ಕಪ್ಪು ಶಿಲೀಂಧ್ರ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿ: ರಾಜ್ಯಸರ್ಕಾರಕ್ಕೆ HDK ಆಗ್ರಹ


Team Udayavani, May 21, 2021, 9:59 AM IST

kumarswamy

ಬೆಂಗಳೂರು: ರಾಜ್ಯ ಸರ್ಕಾರ ಕಪ್ಪು ಶಿಲೀಂಧ್ರ ಸೋಂಕನ್ನು ಈ ಕೂಡಲೇ ‘ಸಾಂಕ್ರಾಮಿಕ’ ಎಂದು ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ ಅವರು, ಬ್ಲ್ಯಾಕ್ ಫಂಗಸ್  (ಮ್ಯೂಕರ್‌ ಮೈಕೊಸಿಸ್‌) ಮಾರಕ ಕಾಯಿಲೆಯನ್ನು ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್‌, ಚಂಡೀಗಢದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರವೂ ಇದನ್ನು ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯಗಳಿಗೆ ಸದ್ಯ ಹೇಳಿದೆ. ಅದ್ದರಿಂದ ಕರ್ನಾಟಕ ಸರ್ಕಾರವೂ ಈ ಕುರಿತು ಘೋಷಣೆ ಹೊರಡಿಸಬೇಕೆಂದರು.

ರೋಗದ ತಡೆಗಾಗಿ ತ್ವರಿತ, ಅಗತ್ಯ ಕ್ರಮ ಕೈಗೊಳ್ಳಲು, ಮುಂಚೂಣಿಯಲ್ಲಿ ಹೋರಾಡುವವರನ್ನು ರಕ್ಷಿಸಲು ‘1897ರ ಸಾಂಕ್ರಾಮಿಕ ರೋಗ ತಡೆ ಕಾಯಿದೆ’ಯನ್ನು ಕಪ್ಪು ಶಿಲೀಂಧ್ರ ರೋಗದ ವಿಚಾರದಲ್ಲಿ ಜಾರಿ ಮಾಡಲೇಬೇಕಾಗಿದೆ. ಕಪ್ಪು ಶಿಲೀಂಧ್ರ ರೋಗದಲ್ಲಿ ಸಾವಿನ ಸಾಧ್ಯತೆಗಳು ಹೆಚ್ಚಿವೆ. ಮಾರಕ, ಭಯಾನಕವೂ ಆಗಿರುವ ಈ ಕಾಯಿಲೆಯನ್ನು ಹಿಮ್ಮೆಟ್ಟಿಸಲೇಬೇಕಿದೆ.

ಇದನ್ನೂ ಓದಿ:  ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.59 ಲಕ್ಷ ಕೋವಿಡ್ ಪ್ರಕರಣ ಪತ್ತೆ, 4,200 ಮಂದಿ ಸಾವು

ಸಾಂಕ್ರಾಮಿಕ ರೋಗಗಳ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರ್ಕಾರ ತೋರುತ್ತಿರುವ ಆಲಸ್ಯ ಸರಿಯಲ್ಲ. ಕಪ್ಪು ಶಿಲೀಂಧ್ರ ರೋಗದ ನಿರ್ವಹಣೆಯಲ್ಲಿ ಸರ್ಕಾರ ಪದೇ ಪದೆ ಎಡವುತ್ತಿರುವುದು ಕಾಣಿಸುತ್ತಿದೆ. ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳ ದಾಸ್ತಾನು ಹೊಂದದೇ ಇರುವುದು, ಅಗತ್ಯ ಪ್ರಮಾಣದ ಔಷಧವನ್ನು ಕೇಳಿ ಪಡೆದುಕೊಳ್ಳದೇ ಇರುವುದು ಇದಕ್ಕೆ ಸಾಕ್ಷಿ.

ಕೋವಿಡ್‌ನಿಂದ ಗುಣವಾದವರೇ ಹೆಚ್ಚಾಗಿ ಕಪ್ಪು ಶಿಲೀಂಧ್ರ ಕಾಯಿಲೆ ತುತ್ತಾಗುತ್ತಾರೆ ಎಂದು ತಜ್ಞರು ಹೇಳಿದ್ದಾರೆ. ಹಾಗಾದರೆ, ಕಪ್ಪು ಶಿಲೀಂಧ್ರದ ಸಂಭಾವ್ಯ ಅಪಾಯ ಕರ್ನಾಟಕಕ್ಕೆ ಹೆಚ್ಚು. ಕೋವಿಡ್‌ ಪ್ರಕರಣಗಳು ಕರ್ನಾಟಕದಲ್ಲಿ ಅತ್ಯಧಿಕ ಪ್ರಮಾಣದಲ್ಲಿವೆ. ಅಂದರೆ, ಕಪ್ಪು ಶಿಲೀಂಧ್ರ ರೋಗವೂ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಅಪಾಯವಿದೆ.

ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು. ಈ ಕಾಯಿಲೆಯ ಚಿಕಿತ್ಸೆಗೆ ಬೇಕಿರುವ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು. ಇದರ ವಿರುದ್ಧ ಹೋರಾಡಲು ಅಗತ್ಯವಿರುವ ನೇತ್ರ ತಜ್ಞರು, ಇಎನ್‌ಟಿ ಪರಿಣತರು, ಜನರಲ್ ಸರ್ಜನ್‌ಗಳು, ನರರೋಗ ತಜ್ಞರು, ದಂತವೈದ್ಯರನ್ನು ಸರ್ಕಾರ ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ಲ್ಯಾಕ್‌ ಜತೆಗೆ ವೈಟ್‌ ಕಾಟ

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.