ಮೇಯರ್ ಗಂಗಾಂಬಿಕೆ, ಉಪಮೇಯರ್ ರಮೀಳಾ ಉಮಾಶಂಕರ್
Team Udayavani, Sep 29, 2018, 6:00 AM IST
ಬೆಂಗಳೂರು: ಬಿಬಿಎಂಪಿಯಲ್ಲೂ “ಆಪರೇಷನ್ ಕಮಲ’ ನಡೆಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, ನಾಲ್ಕನೇ ಅವಧಿಗೂ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮುಂದುವರಿದಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 52ನೇ ಮೇಯರ್ ಆಗಿ ಕಾಂಗ್ರೆಸ್‌ನ ಗಂಗಾಂಬಿಕೆ ಮಲ್ಲಿಕಾರ್ಜುನ್ ಹಾಗೂ 53 ನೇ ಉಪಮೇಯರ್ ಆಗಿ ಜೆಡಿಎಸ್ ರಮೀಳಾ ಉಮಾಶಂಕರ್ ಆಯ್ಕೆಯಾಗಿದ್ದಾರೆ.
ಕೆಂಪೇಗೌಡ ಪೌರಸಭಾಂಗಣದಲ್ಲಿ ಶುಕ್ರವಾರ ನಡೆದ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಸದಸ್ಯರ ಸಭಾತ್ಯಾಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟ ಮೇಯರ್ ಹಾಗೂ ಉಪಮೇಯರ್ ಪಟ್ಟ ತನ್ನದಾಗಿಸಿಕೊಂಡಿತು.
ಇಬ್ಬರು ಪಕ್ಷೇತರರನ್ನು ತನ್ನತ್ತ ಸೆಳೆದು ನಾಲ್ವರು ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರನ್ನು ಮತದಾನದಿಂದ ಗೈರು ಹಾಜರಾಗುವಂತೆ ನೋಡಿಕೊಳ್ಳಲು ಕಾರ್ಯತಂತ್ರ ರೂಪಿಸಿದ್ದ ಬಿಜೆಪಿಗೆ ಜತೆಗಿದ್ದ ಪಕ್ಷೇತರ ಸದಸ್ಯ ಅಂತಿಮ ಕ್ಷಣದಲ್ಲಿ ಕೈ ಕೊಟ್ಟು ಕಾಂಗ್ರೆಸ್ ಜೆಡಿಎಸ್ ಪಾಳಯ ಸೇರಿಕೊಂಡಿದ್ದರಿಂದ ಲೆಕ್ಕಾಚಾರ ಉಲ್ಟಾಪಲ್ಟಾ ಆಯಿತು.
ಹೀಗಾಗಿ, ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಬಿಜೆಪಿ ಮ್ಯಾಜಿಕ್ ನಂಬರ್ ಸಿಗುವುದಿಲ್ಲ ಎಂಬುದು ಖಾತರಿಯಾಗುತ್ತಿದ್ದಂತೆ ಸಭಾತ್ಯಾಗ ಮಾಡಿತು. ಈ ಮೂಲಕ ನಗರದ ಉಸ್ತುವಾರಿ ವಹಿಸಿದ್ದ ಮಾಜಿ ಉಪ ಮುಖ್ಯಮಂತ್ರಿ ಆರ್.ಆಶೋಕ್‌ಗೆ ಹಿನ್ನೆಡೆಯುಂಟಾಗಿದೆ.
ಚುನಾವಣಾ ಪ್ರಕ್ರಿಯೆ
ಮೇಯರ್ ಹಾಗೂ ಉಪಮೇಯರ್ ಚುನಾವಣೆಯನ್ನು ಕಾನೂನು ಬಾಹಿರವೆಂಬ ಬಿಜೆಪಿಯವರ ಆರೋಪದ ನಡುವೆಯೂ ಪ್ರಾದೇಶಿಕ ಆಯುಕ್ತರಾದ ಶಿವಯೋಗಿ ಸಿ. ಕಳಸದ ಅವರು ಚುನಾವಣಾ ಪ್ರಕ್ರಿಯೆಯನ್ನು ನಿಗಿದಿತ ವೇಳಾಪಟ್ಟಿಯಂತೆ ನಿಯಮಾನುಸಾರ ನಡೆಸಿದರು. ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳ ಪರ ಹಾಗೂ ವಿರುದ್ಧ ಮತ ಚಲಾವಣೆಗೆ ಅವಕಾಶ ನೀಡುವ ಮೂಲಕ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿದರು.
ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್, ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ಸಮ್ಮುಖದಲ್ಲಿ ಬೆಳಗ್ಗೆ 11.30 ಆರಂಭಿಸಲಾಯಿತು. ಚುನಾವಣೆ ಪ್ರಕ್ರಿಯೆ ಆರಂಭಿಸಿದ ಶಿವಯೋಗಿ ಅವರು ಮೊದಲಿಗೆ ನಾಮಪತ್ರ ಸಲ್ಲಿಕೆ ಮಾಡಿದ ಅಭ್ಯರ್ಥಿಗಳ ಮಾಹಿತಿ ನೀಡಿ, ನಾಮಪತ್ರಗಳನ್ನು ಹಿಂಪಡೆಯಲು ಎರಡು ನಿಮಿಷ ಕಾಲಾವಕಾಶ ನೀಡಿದರು.
ಮೇಯರ್ ಅಭ್ಯರ್ಥಿ ಗಂಗಾಂಬಿಕೆ ಪರವಾಗಿ ಪರವಾಗಿರುವವರ ಕೈ ಎತ್ತುವಂತೆ ಸೂಚಿಸಿದರು. ಈ ವೇಳೆ ಸಭೆಯಲ್ಲಿನದ್ದ ಎಲ್ಲ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಕೈಎತ್ತುವ ಮೂಲಕ ಅವರಿಗೆ ಮತ ಚಲಾಯಿಸಿದರು. ನಂತರ ಗಂಗಾಂಬಿಕೆ ವಿರೋಧವಾಗಿರುವವರು ಕೈ ಎತ್ತುವಂತೆ ಸೂಚಿಸಿದರು.
ಆದರೆ, ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ್ದರಿಂದ ವಿರೋಧ ಮತ ಒಂದೂ ಇಲ್ಲದಂತಾಯಿತು. ಅದೇ ರೀತಿ ಉಪಮೇಯರ್ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಚುನಾವಣೆಯಲ್ಲಿ ಮೇಯರ್ ಸ್ಥಾನಕ್ಕೆ ಗಂಗಾಂಬಿಕೆ 130 ಮತಗಳನ್ನು ಪಡೆದರೆ, ರಮೀಳಾ ಉಮಾಶಂಕರ್ 129 ಮತ ಪಡೆದು ಉಪಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದು, 2019ರ ಸೆಪ್ಟಂಬರ್ 27ವರೆಗೆ ಅವರ ಅಧಿಕಾರವಧಿಯಾಗಿದೆ ಎಂದು ಘೋಷಿಸಲಾಯಿತು.
ನೋಟಿಸ್ ಜಾರಿ
ಚುನಾವಣೆಯಲ್ಲಿ ಗೈರು ಹಾಜರಾಗಿದ್ದ ಮಾಜಿ ಸಚಿವ ಹಾಗೂ ಶಿವಾಜಿನಗರ ಶಾಸಕ ರೋಷನ್‌ಬೇಗ್, ಕಾಂಗ್ರೆಸ್‌ನ ಪಾಲಿಕೆ ಸದಸ್ಯರಾದ ಆಶಾ ಸುರೇಶ್, ಲಲಿತಾ ತಿಮ್ಮನಂಜಯ್ಯ ಅವರಿಗೆ ಕಾಂಗ್ರೆಸ್‌ನಿಂದ ನೋಟಿಸ್ ಜಾರಿ ಮಾಡಲಾಗಿದೆ. ಉಪ ಮೇಯರ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಮತ ಹಾಕದ ಮಂಜುಳಾ ನಾರಾಯಣಸ್ವಾಮಿ ಅವರಿಗೂ ಜೆಡಿಎಸ್‌ನಿಂದ ನೋಟಿಸ್ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣಕಾಸಿನ ವಿಚಾರ : ನಡುರಸ್ತೆಯಲ್ಲೇ ಮಹಿಳೆಯ ಕತ್ತು ಕೊಯ್ದು ಭೀಕರ ಹತ್ಯೆ
ಗೌಡ ಲಿಂಗಾಯತರಿಗೆ 2ಎ ನೀಡಲು ಒತ್ತಾಯಿಸಿ ಬೆಂಗಳೂರು ಚಲೋಗೆ ನಿರ್ಧಾರ
ಬ್ರಾಹ್ಮಣರಿಂದ ಅರ್ಚಕ ವೃತ್ತಿ ಕಿತ್ತುಕೊಳ್ಳುವ ಪ್ರಯತ್ನ ಸರ್ಕಾರ ಮಾಡುತ್ತಿದೆ :ಪೇಜಾವರ ಶ್ರೀ
ಶಿವಮೊಗ್ಗ: ಸಿಎಂ ಗೆ ಘೇರಾವ್ ಹಾಕಲು ಕಾಂಗ್ರೆಸ್ ಪ್ಲಾನ್ : 20ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ
ಯೋಗೀಶ್ವರ್ ಮರ್ಕಟ ಮನಸ್ಥಿತಿಯ ‘ರಾಜಕೀಯ ಜೋಕರ್’: ಎಸ್.ಎಲ್. ಭೋಜೇಗೌಡ ಟೀಕೆ
MUST WATCH
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3
ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು
ಹೊಸ ಸೇರ್ಪಡೆ
ಶ್ರೀಕೃಷ್ಣಮಠ ಪಾರ್ಕಿಂಗ್ ಪ್ರದೇಶ : ಗೂಡಂಗಡಿಗಳಿಗೆ ವ್ಯವಸ್ಥಿತ ರೂಪ ಕೊಡುವ ಯತ್ನ
ಪಡಿತರ, ಆನ್ಲೈನ್ ತರಗತಿ, ಇತರ ಸಂಪರ್ಕಕ್ಕೆ ಪರದಾಡುತ್ತಿರುವ ಜನತೆ
ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸ್ಥಳೀಯಾಡಳಿತವೆಂದರೆ ಲೆಕ್ಕಕ್ಕೇ ಇಲ್ಲ !
ಬಂಟ್ವಾಳದ ಮೂಲ ಸೌಕರ್ಯಕ್ಕೆ ಒತ್ತು : ಗ್ರಾಮಾಂತರ ಜಿಲ್ಲೆಯಾಗಿ ಪುತ್ತೂರು
ಉಳ್ಳಾಲ: ಒಂಬತ್ತುಕೆರೆ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ