ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ಸಿಎಂ ಜತೆ ಚರ್ಚೆ

Team Udayavani, Dec 26, 2019, 3:07 AM IST

abhivruddi

ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ರಾಜು ಕ್ಷತ್ರಿಯ ಸಮಾಜದ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸುವ ಅವಶ್ಯಕತೆ ಇದ್ದು ಈ ಕುರಿತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಭರವಸೆ ನೀಡಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಕರ್ನಾಟಕ ರಾಜು ಕ್ಷತ್ರಿಯ ಸಂಘದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲ ಸಮುದಾಯ, ಸಮಾಜದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪ್ರಗತಿಯಾದಾಗ ಮಾತ್ರ ರಾಜ್ಯ ಒಟ್ಟಾರೆ ಅಭಿವೃದ್ಧಿಯಾಗುತ್ತದೆ. ಪ್ರತಿ ರಾಜ್ಯದ ಬೆಳವಣಿಗೆಯಿಂದ ದೇಶ ಅಭಿವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ವ್ಯಾಪ್ತಿಗೆ ಬರುವ ರಾಜು ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸುವ ಅಗತ್ಯವಿದೆ. ಜ.15ರ ನಂತರ ಸಮಾಜದ ಮುಖಂಡರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸೋಣ. ನನ್ನ ಸಂಪೂರ್ಣ ಬೆಂಬಲ ನಿಮ್ಮೊಂದಿಗಿದೆ ಎಂದು ಆಶ್ವಾಸನೆ ನೀಡಿದರು.

ಸಂಸದ ಪಿ.ಸಿ.ಮೋಹನ್‌ ಮಾತನಾಡಿ, ರಾಜ್ಯದ ಯಾವುದೇ ಸಮಾಜ, ಸಮುದಾಯವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗ ಬಾರದೆಂದು ರಾಜ್ಯ ಸರ್ಕಾರ ಎಲ್ಲರನ್ನೂ ಗುರುತಿಸಿ ಸೌಲಭ್ಯಗಳನ್ನು ನೀಡುತ್ತಿದೆ. ರಾಜ್ಯದಲ್ಲಿ ರಾಜು ಕ್ಷತ್ರಿಯ ಸಮಾಜದ ಏಳಿಗೆಗಾಗಿ ಅಭಿವೃದ್ಧಿ ನಿಗಮ ಸ್ಥಾಪಿಸುವ ಅವಶ್ಯಕತೆ ಇದೆ. ಮುಂದಿನ ಅಧಿವೇಶನದಲ್ಲಿ ನಿಗಮ ಸ್ಥಾಪನೆ ಕುರಿತು ಚರ್ಚಿಸುತ್ತೇನೆ. ಕೇಂದ್ರದಲ್ಲೂ ಅಗತ್ಯ ಸಹಕಾರ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಮಾತನಾಡಿ, ಹಿಂದುಳಿದ ವರ್ಗಗಳ ಸಮಾಜಗಳಲ್ಲಿ ಒಗ್ಗಟ್ಟಿಲ್ಲ. ಆದ್ದರಿಂದಲೇ ಸರ್ಕಾರದ ಯಾವ ಸೌಲಭ್ಯಗಳು ಸೂಕ್ತ ರೀತಿಯಲ್ಲಿ ದೊರೆಯುತ್ತಿಲ್ಲ. ತಮ್ಮ ಸಮಾಜದ ಪರವಾಗಿ ನಿಲ್ಲುವ, ದನಿ ಎತ್ತುವ ನಾಯಕರ ಅನಿವಾರ್ಯತೆ ಇದ್ದು, ಸಮಾಜದ ಎಲ್ಲಾ ಬಾಂಧವರು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಾಗಿ ಸೌಲಭ್ಯಗಳನ್ನು, ಪ್ರಾತಿನಿಧ್ಯವನ್ನು ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕರ್ನಾಟಕ ರಾಜು ಕ್ಷತ್ರಿಯ ಸಂಘದ ಅಧ್ಯಕ್ಷ ಎಲ್‌.ಕೆ.ರಾಜು ಅವರು ಮಾತನಾಡಿ, ರಾಜ್ಯದಲ್ಲಿ 30 ಲಕ್ಷ ಜನ ರಾಜು ಕ್ಷತ್ರಿಯ ಜನಾಂಗದವರಿದ್ದೇವೆ. ಈ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿಂದೆ ಭರವಸೆ ನೀಡಿದ್ದರು. ಈಗ ಅವರದೇ ನೇತೃತ್ವದ ಸರ್ಕಾರವಿದ್ದು, ನಿಗಮ ಸ್ಥಾಪನೆ ಮಾಡಿ ಭರವಸೆಯನ್ನು ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು. ಉಪ ಮೇಯರ್‌ ಸಿ.ಆರ್‌. ರಾಮ ಮೋಹನ್‌ ರಾಜು ಮತ್ತಿತರಿದ್ದರು.

ಟಾಪ್ ನ್ಯೂಸ್

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.