ಮಕ್ಕಳಿಗಾಗಿ ಕಾರ್ಯಕ್ರಮ ರೂಪಿಸಿ ಕಳುಹಿಸಿ


Team Udayavani, Apr 8, 2020, 11:55 AM IST

bng-tdy-3

ಬೆಂಗಳೂರು:  ಕೋವಿಡ್ 19 ಹಿನ್ನೆಲೆಯಲ್ಲಿ ಮನೆಯಲ್ಲಿರುವ ಮಕ್ಕಳ ಕ್ರಿಯಾಶೀಲತೆಯನ್ನು ಹೆಚ್ಚಿಸುವುದಕ್ಕಾಗಿ ಶಿಕ್ಷಣ ಇಲಾಖೆಯು ಯುಟ್ಯೂಬ್‌ ಚಾನಲ್‌ ಆರಂಭಿಸುತ್ತಿದೆ. ಶಿಕ್ಷಕರು, ಸಾಫ್ಟ್‌ವೇರ್‌ ತಂತ್ರಜ್ಞರು ಹಾಗೂ ಸಾರ್ವಜನಿಕರು ಈ ಅಭಿಯಾನಕ್ಕೆ ಕೈಜೋಡಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಮನವಿ ಮಾಡಿದ್ದಾರೆ.

ಕೋವಿಡ್ 19 ಭೀತಿ ಮಕ್ಕಳ ಶೈಕ್ಷಣಿಕ ಸಿದ್ಧತೆ ಹಾಗೂ ಕಲಿಕಾ ಸಾಮರ್ಥ್ಯವನ್ನು ಕಸಿದು ಕೊಳ್ಳುತ್ತಿದೆ. ಮಕ್ಕಳಲ್ಲಿ ಹೊಸ ಚೈತನ್ಯ ತುಂಬು ವುದಕ್ಕಾಗಿ ಯುಟ್ಯೂಬ್‌ ಚಾನಲ್‌ ಆರಂ ಭಿಸುವ ಆಲೋಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಚಾನೆಲ್‌ ಮೂಲಕ ಪ್ರತಿ ದಿನ ಬೆಳಗ್ಗೆ ಒಂದು ಗಂಟೆ ಸಮಯ ಶೈಕ್ಷಣಿಕ ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ಬಿತ್ತರಿಸುವ ಉದ್ದೇಶ ಹೊಂದಲಾಗಿದೆ. ಈ ಕಾರ್ಯಕ್ರಮಗಳು ಅತ್ಯಂತ ವೈಶಿಷ್ಟ್ಯ ಪೂರ್ಣವಾಗಿರಬೇಕು ಮಕ್ಕಳೊಂದಿಗೆ ಪೋಷಕರನ್ನೂ ಪ್ರೇರೇಪಿಸಬೇಕು. ಅಂದಾಜು 10 ರಿಂದ 15 ನಿಮಿಷಗಳ 4ರಿಂದ5 ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಚಿಂತನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಿಡಿಯೋ ಮಾಡುವವರು ಏನು ಮಾಡಬೇಕು?: ಮಕ್ಕಳಿಗೆ ಸೂಕ್ತ ಹಾಗೂ ಸಮಂಜಸವೆನಿಸುವ ಯಾವುದೇ ಸಾಮಗ್ರಿಯನ್ನು ಸಿದ್ಧಪಡಿಸಬಹುದು. ವಿಡಿಯೋ ಸಾಮಗ್ರಿ 10ರಿಂದ 15 ನಿಮಿಷಗಳ ಗರಿಷ್ಠ ಅವಧಿಯುಳ್ಳದ್ದಾಗಿರಬೇಕು. ವಿವರಿಸಲಾಗುವ ವಿಷಯಗಳು ಹೊಸದಾಗಿದ್ದು, ಮಕ್ಕಳಲ್ಲಿ ಆಸಕ್ತಿ, ಕುತೂಹಲ ಹುಟ್ಟಿಸುವಂತಿರಬೇಕು ಹಾಗೂ ಕೆಲವು ಚಟುವಟಿಕೆಗಳನ್ನೂ ಒಳಗೊಂಡಿರಬೇಕು. ಸಿದ್ಧಪಡಿಸುವ ಸಾಮಗ್ರಿಗಳು ಪಠ್ಯಕ್ರಮಕ್ಕೆ ಸಂಬಂಧಿಸಿರುವ ಅಗತ್ಯವಿಲ್ಲ. ಕಾರ್ಯಕ್ರಮಗಳು ಏಕಮುಖವಾಗಿರಬಾರದು. ಕಥಾವಾಚನ, ಪುಸ್ತಕ ಪರಿಚಯ ಓದು, ಪ್ರಯೋಗಗಳು/ ಚಟುವಟಿಕೆಗಳು/ಮ್ಯಾಜಿಕ್‌ ಇತ್ಯಾದಿಗಳ ವಿವರಣೆಯುಕ್ತ ಪ್ರದರ್ಶನ, ಗಾದೆಗಳು, ಒಗಟುಗಳನ್ನು ಬಿಡಿಸುವ ವಿಡಿಯೋ ಮಾಡಬಹುದು.

ಕಾರ್ಯಕ್ರಮ ಸಿದ್ಧಪಡಿಸುವವರು ವಿಡಿಯೋ ದಾಖಲೀಕರಣಕ್ಕೆ ಡಿಎಸ್‌ಇಆರ್‌ಟಿ ಸ್ಟುಡಿಯೋ ಉಪಯೋಗಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಕಾರ್ಯಕ್ರಮಗಳ ನಿರೂಪಣೆಗೆ ನಟ,ನಟಿ, ಟೀವಿ ನಿರೂಪಕರು, ರೇಡಿಯೋ ಜಾಕಿಗಳೂ ತೊಡಗಿಸಿಕೊಳ್ಳಬಹುದು. ಕಾರ್ಯಕ್ರಮವನ್ನು ಮುಂದಿನ 50 ದಿನಗಳವರೆಗೆ ಪ್ರಸಾರ ಮಾಡಲಾಗುತ್ತದೆ. ವಿಡಿಯೋ ಸಾಮಗ್ರಿಯನ್ನು ಇ-ಮೇಲ್‌ [email protected] ಅಥವಾ ಗೂಗಲ್‌ ಡ್ರೈವ್‌, ವಾಟ್ಸ್‌ ಆ್ಯಪ್‌, ಟೆಲಿಗ್ರಾಮ್‌ ಮೂಲಕ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ- 080-22483040 ಅಥವಾ ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕ ಡಾ. ಎಂ.ಟಿ. ರೇಜು ಅವರನ್ನು ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.