ಅಭಿವೃದ್ಧಿ ಮಾಹಿತಿ ಪಡೆದ ಢಾಕಾ ಮೇಯರ್‌

Team Udayavani, Feb 5, 2019, 6:23 AM IST

gangambike-mayor.jpg

ಬೆಂಗಳೂರು: ನಗರದ ಅಭಿವೃದ್ಧಿ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಬಿಬಿಎಂಪಿ ಕೈಗೊಂಡಿರುವ ಕ್ರಮಗಳ ಕುರಿತು ಅಧ್ಯಯನ ನಡೆಸಲು ಢಾಕಾ ಮೇಯರ್‌ ಹಾಗೂ ಅಧಿಕಾರಿಗಳ ತಂಡ ಬೆಂಗಳೂರಿಗೆ ಆಗಮಿಸಿದೆ ಎಂದು ಮೇಯರ್‌ ಗಂಗಾಂಬಿಕೆ ಹೇಳಿದರು.

ಸೋಮವಾರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಢಾಕಾ ಮೇಯರ್‌ ಮೊಹಮ್ಮದ್‌ ಸಯೀದ್‌ ಕೋಕೊನ್‌ ಹಾಗೂ ಅಧಿಕಾರಿಗಳ ತಂಡದೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಲಿನ್ಯ ನಿಯಂತ್ರಣಕ್ಕೆ ಇತ್ತೀಚೆಗೆ ನಡೆದ ಸಿ-40 ಸಿಟೀಸ್‌ ಸಮ್ಮೇಳನದಲ್ಲೂ ಢಾಕಾ ಭಾಗವಹಿಸಿತ್ತು. ಆ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳ ಕುರಿತು ಪರಿಶೀಲಿಸಲು ಬಂದಿದ್ದಾರೆ ಎಂದು ತಿಳಿಸಿದರು.

ಮಾಲಿನ್ಯ ನಿಯಂತ್ರಣ, ಉದ್ಯಾನ, ಆಟದ ಮೈದಾನ, ರಸ್ತೆ ಅಭವೃದ್ಧಿಗೆ ಕೈಗೊಂಡ ಕ್ರಮಗಳು, ವೈಟ್‌ಟಾಪಿಂಗ್‌, ಟೆಂಡರ್‌ಶ್ಯೂರ್‌ ಯೋಜನೆಗಳ ಅನುಕೂಲ, ಸಿಗ್ನಲ್‌ವುುಕ್ತ ಕಾರಿಡಾರ್‌, ರಾಜಕಾಲುವೆಗಳ ಸ್ಥಿತಿ-ಗತಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ತಿಳಿಸಿದರು.

ಪ್ರಮುಖವಾಗಿ ತ್ಯಾಜ್ಯ ವಿಲೇವಾರಿ ಕುರಿತು ಚರ್ಚಿಸಲಾಗಿದೆ. ಅದರಂತೆ ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳು, ಉತ್ಪತ್ತಿಯಾಗುವ ತ್ಯಾಜ್ಯ ಪ್ರಮಾಣ, ತ್ಯಾಜ್ಯ ವಿಂಗಡಣೆಗೆ ಕೈಗೊಂಡ ಕ್ರಮಗಳು, ಜೈವಿಕ ಹಾಗೂ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆ ಘಟಕಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಜತೆಗೆ ಮಂಗಳವಾರ ನಗರದ ಹಲವು ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು.

ನಂತರ ಮಾತನಾಡಿದ ಢಾಕಾ ಮೇಯರ್‌ ಮೊಹಮ್ಮದ್‌ ಸಹೀದ್‌ ಕೋಕೊನ್‌, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಆ ಹಿನ್ನೆಲೆಯಲ್ಲಿ ನಗರದಲ್ಲಿ ಕೈಗೊಂಡಿರುವ ಯೋಜನೆಗಳ ಕುರಿತು ಮಾಹಿತಿ ಪಡೆಯಲು ಅಧ್ಯಯನ ಪ್ರವಾಸ ಕೈಗೊಳ್ಳಲಾಗಿದೆ.

ಅದರಂತೆ ಇಲ್ಲಿನ ಪ್ರಮುಖ ಯೋಜನೆಗಳ ಕುರಿತು ಮಾಹಿತಿ ಪಡೆದು ಢಾಕಾದಲ್ಲಿ ಅನುಷ್ಠಾನಗೊಳಿಸಲು ಯೋಜನೆ ರೂಪಿಸಲಾಗುವುದು ಎಂದು ಹೇಳಿದರು. ಉಪಮೇಯರ್‌ ಭದ್ರೇಗೌಡ, ಆಡಳಿತ ಪಕ್ಷದ ನಾಯಕ ಅಬ್ದುಲ್‌ ವಾಜೀದ್‌ ಹಾಜರಿದ್ದರು. 

ನಮ್ಮಲ್ಲಿ ರಾತ್ರಿ, ನಿಮ್ಮಲ್ಲಿ ಹಗಲು: ಢಾಕಾದಲ್ಲಿ ತ್ಯಾಜ್ಯವನ್ನು ರಾತ್ರಿಯಿಂದ ಮುಂಜಾನೆ ಮೂರು ಗಂಟೆವರೆಗೆ ಮಾತ್ರ ವಿಲೇವಾರಿ ಮಾಡಲಾಗುತ್ತದೆ. ಆದರೆ ಬೆಂಗಳೂರಿನಲ್ಲಿ ಬೆಳಗಿನ ವೇಳೆ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ತ್ಯಾಜ್ಯ ವಿಲೇವಾರಿಗೆ ಯಾವ ಸಮಯ ಸೂಕ್ತ ಎಂದು ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದ ಕೋಕೊನ್‌, ಢಾಕಾಗೆ ಭೇಟಿ ನೀಡುವಂತೆ ಬಿಬಿಎಂಪಿ ಮೇಯರ್‌, ಉಪಮೇಯರ್‌ ಹಾಗೂ ಅಧಿಕಾರಿಗಳನ್ನು ಆಹ್ವಾನಿಸಿದ್ದೇವೆ ಎಂದು ಹೇಳಿದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.