ಸಾಂಕ್ರಾಮಿಕ ಕ್ಷಯ ರೋಗ ಪತ್ತೆ, ಚಿಕಿತ್ಸೆ ಆಂದೋಲನ

Team Udayavani, Jul 16, 2019, 3:04 AM IST

sankramika

ಕೆ.ಆರ್‌.ಪುರ: ಸಾಂಕ್ರಾಮಿಕ ಕ್ಷಯ ರೋಗ ನಿರ್ಮೂಲನೆಗಾಗಿ ಬೆಂಗಳೂರು ಪೂರ್ವ ತಾಲೂಕಿನಾದ್ಯಂತ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಅಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಶೇಖರ್‌ ತಿಳಿಸಿದರು.

ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮತ್ತು ಜಿಲ್ಲಾ ಕ್ಷಯ ರೋಗ ನಿಯಂತ್ರಣ ವಿಭಾಗದಿಂದ ಕೆ.ಆರ್‌.ಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಸ್‌ಇಎ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಹಮ್ಮಿಕೊಂಡಿದ್ದ ಕ್ಷಯ ರೋಗ ನಿರ್ಮೂಲನೆ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

2030ರೊಳಗೆ ಕ್ಷಯ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಸರ್ಕಾರ ಜು.27ರವರೆಗೆ ಕ್ಷಯ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಹಮ್ಮಿಕೊಂಡಿದೆ. ಈ ಸಂಬಂಧ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಒಳಗೊಂಡ 108 ತಂಡಗಳನ್ನು ರಚಿಸಲಾಗಿದೆ. ಈ ಸಿಬ್ಬಂದಿ ತಾಲೂಕಿನದ್ಯಾಂತ ಸಂಚರಿಸಿ ಪ್ರತಿ ಮನೆಗೆ ಭೇಟಿ ನೀಡಿ ರೋಗದ ಲಕ್ಷಣ ಕಂಡುಬಂದ ವ್ಯಕ್ತಿಗಳನ್ನು ಆಸ್ಪತ್ರೆಗೆ ಕರೆತಂದು ಅವರ ಕಫ‌ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುವುದು.

ಕ್ಷಯ ರೋಗದ ಲಕ್ಷಣ ಪತ್ತೆಯಾದಲ್ಲಿ ಆ ವ್ಯಕ್ತಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮಾಹಿತಿ ನೀಡಿದರು. ಕ್ಷಯ ರೋಗವು ಸೂಕ್ಷ್ಮ ಬ್ಯಾಕ್ಟೀರಿಯಾದಿಂದ ಹರಡುವ ಒಂದು ಸಾಂಕ್ರಮಿಕ ರೋಗವಾಗಿದೆ. ಸೋಂಕು ಹೊಂದಿರುವ ವ್ಯಕ್ತಿ ಸೀನಿದಾಗ ಅಥವಾ ಕೆಮ್ಮಿದಾಗ ಗಾಳಿಯ ಮೂಲಕ ಸೋಂಕು ಮತ್ತೂಬರಿಗೆ ಹರಡುತ್ತದೆ. ಪ್ರಸ್ತುತ ಬೆಂಗಳೂರು ಪೂರ್ವ ತಾಲೂಕಿನಲ್ಲಿ 108 ವ್ಯಕ್ತಿಗಳಲ್ಲಿ ಕ್ಷಯ ಪತ್ತೆಯಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಎರಡು ವಾರಕ್ಕೂ ಹೆಚ್ಚು ಸಮಯದವರೆಗೆ ಕೆಮ್ಮು, ಕಫ‌ದ ಜತೆಗೆ ರಕ್ತ ಬರುವುದು, ಸಂಜೆ ವೇಳೆ ಜ್ವರ, ಬೆವರು, ದೇಹದ ತೂಕ ಕಡಿಮೆಯಾಗುವುದು ಮತ್ತು ಹಸಿವಾಗದೆ ಇರುವುದು ಕ್ಷಯ ರೋಗದ ಲಕ್ಷಣಗಳಾಗಿವೆ. ರೋಗ ಹೊಂದಿರುವವರು ಆತಂಕಕ್ಕೆ ಒಳಗಾಗದೆ ನಿರಂತರ ಚಿಕಿತ್ಸೆ ಪಡೆದರೆ ಸಂಪೂರ್ಣ ಗುಣಮುಖರಾಗುತ್ತಾರೆ. ಸರ್ಕಾರದಿಂದ ಕಡಿಮೆ ದರದಲ್ಲಿ ಔಷಧ ನೀಡುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಕೊಳಚೆ ಪ್ರದೇಶದ ನಿವಾಸಿಗಳು, ಬೀಡಿ ಕಾರ್ಮಿಕರು, ನೇಕಾರರ ಸಮುದಾಯ, ಎಚ್‌ಐವಿ ಸೋಂಕಿತರು, ಮಧುಮೇಹಿಗಳು, ತಂಬಾಕು ಸೇವಿಸುವವರು, ವೃದ್ಧಾಪ್ಯ ಕೇಂದ್ರ ಮತ್ತು ನಿರಾಶ್ರಿತರ ಶಿಬಿರಗಳ ನಿವಾಸಿಗಳು, ಬೀದಿ ಬದಿ ವಾಸಿಸುವ ಮಕ್ಕಳು ಹಾಗೂ ಅಸಂಘಟಿತ ಕಾರ್ಮಿಕರ ವಲಯದಲ್ಲಿ ಸಮೀಕ್ಷೆ ನಡೆಸಿ ಉಚಿತವಾಗಿ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುವುದು ಎಂದು ಡಾ.ಚಂದ್ರಶೇಖರ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.