ವ್ಯಕ್ತಿತ್ವ ವಿಕಸನದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ- ಸಚಿವ ಡಾ‌. ನಾರಾಯಣಗೌಡ


Team Udayavani, Jul 23, 2021, 5:20 PM IST

Development of personality : Dr. Narayana Gowda

ಬೆಂಗಳೂರು : ಕೊರೊನಾ ಎದುರಿಸಲು ಮಾನಸಿಕ ಧೈರ್ಯ ಮುಖ್ಯ. ಬಂಧುಬಳಗ ಕಳೆದುಕೊಂಡು ಆಘಾತಕ್ಕೊಳಗಾದವರಿಗೆ ಮಾನಸಿಕ ಧೈರ್ಯ ತುಂಬುವ ಕೆಲಸ ಆಗಬೇಕು. ಪ್ರಾಥಮಿಕ ಮಾನಸಿಕ ಚಿಕಿತ್ಸೆ ನೀಡುವ ಬಗ್ಗೆ ಯುವ ಜನರಿಗೆ ತರಬೇತಿ ನೀಡುವ ಕಾರ್ಯ ನಿಮ್ಹಾನ್ಸ್ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಇಲಾಖೆ ಸಚಿವ ಡಾ. ನಾರಾಯಣಗೌಡ ಹೇಳಿದರು.

ಇಂದು (ಶುಕ್ರವಾರ, ಜುಲೈ 23) ನಿಮ್ಹಾನ್ಸ್ ಆವರಣದಲ್ಲಿ ನಡೆದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯುವಜನತೆಗೆ ಕೌನ್ಸಿಲಿಂಗ್ ಸ್ಕಿಲ್ ಬಗ್ಗೆ ತರಬೇತಿ ನೀಡುವುದರಿಂದ ಎರಡು ರೀತಿಯ ಉಪಯೋಗ ಇದೆ. ಮಾನಸಿಕ ಆಘಾತಕ್ಕೆ ಒಳಗಾದವರಿಗೆ ತರಬೇತಿ ಪಡೆದವರು ಮಾನಸಿಕ ಧೈರ್ಯ ತುಂಬುವ ಕೆಲಸಮಾಡುತ್ತಾರೆ. ಇದರಿಂದ ಎಷ್ಟೋ ಜನರ ಬದುಕು ಬದಲಾಗುತ್ತದೆ. ಖಿನ್ನತೆಯಿಂದ ಹೊರಬಂದು ಉತ್ತಮ ಜೀವನ ಮಾಡಲು ಸಾಧ್ಯವಾಗುತ್ತದೆ. ಯುವಜನತೆ  ಇಂತಹ ಕಾರ್ಯಕ್ರಮದಲ್ಲಿ ತೊಡಗುವುದು ಬಹಳ ಉತ್ತಮ. ಯಾವುದೇ ಕೆಲಸ ಕಾರ್ಯ ಮಾಡದೆ ವ್ಯಸನಕ್ಕೆ ಒಳಗಾಗುತ್ತಾರೆ. ಅಂತಹವರನ್ನು ಗುರುತಿಸಿ ಈ ರೀತಿಯ ಕಾರ್ಯದಲ್ಲಿ ತೊಡಗುವಂತೆ ಮಾಡಬೇಕು. ನಿಮ್ಹಾನ್ಸ್ ಸಂಸ್ಥೆ ಹಮ್ಮಿಕೊಂಡಿರುವ ತರಬೇತಿ ಕಾರ್ಯ ಉತ್ತಮವಾದುದು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎಲ್ಲ ರೀತಿಯ ಸಹಕಾರ ನೀಡುತ್ತದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ : ಹಿಂದುಳಿದ ವರ್ಗಕ್ಕೆ ಸಿಎಂ ಸ್ಥಾನ ನೀಡಿ : ಹಿರಿಯ ಹೋರಾಟಗಾರ ಹೆಚ್.ನರಸಿಂಹಪ್ಪ ಒತ್ತಾಯ

ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮ ಅವರು ಮಾತನಾಡಿ, ಮಾನಸಿಕ ಆರೋಗ್ಯಕ್ಕೆ ಮಹತ್ವ ನೀಡಿದರೆ ಉತ್ತಮ ಸಮಾಜ ನಿರ್ಮಾಣ ಆಗತ್ತೆ. ಕೋವಿಡ್ ಸಂದರ್ಭದಲ್ಲಿ ಮಾನಸಿಕ ಚಿಕಿತ್ಸೆ ಅಗತ್ಯ. ಶೇ. 70 ಕ್ಕಿಂತ ಹೆಚ್ಚು ಜನರಿಗೆ ಮಾನಸಿಕ ಚಿಕಿತ್ಸೆ ಸಿಗೋದೆ ಇಲ್ಲ. ಯುವ ಜನರಿಗೆ ಈ ಬಗ್ಗೆ ತರಬೇತಿ ನೀಡಿದಾಗ, ಸಾಕಷ್ಟು ಜನರಿಗೆ ಮಾನಸಿಕ ಚಿಕಿತ್ಸೆ ದೊರೆಯಲಿದೆ. ಕೌನ್ಸಿಲಿಂಗ್ ಸ್ಕಿಲ್ ಕಲಿಯುವುದು ಬಹಳ ಮುಖ್ಯ. ಯುವಜನತೆಗೆ ಒತ್ತಡವನ್ನು ಹೇಗೆ ಎದುರಿಸುವುದು ಹೇಗೆ ಎಂದು ತಿಳಿದಿಲ್ಲ. ಆದ್ರೆ ಕೌನ್ಸಿಲಿಂಗ್ ಸ್ಕಿಲ್ ನಿಂದ ಯುವ ಜನತೆಯ ಮನಃಪರಿವರ್ತನೆ ಸಾಧ್ಯ ಎಂದು ಹೇಳಿದರು. ರಾಜ್ಯದಲ್ಲಿ 5 ಲಕ್ಷಕ್ಕು ಯುವ ಜನರಿಗೆ ತರಬೇತಿ ನೀಡುವ ಗುರಿ ಇದೆ. ಎನ್ಎಸ್ಎಸ್, ಯುವ ಸ್ಪಂದನ, ಯುವಜನ ಸಂಘ ಸೇರಿದಂತೆ ವಿವಿಧ ಸಂಘಗಳಲ್ಲಿರುವ ಯುವಕ- ಯುವತಿಯರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಸ್ಸಾಂ ಸರ್ಕಾರದ ಕಂದಾಯ ಮಂಡಳಿ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿ ಅರ್ಚನಾ ವರ್ಮ, ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ, ನಿಮ್ಹಾನ್ಸ್ ಕುಲಸಚಿವ ಡಾ. ಬಿಎಸ್ ಶಂಕರನಾರಾಯಣ, ನಿಮ್ಹಾನ್ಸ್ ಪ್ರೊಪೆಸರ್ ಡಾ. ಪ್ರದೀಪ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.