ಮೇಕೆದಾಟು ಯೋಜನೆ, ಕಾಂಗ್ರೆಸ್ ಪಾದಯಾತ್ರೆ: ಡಿಕೆಶಿ-ಕುಮಾರಸ್ವಾಮಿ ನಡುವೆ ವಾಟರ್ ಪಾಲಿಟಿಕ್ಸ್

ಮೇಕೆದಾಟು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕನಸಿನ ಕೂಸು.

Team Udayavani, Dec 25, 2021, 3:20 PM IST

DK-Shiv

ಬೆಂಗಳೂರು:ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಆಯೋಜಿಸಿರುವ ಪಾದಯಾತ್ರೆ ಬಿಜೆಪಿಗಿಂತಲೂ ಹೆಚ್ಚಾಗಿ ಜೆಡಿಎಸ್‌ ನಾಯಕರ ಕಣ್ಣು ಕೆಂಪಗಾಗಿಸಿದೆ. ಒಕ್ಕಲಿಗರ ಪ್ರಾಬಲ್ಯವಿರುವ ಹಳೆ ಮೈಸೂರು ಭಾಗದಲ್ಲಿ ವರ್ಚಸ್ಸು ವೃದ್ಧಿ ಮಾಡಿಕೊಳ್ಳುವುದಕ್ಕೆ ಡಿ.ಕೆ.ಶಿವಕುಮಾರ್‌ ಈ ಯಾತ್ರೆಯ ಮೂಲಕ ಮುಂದಾಗಿರುವುದು ಜೆಡಿಎಸ್‌ನ್ನು ಕೆರಳಿಸಿದೆ.

ಹೇಳಿ ಕೇಳಿ ರಾಮನಗರ ಜಿಲ್ಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಮಧ್ಯೆ ದಶಕಗಳಿಂದಲೂ “ಸ್ಪರ್ಧಾ ಅಖಾಡʼʼವಾಗಿದೆ. ಪರಿಸ್ಥಿತಿ ಹಾಗೂ ಅಧಿಕಾರದ ವಾಲುವಿಕೆಗೆ ಅನುಸಾರವಾಗಿ ಇಬ್ಬರೂ ಈ ಜಿಲ್ಲೆಯನ್ನು ಕೇಂದ್ರವಾಗಿಟ್ಟುಕೊಂಡು  ಹಳೆ ಮೈಸೂರು ಭಾಗದಲ್ಲಿ ರಾಜಕೀಯ ಮೇಲುಗೈ ಸಾಧಿಸುವುದಕ್ಕೆ ತಂತ್ರಗಾರಿಕೆ ನಡೆಸುತ್ತಲೇ ಬಂದಿದ್ದಾರೆ. ಆದರೆ ಮೇಕೆದಾಟು ಪಾದಯಾತ್ರೆ ಇದೇ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಡಿ.ಕೆ.ಶಿವಕುಮಾರ್‌ ಗೆ ಪೊಲಿಟಿಕಲ್‌ ಮೈಲೇಜ್‌ ಕೊಡುವ ಸಾಧ್ಯತೆ ಇರುವುದರಿಂದ ಕುಮಾರಸ್ವಾಮಿ ವಿರೋಧದ ದಾಳ ಉರುಳಿಸಿದ್ದಾರೆ.

ನೀರಿಗಾಗಿ ಅಲ್ಲ : ಮೇಕೆದಾಟು ಹೆಸರು ಹೇಳಿಕೊಂಡು ಕಾಂಗ್ರೆಸ್‌ ನಾಯಕರು ನಡೆಸುತ್ತಿರುವ ಪಾದಯಾತ್ರೆಯ ಉದ್ದೇಶವೇ ಬೇರೆ. ಮತಕ್ಕಾಗಿ ನಡೆಸುತ್ತಿರುವ ಪಾದಯಾತ್ರೆಯೇ ಹೊರತು ಕುಡಿಯುವ ನೀರಿಗಾಗಿ ಅಲ್ಲ. ಮೇಕೆದಾಟು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕನಸಿನ ಕೂಸು. 1996ರಲ್ಲಿ  ಗೌಡರು ಮುಖ್ಯಮಂತ್ರಿಯಾಗಿದ್ದಾಗಲೇ ಇದಕ್ಕೆ ನೀಲನಕ್ಷೆ ರೂಪಿಸಿದ್ದರು. ನಾನು ಸಿಎಂ ಆಗಿದ್ದಾಗ ಯೋಜನೆಯ ಡಿಪಿಆರ್‌ ತಯಾರಿಸಲಾಗಿದ್ದು, ಈ ಸಂಬಂಧ ಹಲವು ಬಾರಿ ಪ್ರಧಾನಿ ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. “ನಮ್ಮ ಶ್ರಮವನ್ನು ತಮ್ಮ ಕೊಡುಗೆ “ಎಂದು ಬಿಂಬಿಸಿಕೊಳ್ಳಲು ಕಾಂಗ್ರೆಸ್‌ ಹೊರಟಿದೆ ಎಂದು ಈಗಾಗಲೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮೇಕೆದಾಟುವಿನಿಂದ ಬೆಂಗಳೂರಿನ ಕೆಂಗೇರಿವರೆಗೆ ಸುಮಾರು 100 ಕಿಮೀ, ನಗರ ವ್ಯಾಪ್ತಿಯಲ್ಲಿ 50 ಕಿಮೀ ಸೇರಿ ಬೆಂಗಳೂರು ಹೊರ ವಲಯದ 20 ಕ್ಷೇತ್ರಗಳಲ್ಲಿ ಈ ಪಾದಯಾತ್ರೆ ನಡೆಯುತ್ತದೆ. ಬೆಂಗಳೂರಿಗೆ ಹೊಸದಾಗಿ ಸೇರ್ಪಡೆಯಾದ ಪ್ರದೇಶ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಅತಿಯಾಗಿರುವುದರಿಂದ “ವಾಟರ್‌ ಪಾಲಿಟಿಕ್ಸ್‌ “ ಗೆ ಮಹತ್ವ ಲಭಿಸಿದೆ.

ಚುನಾವಣೆ ಹಿನ್ನೆಲೆಯಲ್ಲೇ ಪಾದಯಾತ್ರೆ ಆಯೋಜನೆಗೊಂಡಿರುವುದರಿಂದ ಹಳೆ ಮೈಸೂರು ಭಾಗದ ಅದರಲ್ಲೂ ವಿಶೇಷವಾಗಿ ಒಕ್ಕಲಿಗ ಪ್ರಾಬಲ್ಯದ ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಹಾಸನ, ತುಮಕೂರು ಹಾಗೂ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರದ ಒಟ್ಟಾರೆ ನಾಯಕತ್ವದ ಮೇಲೆ ಇದು ಪ್ರಭಾವ ಬೀರಲಿದೆ. ಈಗಾಗಲೇ ಜೆಡಿಎಸ್‌ ಶಾಸಕರು ಹಾಗೂ ನಾಯಕರನ್ನು ಕಾಂಗ್ರೆಸ್‌ ತೆಕ್ಕೆಗೆ ಸೆಳೆದುಕೊಳ್ಳುವ ಕೆಲಸಕ್ಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಚಾಲನೆ ನೀಡಿರುವುದು ಕುಮಾರಸ್ವಾಮಿಯವರನ್ನು ಕೆರಳಿಸಿದೆ. ಇದರ ಮಧ್ಯೆಯೇ ಆಯೋಜಿಸಿರುವ ಪಾದಯಾತ್ರೆ ತಮ್ಮ ಪಕ್ಷದ ಬೆಳವಣಿಗೆಗೆ ಅಡ್ಡಿಯುಂಟು ಮಾಡಬಹುದೆಂಬ ಲೆಕ್ಕಾಚಾರದಲ್ಲಿ ಕುಮಾರಸ್ವಾಮಿ ಈಗ ಅಖಾಡಕ್ಕೆ ಇಳಿದಿದ್ದಾರೆ.

ಈ ಕಾರಣಕ್ಕಾಗಿಯೇ ಮೇಕೆದಾಟು ಪಾದಯಾತ್ರೆ ವಿಚಾರದಲ್ಲಿ ಬಿಜೆಪಿ ವಿಚಲಿತಗೊಂಡಿಲ್ಲ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮಧ್ಯೆ ನಡೆಯುವ ಪೈಪೋಟಿಯ ಮಧ್ಯೆ ಹಳೆ ಮೈಸೂರು ಭಾಗದಲ್ಲಿ ಪ್ರತ್ಯೇಕ ತಂತ್ರ ಅನುಸರಿಸಲು ಬಿಜೆಪಿ ನಿರ್ಧರಿಸಿದೆ. ಹೀಗಾಗಿ ಇವರಿಬ್ಬರ ಜಗಳದ ಮಧ್ಯೆ ಸದ್ಯಕ್ಕೆ ತಟಸ್ಥವಾಗಿ ಉಳಿಯಬೇಕೆಂಬುದು ಕಮಲ ಪಾಳಯದ ಲೆಕ್ಕಾಚಾರ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.