ಕೊರೊನಾ: ವಿಮಾನ ನಿಲ್ದಾಣದಲ್ದಿ ಪ್ರತ್ಯೇಕ ಸಲಹಾ ಕೇಂದ್ರ ಆರಂಭ
Team Udayavani, Jan 27, 2020, 11:00 AM IST
ಸಾಂಧರ್ಬಿಕ ಚಿತ್ರ
ಬೆಂಗಳೂರು: ಚೀನಾದಲ್ಲಿ ಮಾರಣಾಂತಿಕ ಕೊರೊನಾ ವೈರಸ್ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಈ ಸಂಬಂಧ ಪ್ರತ್ಯೇಕ ಸಹಾಯ ಕೇಂದ್ರ ತೆರೆಯಲಾಗಿದ್ದು, ವಿದೇಶ ದಿಂದ ಭಾರತಕ್ಕೆ ಬಂದಿಳಿಯುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ.
ಕಳೆದ 14 ದಿನಗಳು ಚೀನಾದಲ್ಲಿ ಅದರಲ್ಲೂ ಅತಿ ಹೆಚ್ಚು ಜನ ಮೃತಪಟ್ಟ ವುಹಾನ್, ಹ್ಯೂಬಿಯಲ್ಲಿದ್ದು ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಹೀಗೆ ಬಂದಿಳಿದ ಪ್ರಯಾಣಿಕರಲ್ಲಿ ತೀವ್ರ ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆ ಈ ಮೂರು ಲಕ್ಷಣಗಳಲ್ಲಿ ಯಾವುದಾದರೂ ಒಂದು ಲಕ್ಷಣ ಕಾಣಿಸುತ್ತಿದ್ದರೂ ತಕ್ಷಣ ಮಾಹಿತಿ ನೀಡಬೇಕು ಎಂದು ವಿಮಾನ ನಿಲ್ದಾಣದಲ್ಲಿ ಅಳವಡಿಸಿದ ಫಲಕದಲ್ಲಿ ಸೂಚಿಸಲಾಗಿದೆ.
ಈ ಮೇಲಿನ ಯಾವುದೇ ಲಕ್ಷಣಗಳು ಕಾಣಿಸಿಕೊಳ್ಳದಿದ್ದರೂ, ಚೀನಾದ ವುಹಾನ್ ಮತ್ತು ಹ್ಯೂಬಿಗೆ ಭೇಟಿ ನೀಡಿ ಭಾರತಕ್ಕೆ ಬಂದಿರುವವರು ಎಚ್ಚರಿಕೆಯಿಂದ ಇರಬೇಕು. ಭಾರತಕ್ಕೆ ಬಂದಿಳಿದ ದಿನದಿಂದ 28 ದಿನಗಳಲ್ಲಿ ಯಾವುದಾದರೂ ಲಕ್ಷಣ ಗಳು ಕಂಡುಬಂದರೆ, ಹತ್ತಿರದ ಆಸ್ಪತ್ರೆ ಗಳಿಗೆ ಭೇಟಿ ನೀಡಿ ಖಾತ್ರಿಪಡಿಸಿ ಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಹಾಗೂ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಅಳವಡಿಸಿರುವ ಫಲಕದಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ