಾನಸಿಕವಾಗಿ ಸಿದ್ದರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಮಾರ್ಚ್‌ 2ರಂದು ಸಮನ್ವಯ ಸಮಿತಿ: ಮಾರ್ಚ್‌ ಒಂದು ಅಥವಾ ಎರಡನೇ ತಾರೀಖು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ನಡೆಸಲು ತೀರ್ಮಾನಿಸಲಾಗಿದ್ದು, ಅಂದಿನ ಸಭೆಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಪಾಲ್ಗೊಳ್ಳುವುದರಿಂದ ಅಲ್ಲೂ ಸೀಟು ಹಂಚಿಕೆ ಕುರಿತು ಚರ್ಚೆ ನಡೆದು ಒಂದು ತೀರ್ಮಾನಕ್ಕೆ ಬರುವ ಸಾಧ್ಯತೆಯಿದೆ.

ಒಂದು ವೇಳೆ, ಸಮನ್ವಯ ಸಮಿತಿ ಸಭೆಯಲ್ಲೂ ಒಮ್ಮತ ಮೂಡದಿದ್ದರೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅವರ ಸಮ್ಮುಖದಲ್ಲಿ ಅಂತಿಮ ಸಭೆ ನಡೆಸಿ, ಮಾರ್ಚ್‌ 15 ರೊಳಗೆ ಸೀಟು ಹಂಚಿಕೆ ಗೊಂದಲಕ್ಕೆ ತೆರೆ ಎಳೆಯಲು ಎರಡೂ ಪಕ್ಷಗಳ ನಾಯಕರು ಮುಂದಾಗಿದ್ದಾರೆ.

ಉತ್ತಮ ರೀತಿಯಲ್ಲಿ ಚರ್ಚೆಯಾಗಿದೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಕೋಮುವಾದಿ ಶಕ್ತಿಗಳನ್ನು ದೂರ ಇಡುವುದೊಂದೇ ನಮ್ಮ ಉದ್ದೇಶ. ಗೆಲ್ಲುವ ಮಾನದಂಡ ಇಟ್ಟುಕೊಂಡು ಸೀಟು ಹಂಚಿಕೆ ಮಾಡಿಕೊಳ್ಳಲು ತೀರ್ಮಾನಿಸಿದ್ದೇವೆ.
– ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

ಅಷ್ಟು ಇಷ್ಟು ಸೀಟು ಎನ್ನುವ ಪ್ರಶ್ನೆ ಇಲ್ಲ. 28 ಕ್ಷೇತ್ರಗಳಲ್ಲಿಯೂ ನಾವು ಗೆಲ್ಲುವುದಷ್ಟೇ ನಮ್ಮ ಗುರಿ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಹಿರಿಯ ನಾಯಕರು ಸೀಟು ಹಂಚಿಕೆ ಅಂತಿಮಗೊಳಿಸುತ್ತಾರೆ
– ಎಚ್‌.ಡಿ.ರೇವಣ್ಣ, ಲೋಕೋಪಯೋಗಿ ಸಚಿವ.

ನಮಗೆ ಸೀಟಿನ ಸಂಖ್ಯೆ ಮುಖ್ಯವಲ್ಲ. ಎರಡೂ ಪಕ್ಷಗಳು ಹೆಚ್ಚಿನ ಸ್ಥಾನ ಗೆಲ್ಲಬೇಕು. ವಿಶಾಲ ದೃಷ್ಟಿಯಲ್ಲಿ ನಾವು ಚರ್ಚೆ ಮಾಡಿದ್ದೇವೆ. ಕನಿಷ್ಠ 25 ಸ್ಥಾನ ಗೆಲ್ಲುವ ವಿಶ್ವಾಸ ಇದೆ. ಇನ್ನೆರಡು ದಿನಗಳಲ್ಲಿ ಸಮನ್ವಯ ಸಮಿತಿ ಸಭೆಯಲ್ಲಿಯೂ ಚರ್ಚಿಸಲಾಗುವುದು.
– ಡಾ.ಜಿ.ಪರಮೇಶ್ವರ್‌, ಉಪ ಮುಖ್ಯಮಂತ್ರಿ.

ಬಹಳ ಸೌಹಾರ್ದಯುತವಾದ ಸಭೆ ಯಶಸ್ವಿಯಾಗಿ ನಡೆದಿದೆ. ನಮ್ಮ ಪರಮ ಗುರಿ ಇರುವುದು ಕೋಮುವಾದವನ್ನು ಮಣಿಸುವುದು. ಯಾರಿಗೂ ಪ್ರತಿಷ್ಠೆ ಇಲ್ಲ. ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ 25 ಸ್ಥಾನ ಗೆಲ್ಲಿಸಲು ರಣ ತಂತ್ರ ರೂಪಿಸುತ್ತೇವೆ.
– ಎಚ್‌.ವಿಶ್ವನಾಥ್‌, ಜೆಡಿಎಸ್‌ ರಾಜ್ಯಾಧ್ಯಕ್ಷ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.