ಸರಸ್ವತಿ ಪಕ್ಕ ಬುದ್ಧನ ಪ್ರತಿಮೆ ಸ್ಥಾಪಿಸಲು ನಿರ್ಧಾರ

Team Udayavani, May 9, 2019, 3:05 AM IST

bang-univercity

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಸರಸ್ವತಿ ಹಾಗೂ ಬುದ್ಧ ಪ್ರತಿಮೆ ಪ್ರತಿಷ್ಠಾಪನೆ ವಿಚಾರದಲ್ಲಿ ಉದ್ಭವಿಸಿದ್ದ ವಿವಾದ ತೆರೆಬಿದ್ದಿದ್ದು, ಮೂಲ ಸ್ಥಾನದಲ್ಲೇ ಸರಸ್ವತಿ ದೇವಿಯ ಪ್ರತಿಮೆ ಸ್ಥಾಪಿಸಿ ಪಕ್ಕದಲ್ಲಿ ಬುದ್ಧನ ಪ್ರತಿಮೆ ಪ್ರತಿಷ್ಠಾಪಿಸಲು ಆಡಳಿತ ಮಂಡಳಿ ಅಧಿಕೃತ ತೀರ್ಮಾನ ಕೈಗೊಂಡಿದೆ.

ಈ ಹಿಂದೆ ಸ್ಥಾಪಿಸಲಾಗಿದ್ದ ಮೂಲ ಸ್ಥಳದಲ್ಲಿ ಸರಸ್ವತಿ ದೇವಿಯ ಪ್ರತಿಮೆ ಯಥಾಸ್ಥಿತಿಯಲ್ಲಿ ಪ್ರತಿಷ್ಠಾಪಿಸಲಾಗುವುದು, ಅದಕ್ಕೆ ಸಮಾನಂತರವಾಗಿ ಪ್ರತ್ಯೇಕ ಪೀಠವನ್ನು ನಿರ್ಮಿಸಿ ಬುದ್ಧನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಎರಡೂ ಪರತವಿಗ್ರಹಗಳ ತೂಕವನ್ನು ಕಾಯ್ದುಕೊಳ್ಳುವಂತೆ ತಾಂತ್ರಿಕ(ಸಿವಿಲ್‌) ವ್ಯಕ್ತಿಗಳ ಸಲಹೆ ಪಡೆದು ಕಟ್ಟಡಕ್ಕೆ ಯಾವುದೇ ಹಾನಿಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಬುದ್ಧ ಪ್ರತಿಮೆಗೆ ಪ್ರತ್ಯೇಕ ಪೀಠ ಸ್ಥಾಪಿಸುವ ಅವಶ್ಯಕತೆ ಇರುವುದರಿಂದ ಅಲ್ಲಿಯವರೆಗೂ ಬುದ್ಧನ ಪ್ರತಿಮೆಯನ್ನು ಕಾಪಾಡಿಕೊಳ್ಳುವುದು ಹಾಗೂ ಎರಡು ಪೀಠಗಳ ನಿರ್ಮಾಣದ ನಂತರ ಸರಸ್ವತಿ ದೇವಿ ಮತ್ತು ಬುದ್ಧನ ವಿಗ್ರಹಗಳನ್ನು ಏಕಕಾಲಕ್ಕೆ ಪ್ರತಿಷ್ಠಾಪಿಸುವ ನಿರ್ಧಾರ ಮಾಡಲಾಗಿದೆ ಎಂದು ಬೆಂವಿವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ವವಿದ್ಯಾಲಯದ ಶಿಕ್ಷಕರು, ಶಿಕ್ಷಕೇತರ ನೌಕರರು ಮತ್ತು ವಿದ್ಯಾರ್ಥಿಗಳು ಯಾವುದೇ ಅಹಿತಕರ ಘಟನೆಗೆ ಎಡೆಮಾಡಿಕೊಡದೆ ಶಾಂತಿ ಮತ್ತು ಸಹನೆಯಿಂದ ಎರಡು ಪ್ರತಿಮೆಯ ಅನುಷ್ಠಾನಕ್ಕೆ ಸಹಕರಿಸಬೇಕು ಎಂದು ವಿಶ್ವವಿದ್ಯಾಲಯ ಮನವಿ ಮಾಡಿದೆ. ಸಿಂಡಿಕೇಟ್‌ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಂದು ವರ್ಗದ ಪ್ರಾಧ್ಯಾಪಕರು ಹಾಗೂ ಸಂಶೋಧನಾ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿಯಲಾಗಿದೆ ಎಂಬ ಆರೋಪಗಳೂ ಕೇಳಿಬಂದಿವೆ.

ಆಡಳಿತ ಮಂಡಳಿಯ ಕಚೇರಿಯ ಮುಖ್ಯದ್ವಾರದ ಒಳಭಾಗದಲ್ಲಿದ್ದ ಸರಸ್ವತಿ ಪ್ರತಿಮೆಯ ಜಾಗದಲ್ಲಿ ಯಾವುದೇ ಪೂರ್ವಾನುಮತಿ ಪಡೆಯದೇ ಗೌತಮ ಬುದ್ಧನ ಪ್ರತಿಮೆಯನ್ನು ಕೆಲವು ಗಂಟೆಯಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಬುದ್ಧನ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ್ದು ಯಾಕೆ ಎಂಬುದೂ ವಿವಿಗೆ ಗೊತ್ತಿಲ್ಲ ಮತ್ತು ಪ್ರತಿಷ್ಠಾಪಿಸಿದವರ ವಿರುದ್ಧ ವಿಶ್ವವಿದ್ಯಾಲಯ ಕ್ರಮವೂ ಕೈಗೊಂಡಿಲ್ಲ.

ಮಂಗಳವಾರ ರಾತ್ರಿ ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌ ಅವರು ಸಭೆ ಕರೆದು, ಐದು ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಐದು ನಿರ್ಧಾರವು ಸರಸ್ವತಿ ಪ್ರತಿಮೆಯ ಜಾಗದಲ್ಲಿ ಬುದ್ಧನ ಪ್ರತಿಮೆ ಇಟ್ಟವರ ಪರವಾಗಿಯೇ ಇದೆ ಎಂದು ದೂರಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.