ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ದ್ವಿಗುಣ

2,035 ಮಂದಿಗೆ ಸೋಂಕು; ಗುಣಮುಖರ ಪ್ರಮಾಣ 4,274

Team Udayavani, Aug 5, 2020, 9:12 AM IST

ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ದ್ವಿಗುಣ

ಬೆಂಗಳೂರು: ನಗರದಲ್ಲಿ ಸೋಂಕಿನಿಂದ ಗುಣಮುಖರಾಗುತ್ತಿರುವ ಸಂಖ್ಯೆ ದ್ವಿಗುಣಗೊಂಡಿದ್ದು, ಮಂಗಳವಾರ ಒಂದೇ ದಿನ 4,274 ಜನ ಸೋಂಕಿನಿಂದ ಮುಕ್ತರಾಗಿ ಬಿಡುಗಡೆಯಾಗಿದ್ದಾರೆ. ಕಳೆದ ಕೇವಲ ಐದು ದಿನಗಳಲ್ಲಿ 9,298 ಜನ ಗುಣಮುಖರಾಗಿದ್ದಾರೆ. ಆ.2 ರಂದು 2,332 ಜನರು ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಬಳಿಕ ಆ.3 ರಂದು 2,693 ಮಂದಿ ಕೋವಿಡ್ ದಿಂದ ಮುಕ್ತಿ ಪಡೆದಿದ್ದರು. ಇದರೊಂದಿಗೆ ಒಟ್ಟಾರೆ 27,877 ಮಂದಿ ಬಿಡುಗಡೆ ಆಗಿದ್ದಾರೆ. ಇನ್ನು ತೀವ್ರ ನಿಗಾಘಟಕದಲ್ಲಿ 322 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಈ ಸಂಖ್ಯೆ ಕೊಂಚ ಇಳಿಕೆಯಾಗಿದೆ.

ಈ ಮಧ್ಯೆ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕ್ರಮದಲ್ಲಿ ಸಾಗಿದೆ. 2,035 ಹೊಸ ಪ್ರಕರಣಗಳು ಮಂಗಳವಾರ ದಾಖಲಾಗಿವೆ. ಇದರೊಂದಿಗೆ ಒಟ್ಟಾರೆ 63,033 ಸೋಂಕಿತರಾಗಿದ್ದಾರೆ. ಈ ಪೈಕಿ 34,021 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆ, ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿಗೆ ಮತ್ತೆ 30 ಮಂದಿ ಬಲಿಯಾಗಿದ್ದು, 22 ಪುರುಷರು ಮತ್ತು 8 ಮಂದಿ ಮಹಿಳೆಯರು ಇದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 1,134ಕ್ಕೆ ಏರಿಕೆಯಾಗಿದೆ.

23,080 ಕಂಟೈನ್ಮೆಂಟ್‌ ವಲಯಗಳು: ನಗರದಲ್ಲಿ ಪ್ರಸ್ತುತ ಕೋವಿಡ್ ಪಾಸಿಟಿವ್‌ ದರ ಶೇ. 17.84ರಷ್ಟಿದ್ದು, ಸಕ್ರಿಯ ಪ್ರಮಾಣ ಶೇ. 54ರಷ್ಟಿದೆ. ಅಲ್ಲದೆ 9,918 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ನಗರದಲ್ಲಿ ಒಟ್ಟು 23,080 ಕಂಟೈನ್ಮೆಂಟ್‌ ವಲಯವಿದ್ದು, ಇದರಲ್ಲಿ 12,050 ಸಕ್ರಿಯ ಕಂಟೈನ್ಮೆಂಟ್‌ ವಲಯಗಳಿವೆ. ಬೆಂಗಳೂರು ದಕ್ಷಿಣದಲ್ಲಿ ಅತಿ ಹೆಚ್ಚು 6,717 ಸಕ್ರಿಯ ವಲಯಗಳಿವೆ.

ಐಐಎಸ್ಸಿಯಲ್ಲೂ ಕೋವಿಡ್  :  ಭಾರತೀಯ ವಿಜ್ಞಾನ ಸಂಸ್ಥೆ (ಐಐಸ್ಸಿ)ಯಲ್ಲಿ ವಿದ್ಯಾರ್ಥಿ ಗಳು, ಬೋಧಕರು, ಸಿಬ್ಬಂದಿ ಮತ್ತು ಅವರ ಕುಟುಂಬದ ಸದಸ್ಯರು ಸೇರಿದಂತೆ ಒಟ್ಟು 19 ಮಂದಿಗೆ ಸೋಂಕು ದೃಢಪಟ್ಟಿದೆ. ಭಾರತೀಯ ವಿಜ್ಞಾನ ಸಂಸ್ಥೆಯಿಂದ ಈ ಸಂಬಂಧ ಪ್ರಕಟಣೆ ಬಿಡುಗಡೆ ಮಾಡಲಾಗಿದ್ದು, ಸೋಂಕಿತ ವ್ಯಕ್ತಿಗಳೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲಾ 50 ಮಂದಿಯನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದೆ.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.