ತೃತೀಯ ಹಂತದ ಸಂಸ್ಕರಿಸಿದ ನೀರಿಗೆ ಬೇಡಿಕೆ

Team Udayavani, Sep 19, 2019, 3:07 AM IST

sanska

ಬೆಂಗಳೂರು: ಜಲಮಂಡಳಿ ಪೂರೈಸುತ್ತಿರುವ ತೃತೀಯ ಹಂತದ ಸಂಸ್ಕರಿಸಿದ ನೀರಿಗೆ ಸಾರ್ವಜನಿಕರಿಂದ ಬೇಡಿಕೆ ಆರಂಭವಾಗಿದೆ. ಹೀಗಾಗಿ ಜಲಮಂಡಳಿ ಅಧಿಕಾರಿಗಳು, ನಗರದ ಪ್ರಮುಖ ರಿಯಲ್‌ ಎಸ್ಟೇಟ್‌ ಕಂಪನಿಗಳ ಜತೆ ಮಾತುಕತೆಗೆ ಮುಂದಾಗಿದ್ದಾರೆ.

ಸದ್ಯ ಜಲಮಂಡಳಿಗೆ ಸಂಸ್ಕರಿಸಿದ ನೀರು ಪೂರೈಸುವಂತೆ ಸಾರ್ವಜನಿಕರಿಂದ ಹತ್ತಾರು ಕರೆಗಳು ಬರುತ್ತಿವೆ. ಈಗಾಗಲೇ ವೃಷಭಾವತಿ ಕಾಲುವೆಯ ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ನಿತ್ಯ 4 ಸಾರು ನೀರು ಪೂರೈಸಲಾಗುತ್ತಿದೆ. ಜತೆಗೆ ಪೀಣ್ಯ, ಹೊಸಕೋಟೆ, ನೆಲಮಂಗಲ, ಬ್ಯಾಟರಾಯನಪುರ, ನಾಯಂಡಹಳ್ಳಿ, ವಿದ್ಯಾರಣ್ಯಪುರ ಭಾಗದಿಂದ ಸಂಸ್ಕರಿಸಿದ ನೀರಿಗೆ ಬೇಡಿಕೆ ಬರುತ್ತಿದೆ.

ನಗರದ ಕೆಲ ಕಂಪನಿಗಳು ಸ್ವಯಂ ನಿರ್ಧಾರದಿಂದ ಸಂಸ್ಕರಿಸಿದ ತ್ಯಾಜ್ಯ ನೀರು ಬಳಕೆಗೆ ಮುಂದೆ ಬಂದಿದ್ದು, ಪ್ರಮುಖವಾಗಿ ನಾಯಂಡಹಳ್ಳಿ ಬಳಿಯ ಕೆಬಿಆರ್‌ ಕನ್‌ಸ್ಟ್ರಕ್ಟರ್‌ ಕಂಪನಿ, ನಾಗಸಂದ್ರದ ಐಕ್ಯ ಇಂಟರ್‌ನ್ಯಾಷನಲ್‌ ಫ‌ರ್ನಿಚರ್‌ ಕಂಪನಿಯು (ನಿತ್ಯ 20 ಸಾವಿರ ಲೀ), ಹೊಸಕೋಟೆಯ ರಸ್ತೆ ಕಾಮಗಾರಿ ಕಂಪನಿ, ವಿಮಾನ ನಿಲ್ದಾಣ ರಸ್ತೆಯ ಟಾಟಾ ಕನ್‌ಸ್ಟ್ರಕ್ಟರ್‌ ಕಂಪನಿಗಳು ಮುಂದೆ ಬಂದಿವೆ. ಕೆಲವು ಕಂಪನಿಗಳಿಗೆ ಪೂರೈಸಲಾಗುತ್ತಿದೆ ಎಂದು ಜಲಮಂಡಳಿ ಸಂಸ್ಕರಿಸಿದ ತ್ಯಾಜ್ಯ ನೀರು ಮಾರಾಟ ಅಧಿಕಾರಿ ರುದ್ರೇಗೌಡ ತಿಳಿಸಿದರು.

ಕಂಪನಿಗಳ ಸಭೆ: ಜಲಮಂಡಳಿಯು ನಗರದ ದೊಡ್ಡ ರಿಯಲ್‌ ಎಸ್ಟೇಟ್‌ ಕಂಪನಿಗಳನ್ನು ಸಂಸ್ಕರಿಸಿದ ತ್ಯಾಜ್ಯನೀರು ಕಟ್ಟಡ ಕಾಮಗಾರಿಗೆ ಬಳಸುವ ಸಂಬಂಧ ಮಾತುಕತೆ ನಡೆಸುತ್ತಿದೆ. ಜತೆಗೆ ತಿಂಗಳಾಂತ್ಯಕ್ಕೆ ಕಂಪನಿಗಳ ಮುಖ್ಯಸ್ಥರೊಡನೆ ಸಭೆ ನಡೆಸಲು ಸಜ್ಜಾಗಿದೆ. ಸಂಸ್ಕರಿಸಿದ ತ್ಯಾಜ್ಯ ನೀರಿನ ಬಳಕೆ ಬಗ್ಗೆ ಮನವರಿಕೆ ಮಾಡಿ, ರಿಯಲ್‌ ಎಸ್ಟೇಟ್‌ ಸಂಸ್ಥೆಗಳಿಂದ ನಿರ್ಮಿಸುವ ಕಟ್ಟಡ, ಅಪಾರ್ಟ್‌ಮೆಂಟ್‌, ವಿಲ್ಲಾ ಸೇರಿದಂತೆ ಎಲ್ಲಾ ಕಾಮಗಾರಿಗಳಿಗೆ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಬಳಸಲು ಸಭೆಯಲ್ಲಿ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತದೆ.

ನಂತರ ಕಾಂಕ್ರೀಟ್‌ ರೆಡಿಮಿಕ್ಸರ್‌ ಗುತ್ತಿಗೆದಾರರ ಸಭೆ ಕರೆಯಲು ನಿರ್ಧರಿಸಲಾಗಿದೆ. ಈ 2 ಸಭೆಗಳಲ್ಲಿ ಸಂಸ್ಕರಿಸಿದ ನೀರು ಕೊಂಡುಕೊಳ್ಳುವ ಕುರಿತು ಒಪ್ಪಂದಗಳಾದರೆ ಸಂಸ್ಕರಿಸುತ್ತಿರುವ ತ್ಯಾಜ್ಯ ನೀರಲ್ಲಿ ಬಹುಪಾಲು ಮಾರಾಟವಾಗಲಿದೆ ಎನ್ನುತ್ತಾರೆ ಜಲಮಂಡಳಿ ಅಧಿಕಾರಿಗಳು.

ನಿರ್ವಹಣೆ ವಿಭಾಗದ ಎಂಜಿನಿಯರ್‌ಗಳ ಸಭೆ: ಜಲಮಂಡಳಿಯು ಸಂಸ್ಕರಿಸಿದ ತ್ಯಾಜ್ಯನೀರಿನ ಬಳಕೆ ಹಾಗೂ ಮಾರಾಟ ಪ್ರೋತ್ಸಾಹಿಸಲು ಅಗತ್ಯ ಕ್ರಮಕೈಗೊಳ್ಳುವ ಕುರಿತು ಉಪವಿಭಾಗಗಳ ನಿರ್ವಹಣೆ ವಿಭಾಗದ ಎಂಜಿನಿಯರ್‌ಗಳ ಸಭೆ ನಡೆಸುತ್ತಿದೆ. ಸದ್ಯ 4 ವಿಭಾಗಗಳ ಕಡೆಗಳಲ್ಲಿ ಸಭೆ ನಡೆಸಿ, ಅಲ್ಲಿನ ಎಂಜಿನಿಯರ್‌ಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಕ್ರಮಕ್ಕೆ ಮುಂದಾಗುವಂತೆ ತಿಳಿಸಿದೆ.

ಈಗಾಗಲೇ ಜಲಮಂಡಳಿ, ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಕೊಳವೆಬಾವಿ ನೀರು ಬಳಸಲು ಕಡಿವಾಣ ಹಾಕಿದೆ. ಕೊಳವೆಬಾವಿ ಕೊರೆಯಲು ಅನುಮತಿ ನೀಡುವಾಗಲೇ ಕಟ್ಟಡ ನಿರ್ಮಾಣ ಉದ್ದೇಶಕ್ಕೊ ಅಥವಾ ಕುಡಿಯುವ ನೀರಿಗಾಗಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಎಂಜಿನಿಯರ್‌ಗಳಿಗೆ ಸೂಚಿಸಿದೆ.

ಬಿಬಿಎಂಪಿ ಜತೆ ಮಾತುಕತೆ: ಈ ಮಧ್ಯೆ, ಸಂಸ್ಕರಿಸಿದ ನೀರು ಬಳಕೆ ಕುರಿತು ಬಿಬಿಎಂಪಿ ಅಧಿಕಾರಿಗಳ ಜತೆ ಮಾತುಕತೆ ನಡೆಸಲಾಗುತ್ತಿದೆ. ಬಿಬಿಎಂಪಿ ಜತೆಗೂ ಒಪ್ಪಂದ ಮಾಡಿಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಎಲ್ಲಾ ಕಾಮಗಾರಿ, ಶೌಚಾಲಯ ಹಾಗೂ ಉದ್ಯಾನ ನಿರ್ವಹಣೆಗಳಿಗೆ ಸಂಸ್ಕರಿಸಿದ ನೀರು ಪೂರೈಕೆ ಮಾಡಲಾಗುವುದು ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದರು.

ಜಲಮಂಡಳಿಯು ತೃತೀಯ ಹಂತದ ಸಂಸ್ಕರಿಸಿದ ನೀರಿನ ಮಾರಟಕ್ಕೆ ಸಂಪೂರ್ಣ ಸಿದ್ಧವಿದೆ. ನಿರ್ಮಾಣ ವಲಯದಲ್ಲೂ ಸಂಸ್ಕರಿಸಿದ ನೀರು ಬಳಕೆಗೆ ಆಸಕ್ತಿ ಇದ್ದು, ಸಾಕಷ್ಟು ಕರೆಗಳು ಬರುತ್ತಿವೆ. ರಿಯಲ್‌ ಎಸ್ಟೇಟ್‌ ಕಂಪನಿಗಳ ಸಭೆ ನಡೆಸಲು ಜಲಮಂಡಳಿ ಅಧ್ಯಕ್ಷರು ನಿರ್ಧರಿಸಿದ್ದು, 40ಕ್ಕೂ ಹೆಚ್ಚು ಉದ್ಯಮಿಗಳು ಭಾಗವಹಿಸುವ ನಿರೀಕ್ಷೆ ಇದೆ.
-ರುದ್ರೇಗೌಡ, ಸಂಸ್ಕರಿಸಿದ ನೀರು ಮಾರಾಟ ಅಧಿಕಾರಿ, ಜಲಮಂಡಳಿ

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.