ಕಾವೇರಿ ವಿಚಾರದಲ್ಲಿ ರಾಜಕೀಯ ಬಿಟ್ಟು ವ್ಯವಹರಿಸಿ
Team Udayavani, Jun 24, 2018, 11:05 AM IST
ಬೆಂಗಳೂರು: ಕರ್ನಾಟಕವನ್ನು ಹೊರಗಿಟ್ಟು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸಲಾಗಿದೆ ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಈ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ರಾಜ್ಯದ ಹಿತ ಕಾಪಾಡಲು ಗಮನಹರಿಸಿ ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಸುಪ್ರೀಂಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ನೀರು ನಿಯಂತ್ರಣ ಸಮಿತಿಗಳನ್ನು ರಚಿಸಿದೆ. ಇದಕ್ಕೆ ಹೆಸರುಗಳನ್ನು ಶಿಫಾರಸು ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿದ್ದರೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿಲ್ಲ.
ಸರ್ಕಾರ ಹೆಸರು ಕಳುಹಿಸಿಕೊಡದೇ ಇದ್ದರೂ ಕೇಂದ್ರ ಸರ್ಕಾರ ಪ್ರಾಧಿಕಾರ ಮತ್ತು ಸಮಿತಿ ರಚಿಸಿ ಹೊರಡಿಸಿರುವ ಆದೇಶದಲ್ಲಿ ಅಧಿಕಾರಿಯ ಹುದ್ದೆಗಳನ್ನು ನಮೂದಿಸಲಾಗಿದೆ. ಇದರಿಂದ ರಾಜ್ಯವನ್ನು ಹೊರಗಿಡಲಾಗಿದೆ ಎಂಬ ಮುಖ್ಯಮಂತ್ರಿಗಳ ಆರೋಪ ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ