ಐಟಿ ಟಾರ್ಗೆಟ್ : ಕಾಂಗ್ರೆಸ್ನಿಂದ ಪ್ರತಿಭಟನೆಗೆ ಸಿದ್ಧತೆ
Team Udayavani, Sep 6, 2017, 9:45 AM IST
ಬೆಂಗಳೂರು: ಬಿಜೆಪಿ ರಾಜ್ಯ ಸರಕಾರದ ವಿರುದ್ಧ ಹೋರಾಟ ನಡೆಸಲು ಮಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಸರಕಾರಕ್ಕೆ ತಲೆ ನೋವು ತರುವ ಪ್ರಯತ್ನ ನಡೆಸಿದ್ದು, ಅದಕ್ಕೆ ಪ್ರತಿಯಾಗಿ ರಾಜ್ಯ ಕಾಂಗ್ರೆಸ್ ಬಿಜೆಪಿಯ ಐಟಿ ದಾಳಿಯ ವಿರುದ್ಧ ಶೀಘ್ರವೇ ರಾಜ್ಯಾದ್ಯಂತ ಪ್ರತಿಭಟನ ರ್ಯಾಲಿ ನಡೆಸಿ, ಕೇಂದ್ರ ಸರಕಾರ ರಾಜಕೀಯ ದ್ವೇಷ ಸಾಧಿಸುತ್ತಿದೆ ಎನ್ನುವುದನ್ನು ಜನರಿಗೆ ತಿಳಿಸಲು ಮುಂದಾಗಿದೆ.
ರಾಜ್ಯ ಕಾಂಗ್ರೆಸ್ ನಾಯಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಮೇಲಿಂದ ಮೇಲೆ ದಾಳಿ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪಕ್ಷ ಕೇಂದ್ರ ಸರಕಾರ ಮತ್ತು ಆದಾಯ ತೆರಿಗೆ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಆದಾಯ ತೆರಿಗೆ ಇಲಾಖೆಯ ಕಚೇರಿಗಳ ಮುಂದೆ ಬೃಹತ್ ಪ್ರತಿಭಟನೆ ನಡೆಸುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅವರ ಸೂಚನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯ ರೂಪುರೇಷೆಯನ್ನು ಸಿದ್ಧಪಡಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ