ಮಹಡಿಯಿಂದ ಎಸೆದು ಸ್ವಂತ ಮಗುವಿನ ಕೊಲೆ; ತಾನೂ ಆತ್ಮಹತ್ಯೆ ನಾಟಕವಾಡಿದ ದಂತವೈದ್ಯೆ

Team Udayavani, Aug 6, 2022, 7:15 AM IST

ಮಹಡಿಯಿಂದ ಎಸೆದು ಸ್ವಂತ ಮಗುವಿನ ಕೊಲೆ; ತಾನೂ ಆತ್ಮಹತ್ಯೆ ನಾಟಕವಾಡಿದ  ದಂತವೈದ್ಯೆ

ಬೆಂಗಳೂರು: ಜನ್ಮ ಕೊಟ್ಟ ತಾಯಿಯೇ ತನ್ನ ಬುದ್ದಿಮಾಂಧ್ಯ ಮಗಳನ್ನು ನಾಲ್ಕನೇ ಮಹಡಿಯಿಂದ ಎಸೆದು ಕೊಲೆಗೈದಿರುವ  ಘಟನೆ ಸಂಪಂಗಿರಾಮ ನಗರದಲ್ಲಿ ನಡೆದಿದೆ.

ದ್ಯುತಿ (6) ಕೊಲೆಯಾದ ಮಗುವಾಗಿದ್ದು, ಆರೋಪಿ ಸುಷ್ಮಾರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ವಿವರ
ಸಾಫ್ಟ್ ವೇರ್‌ ಎಂಜಿನಿಯರ್‌ ಕಿರಣ್‌ ಮತ್ತು ದಂತ ವೈದ್ಯೆ ಸುಷ್ಮಾ ಏಳು ವರ್ಷಗಳ ಹಿಂದೆ ಮದುವೆಯಾಗಿದ್ದು,   ಕುಟುಂಬ ಸಮೇತ ಸಿಕೆಎಸ್‌ ಗಾರ್ಡನ್‌ನ ಅದ್ವಿತ್‌ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದಾರೆ.  ಮಗಳು  ಆರು ವರ್ಷವಾದರೂ ಮಾತನಾಡುತ್ತಿರಲಿಲ್ಲ. ಮತ್ತೊಂದೆಡೆ ದಂತ ವೈದ್ಯೆಯಾಗಿದ್ದರೂ ಸುಷ್ಮಾಳಿಗೆ ಸರಿಯಾಗಿ ವೃತ್ತಿ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಕೇವಲ ಮಗುವಿನ ಪಾಲನೆಯಷ್ಟೇ ಮಾಡಬೇಕಾಗಿತ್ತು. ಅದರಿಂದ ಬೇಸತ್ತು ಈ ಕೃತ್ಯ ಎಸಗಿದ್ದಾಳೆ ಎಂದು ಹೇಳಲಾಗಿದೆ.

ಕೊಲೆ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆ
ಆ.3ರಂದು ಬೆಳಗ್ಗೆ  ಕಿರಣ್‌ ಕೆಲಸಕ್ಕೆ ತೆರಳಿದ ಬಳಿಕ ಸುಷ್ಮಾ ಮಗಳನ್ನು ಆಟವಾಡಿಸುವ ನೆಪದಲ್ಲಿ ಬಾಲ್ಕನಿಗೆ ಬಂದಿದ್ದಾಳೆ. ಮೊದಲಿಗೆ ಪುತ್ರಿಯ ಕೈ ಹಿಡಿದು ನಡೆಸಿದ್ದಾರೆ. ಬಳಿಕ ಒಂದೆರಡು ಬಾರಿ ಮಗಳನ್ನು ಎಸೆಯುವಂತೆ ನಟಿಸಿ, ಕೊನೆಗೆ  ಎಸೆದೇ ಬಿಟ್ಟಿದ್ದಳು. ಬಳಿಕ ಗ್ರೀಲ್‌ ಮೇಲೆ ಕುಳಿತು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ನಾಟಕವಾಡಿದ್ದಾಳೆ. ಆಕೆಯನ್ನು ಅಕ್ಕಪಕ್ಕದವರು ರಕ್ಷಿಸಿದ್ದಾರೆ. ಇದೆಲ್ಲವೂ ಸಿಸಿ ಕೆಮರಾದಲ್ಲಿ ಸೆರೆಯಾಗಿವೆ ಎಂದು ಪೊಲೀಸರು ಹೇಳಿದರು.

ಆಸ್ಪತ್ರೆಯಲ್ಲಿ ಸಾವು
ಮಗುವನ್ನು  ಕೂಡಲೇ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್‌ಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ  ಮೃತಪಟ್ಟಿತು.

ಕಾಲುಜಾರಿ ಬಿದ್ದಿದೆ ಎಂದ ಸುಷ್ಮಾ!
ಮಗಳು ನನ್ನ  ಕೈ ಬಿಡಿಸಿಕೊಂಡು ಆಟವಾಡುತ್ತಿದ್ದಳು. ಈ ವೇಳೆ ಕಾಲು ಜಾರಿ ಬಿದ್ದಿದ್ದಾಳೆ ಎಂದು ಸುಷ್ಮಾ ಕಥೆ ಕಟ್ಟಿದ್ದಳು.  ಅನುಮಾನಗೊಂಡ ಪೊಲೀಸರು ಸಿಸಿಕೆಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಮಗುವಿನ ತಂದೆ  ಕಿರಣ್‌ ನೀಡಿದ ದೂರಿನಂತೆ  ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರೈಲು ನಿಲ್ದಾಣದಲ್ಲಿ ತೊರೆದಿದ್ದಳು
ಐದು ತಿಂಗಳ ಹಿಂದೆ ಸುಷ್ಮಾ ಇದೇ ಮಗುವನ್ನು ರೈಲು ನಿಲ್ದಾಣದಲ್ಲೇ ಬಿಟ್ಟು ಬಂದಿದ್ದಳು. ಅದೇ ವಿಚಾರಕ್ಕೆ ದಂಪತಿ ನಡುವೆ ಜಗಳ ನಡೆದಿತ್ತು. ಬಳಿಕ ಪತಿ ಕಿರಣ್‌ ಹುಡುಕಾಡಿ ಪುತ್ರಿಯನ್ನು ಪತ್ತೆ ಹಚ್ಚಿ ಕರೆತಂದಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಬ್ರಿಟಿಷರಿಗೆ ಸಾಧ್ಯವಾದಷ್ಟು ತೊಂದರೆ ಕೊಡಬೇಕು ಎನ್ನುವ ಛಲ ಇತ್ತು: ನಾಗಭೂಷಣ ರಾವ್‌

ಬ್ರಿಟಿಷರಿಗೆ ಸಾಧ್ಯವಾದಷ್ಟು ತೊಂದರೆ ಕೊಡಬೇಕು ಎನ್ನುವ ಛಲ ಇತ್ತು: ನಾಗಭೂಷಣ ರಾವ್‌

ಬೆಂಗಳೂರಿನ ಸ್ವಾತಂತ್ರ್ಯ ಚಳವಳಿ ಉಳಿದ ನಗರಗಳಿಗಿಂತ ಭಿನ್ನ

ಬೆಂಗಳೂರಿನ ಸ್ವಾತಂತ್ರ್ಯ ಚಳವಳಿ ಉಳಿದ ನಗರಗಳಿಗಿಂತ ಭಿನ್ನ

tricolour flag

ಮನೆ ಮನೆಗಳಲ್ಲಿ ಹಾರಿಸಿದ ತ್ರಿವರ್ಣ ಧ್ವಜ ಇಳಿಸುವ ಮುನ್ನ ಈ ಅಂಶಗಳನ್ನು ನೆನಪಿಡಿ

news-1

ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು

ವಾಡಿ : ಎಸಿಸಿ ಆವರಣದಲ್ಲಿ ಉಲ್ಟಾ ಹಾರಿದ ರಾಷ್ಟ್ರ ಬಾವುಟ!

ವಾಡಿ : ಎಸಿಸಿ ಆವರಣದಲ್ಲಿ ಉಲ್ಟಾ ಹಾರಿದ ರಾಷ್ಟ್ರ ಬಾವುಟ!

ಜಗತ್ತಿನಲ್ಲಿ ಭಾರತದ ಗೌರವ ಹೆಚ್ಚಿದೆ: ನಳಿನ್‍ ಕುಮಾರ್ ಕಟೀಲ್

ಜಗತ್ತಿನಲ್ಲಿ ಭಾರತದ ಗೌರವ ಹೆಚ್ಚಿದೆ: ನಳಿನ್‍ ಕುಮಾರ್ ಕಟೀಲ್

ಸ್ವಾತಂತ್ರ್ಯ ಅಮೃತ ಮಹೋತ್ಸವ : ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ರಿಟಿಷರಿಗೆ ಸಾಧ್ಯವಾದಷ್ಟು ತೊಂದರೆ ಕೊಡಬೇಕು ಎನ್ನುವ ಛಲ ಇತ್ತು: ನಾಗಭೂಷಣ ರಾವ್‌

ಬ್ರಿಟಿಷರಿಗೆ ಸಾಧ್ಯವಾದಷ್ಟು ತೊಂದರೆ ಕೊಡಬೇಕು ಎನ್ನುವ ಛಲ ಇತ್ತು: ನಾಗಭೂಷಣ ರಾವ್‌

ಬೆಂಗಳೂರಿನ ಸ್ವಾತಂತ್ರ್ಯ ಚಳವಳಿ ಉಳಿದ ನಗರಗಳಿಗಿಂತ ಭಿನ್ನ

ಬೆಂಗಳೂರಿನ ಸ್ವಾತಂತ್ರ್ಯ ಚಳವಳಿ ಉಳಿದ ನಗರಗಳಿಗಿಂತ ಭಿನ್ನ

tricolour flag

ಮನೆ ಮನೆಗಳಲ್ಲಿ ಹಾರಿಸಿದ ತ್ರಿವರ್ಣ ಧ್ವಜ ಇಳಿಸುವ ಮುನ್ನ ಈ ಅಂಶಗಳನ್ನು ನೆನಪಿಡಿ

ವಾಡಿ : ಎಸಿಸಿ ಆವರಣದಲ್ಲಿ ಉಲ್ಟಾ ಹಾರಿದ ರಾಷ್ಟ್ರ ಬಾವುಟ!

ವಾಡಿ : ಎಸಿಸಿ ಆವರಣದಲ್ಲಿ ಉಲ್ಟಾ ಹಾರಿದ ರಾಷ್ಟ್ರ ಬಾವುಟ!

ಜಗತ್ತಿನಲ್ಲಿ ಭಾರತದ ಗೌರವ ಹೆಚ್ಚಿದೆ: ನಳಿನ್‍ ಕುಮಾರ್ ಕಟೀಲ್

ಜಗತ್ತಿನಲ್ಲಿ ಭಾರತದ ಗೌರವ ಹೆಚ್ಚಿದೆ: ನಳಿನ್‍ ಕುಮಾರ್ ಕಟೀಲ್

MUST WATCH

udayavani youtube

Aurobindo Ghoseರ ಕನಸಿನ ಭಾರತ ಹೇಗಿತ್ತು ಗೊತ್ತಾ?

udayavani youtube

ಮಂಗಳೂರು: ಕುದ್ರೋಳಿಯಲ್ಲಿ 900 ಕೆ.ಜಿ ಧವಸ ಧಾನ್ಯದಿಂದ ತಿರಂಗಾ ಕಲಾಕೃತಿ ರಚನೆ |

udayavani youtube

ಮರೆತುಹೋದ ಅಗೆಲು ಸೇವೆಯ ಪ್ರಸಾದದ ಊಟ ಮೂರು ದಿನವಾದ್ರೂ ಹಾಳಾಗಿರಲಿಲ್ಲ.. |ಕೊರಗಜ್ಜ ಸ್ವಾಮಿ

udayavani youtube

ಷೇರು ಮಾರುಕಟ್ಟೆ ದಿಗ್ಗಜ ರಾಕೇಶ್ ಜುಂಜುನ್‌ವಾಲಾ ಇನ್ನಿಲ್ಲ

udayavani youtube

ಉಬ್ಬು ಶಿಲ್ಪದಲ್ಲಿ ಅರಳಿದೆ ಅಮರ ಸುಳ್ಯ ಕ್ರಾಂತಿಯ ಚರಿತ್ರೆ

ಹೊಸ ಸೇರ್ಪಡೆ

ಸರ್ಕಾರಿ ಜಾಹೀರಾತಿನಲ್ಲಿ ನೆಹರೂ ಇದ್ದಾರೆ: ಕಾಂಗ್ರೆಸ್‌ ನಾಯಕರಿಗೆ ಸಿಎಂ ತಿರುಗೇಟು

ಸರ್ಕಾರಿ ಜಾಹೀರಾತಿನಲ್ಲಿ ನೆಹರೂ ಇದ್ದಾರೆ: ಕಾಂಗ್ರೆಸ್‌ ನಾಯಕರಿಗೆ ಸಿಎಂ ತಿರುಗೇಟು

ಬ್ರಿಟಿಷರಿಗೆ ಸಾಧ್ಯವಾದಷ್ಟು ತೊಂದರೆ ಕೊಡಬೇಕು ಎನ್ನುವ ಛಲ ಇತ್ತು: ನಾಗಭೂಷಣ ರಾವ್‌

ಬ್ರಿಟಿಷರಿಗೆ ಸಾಧ್ಯವಾದಷ್ಟು ತೊಂದರೆ ಕೊಡಬೇಕು ಎನ್ನುವ ಛಲ ಇತ್ತು: ನಾಗಭೂಷಣ ರಾವ್‌

ಬೆಂಗಳೂರಿನ ಸ್ವಾತಂತ್ರ್ಯ ಚಳವಳಿ ಉಳಿದ ನಗರಗಳಿಗಿಂತ ಭಿನ್ನ

ಬೆಂಗಳೂರಿನ ಸ್ವಾತಂತ್ರ್ಯ ಚಳವಳಿ ಉಳಿದ ನಗರಗಳಿಗಿಂತ ಭಿನ್ನ

tricolour flag

ಮನೆ ಮನೆಗಳಲ್ಲಿ ಹಾರಿಸಿದ ತ್ರಿವರ್ಣ ಧ್ವಜ ಇಳಿಸುವ ಮುನ್ನ ಈ ಅಂಶಗಳನ್ನು ನೆನಪಿಡಿ

news-1

ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.