ಸುರಕ್ಷತೆ ನಿರ್ಲಕ್ಷಿಸಿದ ಗೃಹಇಲಾಖೆಗೆ ಕೋರ್ಟ್ ತರಾಟ
Team Udayavani, Jul 21, 2018, 10:35 AM IST
ಬೆಂಗಳೂರು: ಓಲಾ ಹಾಗೂ ಊಬರ್ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಸೂಕ್ತ ಸುರಕ್ಷತೆ ಕಲ್ಪಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸಲ್ಲಿಕೆ ಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 8ಕ್ಕೆ ಮುಂದೂಡಿದೆ.
ಹೈಕೋರ್ಟ್ ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರ ಣೆಗೆ ಕೈಗೆತ್ತಿಕೊಂಡಿದ್ದ ಮುಖ್ಯನ್ಯಾಯ ಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ವಿಭಾಗೀಯ ಪೀಠ, ಟ್ಯಾಕ್ಸಿಗಳಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಯ ಜತೆಗೆ ಈ ಅರ್ಜಿಯನ್ನೂ ಸೇರಿಸಲಾಗುವುದು ಎಂದು ತಿಳಿಸಿದೆ.
ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ 2013ರಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇತ್ಯರ್ಥದ ವೇಳೆ, ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ 198 ವಿಶೇಷ ಮಹಿಳಾ ಪೇದೆಗಳನ್ನು ನೇಮಿಸುವುದಾಗಿ ರಾಜ್ಯ ಗೃಹ ಇಲಾಖೆ ಅಫಿಡವಿಟ್ ಸಲ್ಲಿಸಿತ್ತು. ಆದರೆ, ಇದುವರೆಗೂ ನೇಮಕಾತಿಗೆ ಮುಂದಾಗಿಲ್ಲ.
ಆ್ಯಪ್ ಆಧಾರಿತ ಸೇವೆಯ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡುವಲ್ಲಿ ಗೃಹ ಇಲಾಖೆ ನಿರ್ಲಕ್ಷ್ಯ ತೋರಿದೆ. ಹೀಗಾಗಿ, ಮಹಿಳಾ ಪ್ರಯಾಣಿಕರ ಮೇಲೆ ಟ್ಯಾಕ್ಸಿ ಚಾಲಕರ ದುರ್ವರ್ತನೆಗಳು ಪುನಾರವರ್ತನೆ ಯಾಗುತ್ತಿವೆ. ಹೀಗಾಗಿ ಕೂಡಲೇ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳವಂತೆ ನಿರ್ದೇಶಿಸಲು ಅರ್ಜಿಯಲ್ಲಿ ಕೋರಲಾಗಿದೆ. ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಕಾಲತ್ತು ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ