ಆಟವಾಡುವಾಗ ವಿದ್ಯುತ್‌ ತಂತಿ ಸ್ಪರ್ಶ;ಬಾಲಕನ ಸ್ಥಿತಿ ಗಂಭೀರ

Team Udayavani, May 16, 2019, 3:10 PM IST

ಬೆಂಗಳೂರು: ಕ್ರಿಕೆಟ್‌ ಆಡುವ ವೇಳೆ  ಹೈಟೆನ್ಷನ್‌  ವಿದ್ಯುತ್‌ ತಂತಿಯನ್ನು ಸ್ಪರ್ಶಿಸಿ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮತ್ತಿಕೆರೆಯ ನೇತಾಜಿ ಸರ್ಕಲ್‌ ಬಳಿ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿರುವ 14 ವರ್ಷದ ಬಾಲಕನ ಲಿಖಿತ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

15 ದಿನಗಳ ಹಿಂದೆ ಮಹಾಲಕ್ಷ್ಮೀ ಲೇಔಟ್‌ನಲ್ಲಿ ಬಾಲಕನೋರ್ವ ವಿದ್ಯುತ್‌ ಶಾಕ್‌ಗೆ ಗುರಿಯಾಗಿ 15 ದಿನಗಳ ಕಾಲ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಅದೃಷ್ಟವಷಾತ್‌ ಬದುಕಿ ಬಂದಿದ್ದ.

ಬಿಬಿಎಂಪಿ ಮತ್ತು ಬೆಸ್ಕಾಂ ನಿರ್ಲಕ್ಷ್ಯದಿಂದ ಇಂತಹ ಘಟನೆಗಳು ಮರುಕಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ