Udayavni Special

ರಾಯಲ್‌ ಎನ್‌ಫೀಲ್ಡ್‌ ಕಳ್ಳರ ಬಂಧನ


Team Udayavani, Mar 8, 2019, 6:00 AM IST

bike-kallru.jpg

ಬೆಂಗಳೂರು: ರಾಯಲ್‌ ಎನ್‌ಫೀಲ್ಡ್‌ ಬೈಕ್‌ಗಳನ್ನೇ ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ತಮಿಳುನಾಡಿನ ಮೂವರು ಕಳ್ಳರು ವಿ.ವಿ.ಪುರ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಮಿಳುನಾಡಿನ ವೇಲೂರು ಜಿಲ್ಲೆಯ ಮುನೀರ್‌ ಭಾಷ (20), ಎ.ಮೊಹಮದ್‌ ಮುಜಾಯಿದ್‌ (25), ಎ.ಮೋಗನ್‌ (19) ಬಂಧಿತರು.

ಆರೋಪಿಗಳಿಂದ 20 ಲಕ್ಷ ರೂ. ಮೌಲ್ಯದ ಎಂಟು ರಾಯಲ್‌ ಎನ್‌ಫೀಲ್ಡ್‌, ಒಂದು ಯಮಹಾ ಎಫ್‌ಜಡ್‌, ನಾಲ್ಕು ಬಜಾಜ್‌ ಪಲ್ಸರ್‌ ಸೇರಿ 17 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಕೆ.ಅಣ್ಣಾಮಲೈ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ತಮಿಳುನಾಡಿನಿಂದ ಬಸ್‌ನಲ್ಲಿ ನಗರಕ್ಕೆ ಬರುತ್ತಿದ್ದ ಆರೋಪಿಗಳು, ಆರು ತಿಂಗಳಿಂದ ನಗರ ಹಾಗೂ ಹೊರ ವಲಯಗಳಲ್ಲಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದರು. ಹಗಲು ಹೊತ್ತಿನಲ್ಲಿ ವಿ.ವಿ.ಪುರ ಸೇರಿ ನಗರದ ವಿವಿಧೆಡೆ ಸುತ್ತಾಡಿ ಮನೆ ಮುಂದೆ ನಿಲ್ಲಿಸುತ್ತಿದ್ದ ಬುಲೆಟ್‌ ಹಾಗೂ ದುಬಾರಿ ಬೈಕ್‌ನ್ನು ಗಮನಿಸುತ್ತಿದ್ದರು. ರಾತ್ರಿ ಹೊತ್ತು ನಕಲಿ ಕೀ ಬಳಸಿ ಅಥವಾ ದ್ವಿಚಕ್ರ ವಾಹನಗಳ ಲಾಕ್‌ ಮುರಿದು,

ನೇರವಾಗಿ ತಮಿಳುನಾಡಿನ ಅಂಬೂರ್‌ಗೆ ಕೊಂಡೊಯ್ಯುತ್ತಿದ್ದರು. ನಂತರ ಬೈಕ್‌ಗಳ ನಂಬರ್‌ ಪ್ಲೇಟ್‌ ಬದಲಿಸಿ ಗ್ರಾಮಾಂತರ ಪ್ರದೇಶದ ಜನರಿಗೆ ಕೇವಲ 10ರಿಂದ 20 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದ ಆರೋಪಿಗಳು, ಕೆಲ ದಿನಗಳ ನಂತರ ದಾಖಲೆಗಳನ್ನು ಕೊಡುವುದಾಗಿ ಹೇಳಿ ಪರಾರಿಯಾಗುತ್ತಿದ್ದರು ಎಂದರು.

ಪ್ರತಿ ಬಾರಿ ಹೊಸ ಸಿಮ್‌ ಬಳಕೆ: ಆರೋಪಿಗಳು ಪ್ರತಿ ಗ್ರಾಹಕನನ್ನು ಸಂಪರ್ಕಿಸಲು ಹೊಸ-ಹೊಸ ಸಿಮ್‌ಕಾರ್ಡ್‌ಗಳನ್ನು ಬಳಸುತ್ತಿದ್ದರು. ಒಮ್ಮೆ ಬೈಕ್‌ ಮಾರಾಟ ಮಾಡಿದ ನಂತರ ಗ್ರಾಹಕರ ಸಂಪರ್ಕಕ್ಕೆ ಸಿಗದೆ ತಲೆಮರೆಸಿಕೊಳ್ಳುತ್ತಿದ್ದರು. ಅಲ್ಲದೆ, ಬಳಸಿದ ಸಿಮ್‌ಕಾರ್ಡ್‌ ಎಸೆದು, ಹೊಸ ಸಿಮ್‌ಕಾರ್ಡ್‌ ಖರೀದಿಸಿ, ಹೊಸ ಗ್ರಾಹಕನಿಗಾಗಿ ಹುಡುಕಾಟ ನಡೆಸುತ್ತಿದ್ದರು ಎಂದು ಪೊಲೀಸರು ಹೇಳಿದರು.

ತಮಿಳುನಾಡಿನ ಹಳ್ಳಿಗಳಲ್ಲಿ ಬೇಡಿಕೆ: ಕಳವು ಮಾಡಿದ ರಾಯಲ್‌ ಎನ್‌ಫೀಲ್ಡ್‌ ಬೈಕ್‌ಗಳಿಗೆ ತಮಿಳುನಾಡಿನ ಹಳ್ಳಿಗಳಲ್ಲಿ ಭಾರೀ ಬೇಡಿಕೆ ಇದೆ. ಈ ವಿಚಾರ ತಿಳಿದಿದ್ದ ಆರೋಪಿಗಳು, ಕೆಲ ಗ್ರಾಹಕರಿಂದ ಮುಂಗಡ ಹಣ ಪಡೆದು ಬೈಕ್‌ಗಳನ್ನು ಕಳವು ಮಾಡಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

bommai and siddaramaiah

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

ಮಲೀನ ನೀರು ರಸೆಗೆ ಹರಿಯದಂತೆ ಕ್ರಮವಹಿಸಿ

8

ಗಿರಿಜನರೆಡೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ

ಸತತ ಮಳೆಗೆ ಮನೆ ಕುಸಿಯುವ ಭೀತಿ

ಸತತ ಮಳೆಗೆ ಮನೆ ಕುಸಿಯುವ ಭೀತಿ

4

ಚೈತನ್ಯ ಇನ್ಫಿನಿಟಿ ಲರ್ನ್ ರೋಹಿತ್‌ ಶರ್ಮ ರಾಯಭಾರಿ

3

ಕೊರೊನಾ ನಂತರ ಮಾನಸಿಕ ಸಮಸ್ಯೆ ಹೆಚ್ಚಳ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

davanagere news

ಹಿರೇಕಲ್ಮಠದೊಂದಿಗೆ ಅವಿನಾಭಾವ ಸಂಬಂಧ

12

ಕ್ಷಯ ಮುಕ್ತ ದೇಶಕ್ಕೆ ಸಹಕಾರ ಅಗತ್ಯ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.