ಪತ್ನಿ ಕೊಲೆಗೈದು, ಆತ್ಮಹತ್ಯೆಗೆ ಶರಣಾದ ಪತಿ

Team Udayavani, Oct 18, 2021, 11:52 AM IST

ಪತ್ನಿ ಕೊಲೆಗೈದು, ಆತ್ಮಹತ್ಯೆಗೆ ಶರಣಾದ ಪತಿ

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಪತಿಯೇ ಪತ್ನಿಯನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ತಿಗಳರಪಾಳ್ಯ ನಿವಾಸಿ ಮಂಜುನಾಥ್‌ (32) ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು ಪತ್ನಿರೋಜಾ (28)ರನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ ಎಂದು ಪೊಲೀಸರು ಹೇಳಿದರು.

ಕನಕಪುರ ತಾಲೂಕಿನ ಸಾತನೂರು ಕುಂಚಿಟಿಗರ ಪಾಳ್ಯ ಮೂಲದ ಮಂಜುನಾಥ್‌ ನಗರದಲ್ಲಿ ವರ್ಕ್‌ಶಾಪ್‌ನಲ್ಲಿ ಕೆಲಸ ಮಾಡು ತ್ತಿದ್ದು, ನಾಲ್ಕು ವರ್ಷಗಳ ಹಿಂದೆ ರೋಜಾ ಅವರನ್ನು ಮದುವೆಯಾಗಿದ್ದ. ದಂಪತಿಗೆ ಮಕ್ಕಳು ಇರಲಿಲ್ಲ. ಈ ಮೊದಲು ಅಂದ್ರಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಈ ಮಧ್ಯೆ ಮಂಜುನಾಥ್‌ ಕುಡಿದು ಬಂದು ಪತ್ನಿಗೆ ನಿಂದಿಸಿ, ಹಲ್ಲೆ ನಡೆಸುತ್ತಿದ್ದ. ಕೆಲ ತಿಂಗಳ ಹಿಂದೆ ಬ್ಯಾಡರಹಳ್ಳಿಯ ತಿಗಳರ ಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಲ್ಲಿಯೂ ಸಹ ಮಂಜುನಾಥ್‌, ಪತ್ನಿ ಮೇಲೆ ಹಲ್ಲೆ ನಡೆಸುತ್ತಿದ್ದ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ;- ಅ.20 ಬಿಡುಗಡೆಯಾಗಲಿದೆ ‘ಭಜರಂಗಿ-2’ ಟ್ರೇಲರ್‌

 ದಂಪತಿ ನಡುವೆ ಗಲಾಟೆ, ಕೊಲೆ: ಭಾನುವಾರ ಸಂಜೆ ದಂಪತಿ ನಡುವೆ ಗಲಾಟೆಯಾಗಿದ್ದು, ಈ ವೇಳೆ ಕೋಪಗೊಂಡ ಮಂಜುನಾಥ್‌ ಪತ್ನಿ ಯನ್ನು ಚಾಕುವಿನಿಂದ ಕೊಲೆಗೈದು, ಬಳಿಕ ತಾನೂ ಅದೇ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾತ್ರಿ 7 ಗಂಟೆ ಸುಮಾರಿಗೆ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋದಾಗ ಒಳಭಾಗದಿಂದ ಮನೆ ಲಾಕ್‌ ಮಾಡಲಾಗಿತ್ತು. ಬಳಿಕ ಸ್ಥಳೀಯರ ನೆರವಿನೊಂದಿಗೆ ಬಾಗಿಲುಮುರಿದು ಒಳ ಹೋದಾಗ, ರಕ್ತದ ಮಡುವಿನಲ್ಲಿ ರೋಜಾ ಮೃತದೇಹ ಬಿದ್ದಿತ್ತು.

ಅಲ್ಲದೆ, ಕಬೋರ್ಡ್‌ ಮೇಲ್ಭಾಗದಲ್ಲಿ ರಕ್ತದ ಕಲೆಗಳು ಕಂಡುಬಂದಿವೆ. ಅದೇ ಕೊಠಡಿಯಲ್ಲಿ ಮಂಜುನಾಥ್‌ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಾಥಮಿಕ ಮಾಹಿತಿ ಪ್ರಕಾರ ಪತಿ ಮಂಜುನಾಥ್‌, ಮೊದಲಿಗೆ ಪತ್ನಿ ರೋಜಾಳನ್ನು ಕೊಲೆಗೈದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಮಕ್ಕಳಿರದ ಕಾರಣಕ್ಕೆ ಕೊಲೆ?

ಮದುವೆಯಾಗಿ ನಾಲ್ಕು ವರ್ಷಗಳು ಕಳೆದರೂ ದಂಪತಿಗೆ ಮಕ್ಕಳು ಇರಲಿಲ್ಲ. ಅದೇ ವಿಚಾರಕ್ಕೆ ಮಂಜುನಾಥ್‌ ರೋಜಾಗೆ ನಿಂದಿಸಿ, ಹಲ್ಲೆ ನಡೆಸುತ್ತಿದ್ದ. ಭಾನುವಾರ ಅದೇ ವಿಚಾರ ತಾರಕಕ್ಕೇರಿದ್ದು, ಮಂಜುನಾಥ್‌ ಕೋಪಗೊಂಡು ಕೊಲೆಗೈದಿದ್ದಾನೆ ಎಂದು ಹೇಳಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.