ತೀವ್ರ ಎದೆನೋವು, ಮತ್ತೆ ಆಸ್ಪತ್ರೆಗೆ ದಾಖಲಾದ ಮಾಜಿ ಸಚಿವ ಡಿ.ಕೆ ಶಿವಕುಮಾರ್

Team Udayavani, Nov 12, 2019, 7:46 AM IST

ಬೆಂಗಳೂರು: ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಸೋಮವಾರ ತಡ ರಾತ್ರಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶೇಷಾದ್ರಿಪುರಂನಲ್ಲಿರುವ ಅಪೊಲೋ ಆಸ್ಪತ್ರೆಗೆ ತಡರಾತ್ರಿ ದಾಖಲಾಗಿದ್ದಾರೆ ಎಂದು ವರದಿಯಾಗಿದ್ದು, ಆಸ್ಪತ್ರೆಗೆ ಯಾರೂ ಕೂಡ ಭೇಟಿ ನೀಡಬೇಡಿ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮೈಸೂರು ಸೇರಿದಂತೆ ಇತರೆ ಜಿಲ್ಲೆಗಳಿಗೆ ಇತ್ತೀಚಿಗೆ ಭೇಟಿ ನೀಡಿದ್ದರು. ತದನಂತರದಲ್ಲಿ ಅಧಿಕ ರಕ್ತದೊತ್ತಡ ಮತ್ತು ಎದೆನೋವು ಕಾಣಿಸಿಕೊಂಡ ಹಿನ್ನಲೆ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಿಹಾರ್​ ಜೈಲಿನಿಂದ ಬಿಡುಗಡೆಯಾದ ನಂತರ ಅವರು ಅಪೊಲೋ ಆಸ್ಪತ್ರೆಯಲ್ಲಿ ಒಂದು ದಿನ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ