ಕೋವಿಡ್ 19 ಪರಿಸ್ಥಿತಿ ನಿರ್ವಹಣೆಗೆ ಮಾಹಿತಿ ಸಂಗ್ರಣೆ
Team Udayavani, Apr 7, 2020, 1:34 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಏರಿಕೆ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ. ಸುಧಾಕರ್ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಸಂಗ್ರಹಿಸಿದರು. ಈ ಕುರಿತು ಅಧಿಕಾರಿಗಳ ಜತೆ ಸರಣಿ ಸಭೆ ನಡೆಸಿದರು.
ಸೋಮವಾರ ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಆಸ್ಪತ್ರೆಯ ಸನ್ನದ್ಧತೆಯ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ 750 ಹಾಸಿಗೆಗಳನ್ನು ಕೋವಿಡ್ 19 ವೈರಸ್ ಸೋಂಕಿತರಿಗಾಗಿ ಮೀಸಲಿಡ ಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಯೋಗ ಕ್ಷೇಮ ವಿಚಾರಣೆ ನಡೆಸಿದರು. ಮುಂಜಾಗ್ರತಾ ಪರಿಕರಗಳ ಲಭ್ಯತೆ ಕುರಿತು ಅಧಿಕಾರಿ ಹಾಗೂ ಆಡಳಿತ ವರ್ಗದವರೊಂದಿಗೆ ಚರ್ಚೆ ನಡೆಸಿದರು. ಬಳಿಕ ವಿಧಾನಸೌಧದಲ್ಲಿ ರಾಜ್ಯದ ವಿವಿಧ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಕೋವಿಡ್ 19 ಸೋಂಕಿತರ ಚಿಕಿತ್ಸೆಗೆ ಅಗತ್ಯ ಸೌಲಭ್ಯಗಳು ಮತ್ತು ಔಷಧಿಗಳ ಲಭ್ಯತೆ, ಲ್ಯಾಬ್ ಅನುಕೂಲ ಸೇರಿದಂತೆ ಅಗತ್ಯ ವಿಚಾರಗಳ ಕುರಿತು ಚರ್ಚೆ ನಡೆಸಿದರು.
ಸಭೆಯಲ್ಲಿ ರಾಜೀವ ಗಾಂಧಿ ಆರೋಗ್ಯ ಸಂಸ್ಥೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವಾಲಯದ ನಿರ್ದೇಶಕರು, ವೈದ್ಯ ಕೀಯ ಕಾಲೇಜುಗಳ ನಿರ್ದೇಶಕರುಗಳು ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್