ಆರ್‌ಟಿಇ ಸೀಟುಗಳಿಗೆ ಬೇಡಿಕೆ ಹೆಚ್ಚಳ

Team Udayavani, Mar 21, 2022, 12:09 PM IST

8

ಬೆಂಗಳೂರು: ಕೊರೊನಾದಿಂದ ಮಧ್ಯಮ ಮತ್ತು ಕೆಳ ವರ್ಗದ ಮೇಲೆ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು, ಶಾಲಾ ಪ್ರವೇಶಾತಿ ಮೇಲೆಯೂ ಬೀರಿದೆ. ಪರಿಣಾಮ, ಈ ಬಾರಿ ಖಾಸಗಿ ಶಾಲೆಗಳಲ್ಲಿ ನೀಡುವ ಶೇ.25ರಷ್ಟು ಆರ್‌ಟಿಇ ಸೀಟುಗಳಿಗೆ ಬೇಡಿಕೆ ಉಂಟಾಗಿದೆ.

ಹಿಂದಿನ ವರ್ಷಗಳಲ್ಲಿ ಆರ್‌ಟಿಇ ಸೀಟುಗಳಿಗೆ ಹೆಚ್ಚಿನ ಬೇಡಿಕೆ ಇರಲಿಲ್ಲ. ಆದರೆ, ಈ ಬಾರಿ ಕೊರೊನಾ ಆರ್ಥಿಕ ಹೊಡೆತ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಿಗೆ ಸೇರಿಸಲು ಲಕ್ಷಾಂತರ ರೂ. ಶುಲ್ಕ ಪಾವತಿ ಹೊರೆಯಿಂದ ತಪ್ಪಿಸಿಕೊಳ್ಳಲು ಪೋಷಕರು ಆರ್‌ಟಿಇ ಮೊರೆ ಹೋಗಿದ್ದಾರೆ.

ಪ್ರಸಕ್ತ ಸಾಲಿನಲ್ಲಿ 18,555 ಸೀಟುಗಳಿದ್ದು, 20,414 ಅರ್ಜಿಗಳು ಸಲ್ಲಿಕೆಯಾಗಿವೆ. ನಿಗದಿತ ಸೀಟುಗಳಿಗಿಂತ ಸುಮಾರು ಎರಡು ಸಾವಿರ ಅರ್ಜಿಗಳು ಬಂದಿವೆ. ಈ ಪೈಕಿ ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸೀಟುಗಳ ದಾಖಲಾಗಿವೆ. 1,276 ಸೀಟುಗಳಿಗೆ 3,989 ಅರ್ಜಿಗಳು ದಾಖಲಾಗಿದ್ದು, ನಂತರ ಸ್ಥಾನದಲ್ಲಿ ಮೈಸೂರು ಜಿಲ್ಲೆಯಲ್ಲಿರುವ 928 ಸೀಟುಗಳಿಗೆ 2,600 ಅರ್ಜಿಗಳು ದಾಖಲಾಗಿವೆ.

2021-22ನೇ ಸಾಲಿನಲ್ಲಿ ಲಭ್ಯವಿದ್ದ 14,036 ಸೀಟುಗಳಿಗೆ 11,531 ಅರ್ಜಿಗಳಷ್ಟೇ ಸಲ್ಲಿಕೆಯಾಗಿದ್ದವು. ಅಂತಿಮವಾಗಿ ಕೇವಲ 3,070 ಸೀಟುಗಳು ಭರ್ತಿಯಾಗಿದ್ದವು. ಅದೇ ರೀತಿ 2020-21ನೇ ಸಾಲಿನಲ್ಲಿ 17,453 ಸೀಟುಗಳಿಗೆ 11,026 ಅರ್ಜಿಗಳಷ್ಟೇ ದಾಖಲಾಗಿದ್ದವು. ಈ ಪೈಕಿ 3,700 ಸೀಟುಗಳು ಭರ್ತಿಯಾಗಿದ್ದವು. ಆದರೆ, ಈ ಬಾರಿ ಕೊರಾನಾ ಪರಿಣಾಮ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಆಸಕ್ತಿ ತೋರಿದ್ದಾರೆ.

ಆಟೋಮೊಬೈಲ್ಸ್‌ನಲ್ಲಿ ಮಾರುಕಟ್ಟೆ ವಿಭಾಗದಲ್ಲಿ ಮಾಡುತ್ತಿದ್ದ ಕೆಲಸವನ್ನು ಕೊರೊನಾ ವೇಳೆ ಕಳೆದುಕೊಂಡಿದ್ದೇನೆ. ಈಗ ಜೀವನ ನಿರ್ವಹಣೆಗಾಗಿ ಗಾರ್ಮೆಂಟ್ಸ್‌ ಕೆಲಸಕ್ಕೆ ಮಾಡುತ್ತಿದ್ದೇನೆ. ಮಗುವನ್ನು ಶಾಲೆಗೆ ಕಳುಹಿಸಬೇಕು. ಖಾಸಗಿ ಶಾಲೆಯಲ್ಲಿ ಹೆಚ್ಚಿನ ಶುಲ್ಕ ಪಾವತಿಸಲು ಹಣವಿಲ್ಲ. ಹೀಗಾಗಿ, ಆರ್‌ಟಇ ಸೀಟು ಸಿಗಬಹುದು ಎಂಬ ಆಸೆಯಿಂದ ಅರ್ಜಿ ಸಲ್ಲಿಸಿದ್ದೇನೆಂದು ಗಿರಿನಗರದ ನಾಗರಾಜ್‌ ಹೇಳುತ್ತಾರೆ.

ಕೊರೊನಾದಿಂದ ಹಿಂದಿನ ಎರಡು ವರ್ಷಗಳು ಶಾಲೆಗಳು ಸರಿಯಾಗಿ ನಡೆದಿರಲಿಲ್ಲ. ಇದರ ಜೊತೆಗೆ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದು, ಪೋಷಕರಿಗೂ ಆರ್ಥಿಕವಾಗಿ ಸಮಸ್ಯೆಯಾಗಿದೆ. ಖಾಸಗಿ ಶಾಲೆಗಳಲ್ಲಿ ಸೀಟು ಸಿಗಬಹುದು ಎಂಬ ಉದ್ದೇಶದಿಂದ ಅರ್ಜಿ ಸಲ್ಲಿಸಿರಬಹುದು.

  • ಪ್ರಸನ್ನಕುಮಾರ್‌ ಎಂ., ನಿರ್ದೇಶಕರು, ಪ್ರಾಥಮಿಕ ಶಿಕ್ಷಣ

ಎನ್‌.ಎಲ್‌.ಶಿವಮಾದು

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.