ಅತೃಪ್ತ ಶಾಸಕರು ಸಿದ್ದರಾಮಯ್ಯಗೆ ವಿವರಣೆ ನೀಡಿ
Team Udayavani, Jan 30, 2019, 12:30 AM IST
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿ ಪಕ್ಷದ ನೋಟಿಸ್ಗೆ ಪತ್ರದ ಮೂಲಕ ಉತ್ತರ ನೀಡಿರುವ ಅತೃಪ್ತ ಶಾಸಕರು, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯರನ್ನು ಖುದ್ದು ಭೇಟಿ ಮಾಡಿ ವಿವರಣೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ನಡೆದ ಸಂದರ್ಭದಲ್ಲಿ ಪಕ್ಷದ ಶಾಸಕರು ವಾರಗಟ್ಟಲೇ ಯಾರಿಗೂ ಸಿಗದೇ ದೂರ ಉಳಿಯುವುದು ಸರಿಯಲ್ಲ. ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿದ್ದ ರಮೇಶ್ ಜಾರಕಿಹೊಳಿ, ನಾಗೇಂದ್ರ, ಮಹೇಶ್ ಕುಮಟಳ್ಳಿ, ಉಮೇಶ್ ಜಾಧವ್ ಅವರಿಗೆ ನೋಟಿಸ್ ನೀಡಲಾಗಿದೆ. ಅವರು ಪತ್ರದ ಮೂಲಕ ವಿವರಣೆ ನೀಡಿದರೆ ಸಾಲದು. ಶಾಸಕಾಂಗ ಪಕ್ಷದ ನಾಯಕರ ಎದುರು ಖುದ್ದಾಗಿ ಹಾಜರಾಗಿ ತಮ್ಮ ಗೈರು ಹಾಜರಿಯ ಬಗ್ಗೆ ಸೂಕ್ತ ವಿವರಣೆ ನೀಡಬೇಕು. ಇಲ್ಲದಿದ್ದರೆ, ಅವರಿಗೆ ಮತ್ತೂಂದು ನೋಟಿಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕುಮಾರಸ್ವಾಮಿ ನಮಗೆ ಸಿಎಂ: ಸಮ್ಮಿಶ್ರ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿಯವರೇ ನಮಗೆ ಮುಖ್ಯಮಂತ್ರಿ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಸಮ್ಮಿಶ್ರ ಸರ್ಕಾರದ ಬಗ್ಗೆ ಯಾವುದೇ ರೀತಿಯ ಗೊಂದಲದ ಹೇಳಿಕೆಗಳನ್ನು ನೀಡುವ ಪಕ್ಷದ ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…