ಕೊಡಗಿಗೆ ಪರಿಹಾರ ಸಾಮಗ್ರಿ ರವಾನೆ


Team Udayavani, Aug 21, 2018, 12:01 PM IST

kodaginatta.jpg

ಬೆಂಗಳೂರು: ಬಿಬಿಎಂಪಿ ಹಾಗೂ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳಿಂದ ಸಂಗ್ರಹಿಸಿದ ಪರಿಹಾರ ಸಾಮಗ್ರಿಗಳನ್ನು ಹೊತ್ತು ಕೊಡಗಿನತ್ತ ತೆರಳಿದ ಟ್ರಕ್‌ಗಳಿಗೆ  ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಸೋಮವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದರು.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೊಡಗು ಜಿಲ್ಲೆಯ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಆ ಹಿನ್ನೆಲೆಯಲ್ಲಿ ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿ, ನೌಕರರು ಸಹ ನಿಂತಿದ್ದು, ಸಂತ್ರಸ್ತರ ನೆರವಿಗಾಗಿ 3.18 ಕೋಟಿ ರೂ. ನೀಡಿದ್ದಾರೆ. ಅದರಲ್ಲಿ 1 ಕೋಟಿ ರೂ. ಕೇರಳ ರಾಜ್ಯಕ್ಕೆ ಕಳುಹಿಸಿ, ಉಳಿದ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಸಿದ್ದಾರ್ಥ ಶಿಕ್ಷಣ ಸಂಸ್ಥೆ ಹಾಗೂ ಬಿಬಿಎಂಪಿಯಿಂದ ತಲಾ ಎರಡು ಟ್ರಕ್‌ ಬೆಡ್‌ಶೀಟ್‌, ನೀರು, ಬಿಸ್ಕೆಟ್‌ , ಬೇಳೆಕಾಳುಗಳು ಸೇರಿದಂತೆ ಇತರೆ ಸಾಮಗ್ರಿಗಳು ಹಾಗೂ ಪರಿಹಾರ ಪರಿಕರಗಳನ್ನು ಕಳುಹಿಸಿದ್ದು, ಮೈಸೂರು, ಮಂಗಳೂರು, ಹಾಸನದಲ್ಲಿ ಕೇಂದ್ರಗಳನ್ನು ತೆರೆಯಲಾಗಿದೆ. ಸಂತ್ರಸ್ತರ ನೆರವಿಗೆ ಧಾವಿಸುವ ದಾನಿಗಳು ಅಗತ್ಯ ಪದಾರ್ಥಗಳನ್ನು ಇಲ್ಲಿಗೆ ತಲುಪಿಸಿದರೆ, ಅಲ್ಲಿಂದ ಕೊಡಗಿನ ಜನರಿಗೆ ಪೂರೈಸಲಾಗುವುದು ಎಂದು ಪರಮೇಶ್ವರ್‌ ತಿಳಿಸಿದರು.  

ಇದೇ ವೇಳೆ ಮೇಯರ್‌ ಆರ್‌.ಸಂಪತ್‌ರಾಜ್‌, ಉಪಮೇಯರ್‌ ಪದ್ಮಾವತಿ ಹಾಗೂ ಆಡಳಿತ ಪಕ್ಷ ನಾಯಕ ಎಂ.ಶಿವರಾಜು ಪಾಲಿಕೆಯ ವತಿಯಿಂದ ಕೊಡಗು ನಿರಾಶ್ರಿತರಿಗಾಗಿ 2.80 ಕೋಟಿ ರೂ. ಚೆಕ್‌ ಹಾಗೂ ಕೇರಳ ರಾಜ್ಯಕ್ಕೆ 1 ಕೋಟಿ ರೂ. ಮೊತ್ತದ ಚೆಕ್‌ಅನ್ನು ಪರಮೇಶ್ವರ್‌ ಅವರಿಗೆ ಹಸ್ತಾಂತರಿಸಿದರು. ಸಚಿವ ಸಾ.ರಾ.ಮಹೇಶ್‌, ಆಯುಕ್ತ ಮಂಜನಾಥ್‌ಪ್ರಸಾದ್‌, ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌.ರಾಜು ಉಪಸ್ಥಿತರಿದ್ದರು.  

ಸ್ವತ್ಛತಾ ಕಾರ್ಯಕ್ಕಾಗಿ 300 ಮಂದಿ ಪೌರಕಾರ್ಮಿಕರು: ಪಾಲಿಕೆಯಿಂದ ಈಗಾಗಲೇ 100 ಇ-ಶೌಚಾಲಯಗಳನ್ನು ಕಳುಹಿಸಲಾಗಿದ್ದು, ಪರಿಹಾರ ಕಾರ್ಯಗಳಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಬೆಂಗಳೂರಿನಿಂದ ಒದಗಿಸಲಾಗುವುದು. ಅದರಂತೆ ಕೊಡಗಿನಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಹಾಗೂ ಸ್ವತ್ಛತಾ ಕಾರ್ಯಕ್ಕಾಗಿ ಪಾಲಿಕೆಯ 300 ಮಂದಿ ಪೌರಕಾರ್ಮಿಕರು ಕುಶಾಲನಗರಕ್ಕೆ ಹೋಗಿದ್ದಾರೆ.

ಜತೆಗೆ ನೀರು, ಒಳಚರಂಡಿ ಸಮಸ್ಯೆಗಳ ನಿವಾರಣೆಗೆ ಜಲಮಂಡಳಿಯ ಯಂತ್ರೋಪಕರಣಗಳು ಹಾಗೂ ಸಿಬ್ಬಂದಿಯನ್ನು ಸಹ ಕಳುಹಿಸಿಕೊಡಲಾಗಿದೆ ಎಂದು ಪರಮೇಶ್ವರ್‌ ತಿಳಿಸಿದರು.   ಫೋಟೋ ಕ್ಯಾಪ್ಷನ್‌: ಬಿಬಿಎಂಪಿ ಹಾಗೂ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳಿಂದ ಸಂಗ್ರಹಿಸಿದ ಪರಿಹಾರ ಸಾಮಗ್ರಿಗಳನ್ನು ಹೊತ್ತು ಕೊಡಗಿನತ್ತ ತೆರಳಿದ ಟ್ರಕ್‌ಗಳಿಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಸೋಮವಾರ ಚಾಲನೆ ನೀಡಿದರು.

ಟಾಪ್ ನ್ಯೂಸ್

LIC

LIC ಆರೋಗ್ಯ ವಿಮೆಗೆ : ಖಾಸಗಿ ಕಂಪೆನಿ ಖರೀದಿ?

1-asaasasa

Sikkim ಭಾರೀ ಮಳೆ: ಭೂಕುಸಿತದಲ್ಲಿ ಸಿಲುಕಿದ 1,200 ಪ್ರವಾಸಿಗರು

bjpBSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

BSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Charmady Ghat: ಎರಡನೇ ದಿನವೂ ಕಾಡಾನೆ ಪ್ರತ್ಯಕ್ಷ

Charmady Ghat: ಎರಡನೇ ದಿನವೂ ಕಾಡಾನೆ ಪ್ರತ್ಯಕ್ಷ

Boliyar case ಹೊರಗಿನವರು ಯಾರು: ಬಿಜೆಪಿ ಪ್ರಶ್ನೆ

Boliyar case ಹೊರಗಿನವರು ಯಾರು: ಬಿಜೆಪಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Bengaluru: ರೌಡಿಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

9-

Bengaluru:ಕಳ್ಳತನ ಮಾಡಿದ್ದಕ್ಕೆ ಗಾರ್ಡ್‌ಗಳಿಂದ ಕೈಕಾಲು ಕಟ್ಟಿ ಹಲ್ಲೆ: ಓರ್ವ ವ್ಯಕ್ತಿ ಸಾವು

7-

Bengaluru: ತನ್ನ ಮಗುವನ್ನೇ ಕತ್ತು ಹಿಸುಕಿ ಕೊಂದ ಸಾಫ್ಟ್ವೇರ್‌ ಉದ್ಯೋಗಿ ತಾಯಿ ಸೆರೆ

24

Namma clinic: ಸಾರ್ವಜನಿಕ ಸ್ಥಳದಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್‌ ಪ್ರಾರಂಭ; ದಿನೇಶ್‌

7-bng

ಬೈಕ್‌ ಕದಿಯುತ್ತಿದ್ದ Food ಡೆಲಿವರಿ ಬಾಯ್‌ ಸೆರೆ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

LIC

LIC ಆರೋಗ್ಯ ವಿಮೆಗೆ : ಖಾಸಗಿ ಕಂಪೆನಿ ಖರೀದಿ?

1-asaasasa

Sikkim ಭಾರೀ ಮಳೆ: ಭೂಕುಸಿತದಲ್ಲಿ ಸಿಲುಕಿದ 1,200 ಪ್ರವಾಸಿಗರು

bjpBSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

BSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

pinarayi

ಅಗ್ನಿ ದುರಂತ; ಕುವೈಟ್‌ಗೆ ತೆರಳಲು ಸಚಿವೆಗೆ ಕೇಂದ್ರ ಅಡ್ಡಿ: ಕೇರಳ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.