ಡಿಕ್ಟೇಟರ್ ಹುಚ್ಚ ವೆಂಕಟ್ ಧ್ವನಿ ಸುರುಳಿ ಬಿಡುಗಡೆ
Team Udayavani, Apr 25, 2019, 4:01 AM IST
ಬೆಂಗಳೂರು: “ಡಿಕ್ಟೇಟರ್ ಹುಚ್ಚ ವೆಂಕಟ್’ ಚಿತ್ರದ ಧ್ವನಿಸುರುಳಿಯನ್ನು ತಮ್ಮ ಯುಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ನಟ ಹುಚ್ಚ ವೆಂಕಟ್ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಗ್ಬಾಸ್ ಸ್ಪರ್ಧೆಯಿಂದ ಹೊರ ಬಂದ ನಂತರ ಸುದ್ದಿ ಮಾಧ್ಯಮ ಮತ್ತು ಪತ್ರಕರ್ತರ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಸಾಧ್ಯವಾಯಿತು. ಹೀಗಾಗಿ ಪತ್ರಕರ್ತರ ಜವಾಬ್ದಾರಿ ಹಾಗೂ ಕಷ್ಟವನ್ನು ಕಥಾ ವಸ್ತುವಾಗಿಸಿಕೊಂಡು “ಡಿಕ್ಟೇಟರ್ ಹುಚ್ಚ ವೆಂಕಟ್’ ಚಿತ್ರ ನಿರ್ಮಿಸುತ್ತಿದ್ದೇನೆ ಎಂದರು.
ಧ್ವನಿಸುರುಳಿಯು ಹುಚ್ಚ ವೆಂಕಟ್ ಯುಟ್ಯೂಬ್ ಚಾನೆಲ್ನಲ್ಲಿ ಲಭ್ಯವಿದೆ. ಇದರಲ್ಲಿ ನಾನು ನಿರೂಪಕ ಹಾಗೂ ಪತ್ರಕರ್ತನ ಪಾತ್ರ ಮಾಡಿದ್ದೇನೆ. ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದ್ದು, ಎಲ್ಲಾ ಹಾಡುಗಳನ್ನು ನಾನೇ ಬರೆದಿದ್ದೇನೆ. ಆಕಾಂಕ್ಷಾ ಬಾದಾಮಿ ಹಾಗೂ ಅನನ್ಯ ಭಟ್ ಹಾಡಿಗೆ ಧ್ವನಿ ಗೂಡಿಸಿದ್ದು, ಸತೀಶ್ ಬಾಬು ಸಂಗೀತ ಸಂಯೋಜನೆ ಮಾಡಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ