ಲೈಂಗಿಕ ಅಲ್ಪಸಂಖ್ಯಾತರು, ಕಾರ್ಯಕರ್ತರ ರಕ್ಷಣೆ, ಏಳ್ಗೆಗೆ ಪ್ರಣಾಳಿಕೆಯಲ್ಲಿ ಆದ್ಯತೆ: ಡಿಕೆಶಿ 


Team Udayavani, Aug 27, 2021, 8:21 PM IST

dfsfsfd

ಬೆಂಗಳೂರು: ಲೈಂಗಿಕ ಅಲ್ಪಸಂಖ್ಯಾತರು, ಕಾರ್ಯಕರ್ತರ ರಕ್ಷಣೆ, ಏಳಿಗೆ, ಸ್ವಾಭಿಮಾನ, ಗೌರವದ ಬದುಕಿಗೆ ಪಕ್ಷದ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಅವರಿಗೆ ಕಿರುಕುಳ ನೀಡುವ ಪೊಲೀಸರು ಮತ್ತಿತರರ ವಿರುದ್ಧ ಕಠಿಣ ಕ್ರಮದ ಕಾನೂನು, ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು, ಮನೆ, ಮಕ್ಕಳ ಶಿಕ್ಷಣಕ್ಕೆ ನೆರವು, ಆರೋಗ್ಯ ಹಾಗೂ ಪಿಂಚಣಿ ಸೌಲಭ್ಯ ಒದಗಿಸುವ ಭರವಸೆ ಪ್ರಣಾಳಿಕೆಯಲ್ಲಿ ಇರಲಿದೆ ಎಂದೂ ಶಿವಕುಮಾರ್ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಲೈಂಗಿಕ ಅಲ್ಪಸಂಖ್ಯಾತರು, ಕಾರ್ಯಕರ್ತರು, ಹೋರಾಟಗಾರರ ಜತೆ ಶುಕ್ರವಾರ ಸಂವಾದ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿದ ಅವರು, ‘ಈ ವರ್ಗದವರಿಗೆ ಸಮಾಜದಲ್ಲಿ ಗೌರವ ಸಿಗಬೇಕು ಹಾಗೂ ಅವರ ಸ್ವಾಭಿಮಾನದ ಬದುಕಿಗೆ ಅವಕಾಶ ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು;

ಲೈಂಗಿಕ ಕಾರ್ಯಕರ್ತೆಯರಿಗೆ ಕಾನೂನಿನಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆಯಾದರೂ ಅವರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇಲ್ಲಿ ಬಡತನ ಯಾರಿಗೆ ಇದೆಯೋ, ಯಾರು ಜೀವನದಲ್ಲಿ ಮೋಸ ಹೋಗಿದ್ದಾರೋ ಅವರಿಗೆ ಹೆಚ್ಚು ತೊಂದರೆ ಆಗುತ್ತಿದೆ. ಹಣವಂತರಿಗೆ ರಕ್ಷಣೆ ಸಿಗುತ್ತಿದೆ. ನಿಮ್ಮ ಧ್ವನಿಯಾಗಲು ಇಂದು ನಿಮ್ಮ ಜತೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ.

ನೀವು ಸಮಾಜದಲ್ಲಿ ಗೌರವ, ಸ್ವಾಭಿಮಾನದಿಂದ ಬದುಕುವಂತಾಗಬೇಕು. ನಿಮಗೆ ಕಿರುಕುಳ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನಿನ ಅಗತ್ಯವಿದೆ. ಪೊಲೀಸರೇ ಆಗಲಿ, ಬೇರೆಯವರೇ ಆಗಲಿ ನಿಮಗೆ ಕಿರುಕುಳ ನೀಡಿದವರಿಗೆ ಕ್ರಮ ಕೈಗೊಳ್ಳುವ ಕಾನೂನು ತರಬೇಕಿದೆ. ಈ ವಿಚಾರವಾಗಿ ಮುಂದೆ ನಿಮ್ಮ ಸಂಘಟನೆಗಳ ಮುಖಂಡರ ಜತೆ ಮಾತನಾಡಿ, ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಈ ವಿಚಾರ ಅಳವಡಿಸುತ್ತೇವೆ.

ನೀವು ಮತ ಹಾಕಿದ ತಕ್ಷಣ ನಾವು ಅಧಿಕಾರಕ್ಕೆ ಬರುತ್ತೇವೆ ಎಂದಲ್ಲ. ನಾವು ಅಧಿಕಾರಕ್ಕೆ ಬಂದ ನಂತರ ನಮಗೂ, ನಿಮಗೂ ಸಮಾಧಾನ ಸಿಗುವ ಕಾರ್ಯಕ್ರಮ ಅನುಷ್ಠಾನಕ್ಕೆ ಬರಬೇಕು. ನಾವು ಎಲ್ಲ ವರ್ಗದ ಜನರನ್ನು ರಕ್ಷಣೆ ಮಾಡಬೇಕು. ನಿಮ್ಮ ವರ್ಗದ ಅನೇಕರು ಗುರುತಿಸಿಕೊಳ್ಳುವುದಿಲ್ಲ. ಕೆಲವರು ಮಾತ್ರ ಧೈರ್ಯವಾಗಿ ಗುರುತಿಸಿಕೊಳ್ಳುತ್ತಿದ್ದೀರಿ. ಹೀಗಾಗಿ ಈ ವಿಚಾರವಾಗಿ ಕ್ರಿಯಾ ಯೋಜನೆ (ಪ್ಲಾನ್ ಆಫ್ ಆಕ್ಷನ್) ರೂಪಿಸಬೇಕಿದೆ.

ನಮ್ಮಲ್ಲಿ ಮಹಿಳಾ ಮಹಾ ಪಂಚಾಯ್ತಿ ಎಂಬ ಕಾರ್ಯಕ್ರಮ ರೂಪಿಸಿದ್ದು, 224 ವಿಧಾನಸಭಾ ಕ್ಷೇತ್ರಗಳಲ್ಲೂ ಹೆಣ್ಣು ಮಕ್ಕಳ ಜತೆ ಚರ್ಚಿಸಲು ಸೂಚಿಸಿದ್ದೇನೆ. ಈ ಸಂವಾದದ ಮೂಲಕ ನಿಮ್ಮ ಕಷ್ಟ, ನೋವು ನನಗೆ ಅರ್ಥವಾಗಿದೆ. ನಿಮ್ಮ ಪರ ಧ್ವನಿ ಎತ್ತಲು ಸಾಧ್ಯವಿರುವಿಡೆ ಧ್ವನಿ ಎತ್ತಲು ಪ್ರಯತ್ನಿಸುತ್ತೇನೆ. ನಿಮ್ಮ ಸಮಸ್ಯೆ ಹಾಗೂ ಬೇಡಿಕೆಗಳನ್ನು ಕೇಳಿಸಿ, ಮನವರಿಕೆ ಮಾಡಿಕೊಂಡಿದ್ದೇನೆ.

ನಾನು ಜಯಮಾಲಾ ಅವರ ಅಧ್ಯಕ್ಷತೆಯ ಸಮಿತಿ ಹಾಗೂ ಇತರ ಸಮಿತಿಗಳ ವರದಿ ಪರಿಶೀಲಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಮ್ಮನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ.’

ಈ ಸಂವಾದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರ ಮುಂದೆ ತಮ್ಮ ಸಮಸ್ಯೆ, ನೋವುಗಳನ್ನು ಹಂಚಿಕೊಂಡ ಹಲವು ಮಹಿಳೆಯರು, ತಾವು ದಿನನಿತ್ಯ ಪೊಲೀಸರಿಂದ ಎದುರಿಸುತ್ತಿರುವ ಸಮಸ್ಯೆ, ದೌರ್ಜನ್ಯವನ್ನು ಹೇಳಿಕೊಂಡು ಕಣ್ಣೀರಿಟ್ಟರು. ಇನ್ನು ಕೋವಿಡ್ ಸಮಯದಲ್ಲಿ ಜೀವನ ನಡೆಸಲು ಅನುಭವಿಸಿದ ಸಂಕಟ, ಸಮಾಜದಲ್ಲಿ ಎದುರಿಸುವ ಅಪಮಾನ, ಕುಟುಂಬದ ಜವಾಬ್ದಾರಿ ನಿಭಾಯಿಸಲು ಆಗುತ್ತಿರುವ ಪರದಾಟ ಎಲ್ಲವನ್ನು ಎಳೆಎಳೆಯಾಗಿ ವಿವರಿಸಿದರು.

ಈ ಸಂವಾದ ಕಾರ್ಯಕ್ರಮದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಖ್ಯಾತ ಹೋರಾಟಗಾರ್ತಿ ಅಕೈ ಪದ್ಮಶಾಲಿ, ಸಾಧನಾ ಮಹಿಳಾ ಸಂಘದ ಗೀತಾ, ಮಧು ಹಾಗೂ ವಕೀಲರಾದ ಸಭಾ ಅವರು ಮಾತನಾಡಿದರು.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.