ಖಾಸಗಿಗೆ ಮೊರೆ: ಅನಗತ್ಯ ಹೊರೆ

ಸರ್ಕಾರಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌, ಆಕ್ಸಿಜನ್‌ಕೊರತೆ

Team Udayavani, Oct 17, 2020, 11:35 AM IST

bng-tdy-1

ಸಾಂದರ್ಭಿಕ ಚಿತ್ರ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಪೀಡಿತರಿಗಾಗಿಯೇ ಪ್ರತ್ಯೇಕ ಹಾಸಿಗೆಗಳಿವೆ. ಅಗತ್ಯ ಸೌಲಭ್ಯಗಳನ್ನೂ ಕಲ್ಪಿಸಲಾಗಿದೆ. ಆದರೆ, ರೋಗಿಗಳು ಬರುತ್ತಿಲ್ಲ. ಹಾಗಂತ, ಖಾಲಿ ಇರುವ ಹಾಸಿಗೆಗಳನ್ನು ಕೋವಿಡೇತರರಿಗೆ ಬಳಸುವಂತೆಯೂ ಇಲ್ಲ. ಇದು ಪರೋಕ್ಷವಾಗಿ ಸರ್ಕಾರಕ್ಕೆ ಅನಗತ್ಯ ಹೊರೆಯಾಗುತ್ತಿದೆ.

ಒಂದೆಡೆ ಸೋಂಕಿತರು ಖಾಸಗಿ ಆಸ್ಪತ್ರೆಯಲ್ಲಿಯೇ ಸರ್ಕಾರಿ ಕೋಟಾದಡಿ ಹಾಸಿಗೆ ಪಡೆದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಂದೆಡೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಕಾರಣಕ್ಕೆ ಬಹುತೇಕ ರೋಗಿಗಳು ಆಯುಷ್ಮಾನ್‌ಕಾರ್ಡ್‌ ಬಳಸಿ ನೇರವಾಗಿ ಖಾಸಗಿ ಆಸ್ಪತ್ರೆಯತ್ತ ವಾಲುತ್ತಿದ್ದಾರೆ. ಇದರಿಂದ ಸೋಂಕಿತರು ಮತ್ತು ಇತರೆ ರೋಗಿಗಳು ಈ ಎರಡೂ ವರ್ಗಗಳ ಚಿಕಿತ್ಸಾ ವೆಚ್ಚವನ್ನು ಆರ್ಥಿಕ ಸಂಕಷ್ಟದ ನಡುವೆಯೂ ಭರಿಸುವ ಅನಿವಾರ್ಯತೆ ಎದುರಾಗಿದೆ.

ನಗರದ 20 ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ನಿಗದಿಪಡಿಸಿರುವ ಹಾಸಿಗೆಗಳಲ್ಲಿ ಶೇ. 30ಕ್ಕೂ ಅಧಿಕ ಹಾಸಿಗೆಗಳು ಖಾಲಿ ಇವೆ. ಆದರೂ ಸೋಂಕು ದೃಢಪಟ್ಟವರು ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮನಸ್ಸು ಮಾಡುತ್ತಿದ್ದಾರೆ. ಇನ್ನೊಂದೆಡೆ ಹೀಗೆ ದಾಖಲಾಗುತ್ತಿರುವರ ಚಿಕಿತ್ಸಾ ವೆಚ್ಚಕ್ಕೆ ಆಸ್ಪತ್ರೆಗಳು ಸರ್ಕಾರಕ್ಕೆ ಒತ್ತಡ ಹೇರುತ್ತಿವೆ. ಜತೆಗೆ ಖಾಸಗಿ ಆಸ್ಪತ್ರೆಗಳು ನಿರ್ವಹಣೆ ನೆಪದಲ್ಲಿ ಸೋಂಕಿತರ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ. ಇದು ಗುಣಮಟ್ಟದ ಕೊರತೆಗೆ ಕಾರಣವಾಗಿದೆ.

ಕೋಟಾದಲ್ಲಿ ಬಂದರೆ ನಿರ್ಲಕ್ಷ; ಆರೋಪ: ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದಡಿ ಬರುವ ಸೋಂಕಿತರಿಗೆ ಕೇವಲ ಕೊರೊನಾ ಚಿಕಿತ್ಸೆ ನೀಡುತ್ತಾರೆ ಇತರೆ ಅನಾರೋಗ್ಯ ಸಮಸ್ಯೆಗಳು (ಹೃದ್ರೋಗ, ಮೂತ್ರಪಿಂಡ ಸಮಸ್ಯೆ) ಇದ್ದರೆ ಮತ್ತೆ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಿಕೊಳ್ಳಬೇಕು ಅಥವಾ ಹೆಚ್ಚುವರಿ ಹಣ ನೀಡಬೇಕಿದೆ. ಜತೆಗೆ ಆಹಾರ ಪೂರೈಕೆ, ಸಿಬ್ಬಂದಿನೆರವು, ಮಾನಸಿಕ ಆರೋಗ್ಯ ಕಾಪಾಡುವ ಕೌನ್ಸೆಲಿಂಗ್‌, ಸೋಂಕಿತರ ಆರೋಗ್ಯ ಸ್ಥಿತಿ ಕುರಿತು ಸಂಬಂಧಿಗಳಿಗೆ ಮಾಹಿತಿ ನೀಡದಿರುವ ಸಮಸ್ಯೆಗಳಿವೆ ಎಂದುಹಲವು ಸೋಂಕಿತರುಮತ್ತವರ ಸಂಬಂಧಿಗಳು ಆರೋಪಿಸುತ್ತಾರೆ.

40 ಕೋಟಿ ರೂ. ಬಾಕಿ; ನಿರ್ವಹಣೆ ಕಷ್ಟ: ಸರ್ಕಾರಿ ಕೋಟಾದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ಚಿಕಿತ್ಸಾ ವೆಚ್ಚತಲುಪುವುದು ಒಂದು ತಿಂಗಳಾಗುತ್ತಿದೆ. ಸದ್ಯ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಂಗಳ ಅಸೋಸಿ ಯೇಷನ್‌(ಫ‌ನಾ) ನೀಡುವ ಮಾಹಿತಿ ಪ್ರಕಾರ ಸರ್ಕಾರ ಇದುವರೆಗೆ40ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. “ಆಸ್ಪತ್ರೆಗಳಲ್ಲಿ ಪರಿಸ್ಥಿತಿ ಭಿನ್ನವಾಗಿದ್ದು, ಕೊರೊನಾವಾರ್ಡ್‌ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ದುಪ್ಪಟ್ಟು ಸಂಬಳ ನೀಡಬೇಕು. ಚಿಕಿತ್ಸೆ ಅತ್ಯಗತ್ಯವಾದ ವೈದ್ಯಕೀಯ ಉಪಕರಣಗಳ ಖರೀದಿಗೆ ಲಕ್ಷಾಂತರ ರೂ. ನೀಡಬೇಕು. ಆದರೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಒಬ್ಬ ಸೋಂಕಿತನ ಚಿಕಿತ್ಸಾ ವೆಚ್ಚ ಭರಿಸಲು ನಾಲ್ಕು ವಾರಗಳ ಗಡುವು ಎಂದು ಕೇಳುತ್ತಿದೆ. ಕೋವಿಡ್ ವಾರ್ಡ್‌ ಹಿನ್ನೆಲೆ ಇತರೆ ರೋಗಿಗಳಿಗೂ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ.

ಅನೇಕ ಖಾಸಗಿ ಆಸ್ಪತ್ರೆಗಳು ಸಂಕಷ್ಟದಲ್ಲಿವೆ’ ಎಂದು ಫ‌ನಾ ಅಧ್ಯಕ್ಷ ಡಾ.ಪ್ರಸನ್ನ ಹೇಳುತ್ತಾರೆ. “ನಿತ್ಯ ಸೋಂಕಿತರು ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರ ಸಂಖ್ಯೆ ಇತ್ತೀಚೆಗೆ ಏರಿಕೆಯಾಗುತ್ತಿದೆ. ಸೋಂಕಿತರ ಚಿಕಿತ್ಸಾ ವೆಚ್ಚ ಭರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ 15 ದಿನಗಳಲ್ಲೇ ವೆಚ್ಚ ಪಾವತಿಸಲಾಗುತ್ತಿದೆ ಎಂದು ಸುವರ್ಣ ಆರೋಗ್ಯ ಸುರಕ್ಷಾಟ್ರಸ್ಟ್‌ಅಧಿಕಾರಿಯೊಬ್ಬರು”ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

ಖಾಸಗಿಯಾದ್ರೆ ಮಾತ್ರ ದಾಖಲಾಗ್ತೀವಿ!: “ಖಾಸಗಿ ಆಸ್ಪತ್ರೆಯಾದರೆ ಮಾತ್ರ ದಾಖಲಾಗುತ್ತೇನೆ ಇಲ್ಲವಾದರೆ ಮನೆಯಲ್ಲಿಯೇಚಿಕಿತ್ಸೆಪಡೆಯುತ್ತೇನೆ’ – ಇದು ವಾರ್‌ ರೂಂನಿಂದಕರೆ ಮಾಡಿ, ಆಸ್ಪತ್ರೆ ಹಾಸಿಗೆ ನಿಗದಿಪಡಿಸುವ ಸಂದರ್ಭದಲ್ಲಿ ಬಹುತೇಕ ಸೋಂಕಿತರ ಉದ್ಗಾರ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಎಷ್ಟು ಮನದಟ್ಟು ಮಾಡಿಕೊಡಲು ಪ್ರಯತ್ನಿಸಿದರೂ ಖಾಸಗಿ ಆಸ್ಪತ್ರೆ ಹಾಸಿಗೆಯನ್ನೇ ನೀಡಬೇಕುಎಂದುಒತ್ತಾಯಿಸುತ್ತಾರೆ. ಅಂತಿಮವಾಗಿ ಖಾಸಗಿಯಾದರೆ ಮಾತ್ರ ದಾಖಲಾಗು ತ್ತೇನೆ’ ಎಂದುಹೇಳುತ್ತಾರೆ. ಇನ್ನುಕೆಲವರು ಸರ್ಕಾರದಹಿರಿಯಅಧಿಕಾರಿಗಳು,ಸ್ಥಳೀಯರಾಜಕಾರಣಿಗಳಿಂದ ಶಿಫಾರಸು ಮಾಡುತ್ತಾರೆ ಎಂದು ವಾರ್‌ ರೂಂ ಸಿಬ್ಬಂದಿ ಹೇಳುತ್ತಾರೆ.

ಇತರರಿಗೆ ಸೋಂಕಿನ ಭೀತಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಹಿನ್ನೆಲೆ ಬಹುತೇಕ ಶಸ್ತ್ರಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳು ನಡೆಸುತ್ತಿಲ್ಲ. ಜತೆಗೆ ಸಿಬ್ಬಂದಿ ಕೊರತೆ ನೆಪ ಹೇಳುತ್ತಿವೆ. ಇದಲ್ಲದೆ ರೋಗಿಗಳೂ ಸರ್ಕಾರಿ ಆಸ್ಪತ್ರೆಗೆ ತೆರಳಲು ಮನಸ್ಸು ಮಾಡುತ್ತಿಲ್ಲ. ಯಾಕೆಂದರೆ ಈ ಮೊದಲೇ ಇರುವ ತಪ್ಪುಕಲ್ಪನೆ ಹಾಗೂ ಈಗಾಗಲೇ ವಿವಿಧ ರೀತಿಯ ಕಾಯಿಲೆಗಳಿಂದ ಬಳಲು ತ್ತಿದ್ದು, ಸೋಂಕು ತಗುಲುವ ಭೀತಿಅವರನ್ನು ಕಾಡುತ್ತಿದೆ. ಇದರಿಂದಾಗಿ ನೇರವಾಗಿ ಆರೋಗ್ಯ ಕಾರ್ಡ್‌ ಬಳಸಿ ಖಾಸಗಿ ಆಸ್ಪತ್ರೆ ಕಡೆ ಮುಖಮಾಡುತ್ತಿದ್ದಾರೆ.

 ಸೋಂಕು ದೃಢಪಡುವ ಪ್ರಮಾಣ ತುಸು ಇಳಿಕೆ :

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಒಟ್ಟಾರೆ ಕೋವಿಡ್ ಸೋಂಕು ದೃಢಪಡುವ ಪ್ರಕರಣ ಪ್ರಮಾಣ ಕಡಿಮೆಯಾಗಿವೆಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಹೇಳಿದರು.

ನಗರದಲ್ಲಿ ಸೋಂಕು ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಪ್ರತಿ ಕ್ರಿಯಿಸಿದ ಅವರು, ನಗರದಲ್ಲಿ ಪ್ರತಿ ದಿನ ದಾಖ ಲಾಗುವ ಪಾಸಿಟಿವ್‌ ಪ್ರಕರಣಗಳ ಸಂಖ್ಯೆಗೆ ಅನುಗುಣವಾಗಿ 10 ಪಟ್ಟು ಹೆಚ್ಚು ಪರೀಕ್ಷೆ ಮಾಡಲಾಗುತ್ತಿದೆ. ನಿತ್ಯ 40 ಸಾವಿರಕ್ಕೂ ಹೆಚ್ಚು ಸೋಂಕು ಪರೀಕ್ಷೆ ಮಾಡಲಾಗುತ್ತಿದ್ದು, ಇಲ್ಲಿಯವರೆಗೆ 82.70 ಲಕ್ಷ ಜನರನ್ನು ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪರೀಕ್ಷೆಗಳ ಆಧಾರದ ಮೇಲೆ ಶೇ.13 ಪಾಸಿಟಿವ್‌ ಪ್ರಮಾಣ ಇರುವುದು ಪತ್ತೆಯಾಗಿದೆ. ಒಂದು ವಾರದಲ್ಲಿ ಪಾಲಿಕೆ ವ್ಯಾಪ್ತಿಯ ಎಂಟು ವಲ ಯಗಳಲ್ಲಿ ಶೇಕಡಾವಾರು ಸೋಂಕು ದೃಢಪಡುವ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗಿವೆ. ಸೋಂಕಿತರ ಸಾವಿನ ಪ್ರಮಾಣ ಶೇ.1.17ರಷ್ಟಿದೆ ಎಂದು ಮಾಹಿತಿ ನೀಡಿದರು.

3,021 ಸೋಂಕು ಮುಕ್ತರ ಬಿಡುಗಡೆ :

ಬೆಂಗಳೂರು: ನಗರದಲ್ಲಿ ಶುಕ್ರವಾರ3,021 ಮಂದಿ ಕೋವಿಡ್ ಸೋಂಕಿನಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು ಬಿಡುಗಡೆ ಸಂಖ್ಯೆ2,31,483ಕ್ಕೆ ಏರಿಕೆ ಆಗಿದೆ. ಶುಕ್ರವಾರ ಒಟ್ಟು 24 ಮಂದಿ ಸಾವಿಗೀಡಾಗಿದ್ದು, ಒಟ್ಟು ಮೃತರ ಸಂಖ್ಯೆ 3,486 ಕ್ಕೆ ಏರಿಕೆಯಾಗಿದೆ.

3,788 ಮಂದಿ ಕೋವಿಡ್‌ ಸೋಂಕಿನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆ ಹಾಗೂ ಜತೆಗೆ 3,441 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 3,00,634 ಕ್ಕೆ ಏರಿದೆ. ಹಾಗೆಯೇ ನಗರದಲ್ಲಿ ಪ್ರಸ್ತುತ 65,664 ಸಕ್ರಿಯ ಪ್ರಕರಣಗಳಿದ್ದು, ಅವರೆಲ್ಲಾ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಆರೈಕೆ ಪಡೆಯುತ್ತಿದ್ದಾರೆ. ಅಲ್ಲದೆ 359 ಮಂದಿ ತೀವ್ರ ನಿಗಾಘಟಕದಲ್ಲಿದ್ದಾರೆ.

 

ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.