ನಾಳೆಯ ‘ಭಾರತ್ ಬಂದ್’ಗೆ ಕಾಂಗ್ರೆಸ್ ಬೆಂಬಲ : ಡಿ.ಕೆ.ಶಿವಕುಮಾರ
Team Udayavani, Sep 26, 2021, 6:53 PM IST
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಸೋಮವಾರ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ದೇಶಾದ್ಯಂತ ರೈತರು ಪ್ರತಿಭಟನೆ ನಡೆಸಿದರೂ, ಸಂಸತ್ ಹಾಗೂ ಶಾಸನ ಸಭೆಯಲ್ಲಿ ಅವರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರನ್ನು ಬದುಕಲು ಬಿಡುತ್ತಿಲ್ಲ. ರೈತ ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲ. ಬೆಂಬಲ ಬೆಲೆ ಇಲ್ಲ. ಸಾಲ ಮಾಡಿ ತೀರಿಸಲಾಗದೇ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ಬಂಡವಾಳ ಶಾಯಿಗಳಿಗೆ ಕೃಷಿ ಭೂಮಿ ಹಾಗೂ ರೈತರ ಬದುಕನ್ನೇ ಧಾರೆಯೆರೆಯುವ ಮೂಲಕ ರೈತರನ್ನು ಮತ್ತಷ್ಟು ಘಾಸಿಗೊಳಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರದಿಂದ ಜನ ಬೇಸತ್ತಿದ್ದಾರೆ. ಬಿಜೆಪಿ ಸರ್ಕಾರ ಆಶ್ವಾಸನೆಗೆ ಮಾತ್ರ ಸೀಮಿತವಾಗಿದೆ. ಅಸಂಘಟಿತ ಕಾರ್ಮಿಕರಿಗೆ ಪರಿಹಾರ ಧನ ನೀಡಿಲ್ಲ. ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರು ಸ್ವಯಿಚ್ಛೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ. ಅರ್ಜಿ ಹಾಕಿಕೊಂಡು ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಹಾಗೂ ಶಾಸಕ ದಿನೇಶ್ ಗುಂಡೂರಾವ್, ಪಾಲಿಕೆ ಮಾಜಿ ಮೇಯರ್ ಪದ್ಮಾವತಿ ಸೇರಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ