ಕೈ ಪಾಳಯದಲ್ಲಿ ಬ್ರೇಕ್‌ಫಾಸ್ಟ್‌  “ರಾಜಕಾರಣ’


Team Udayavani, Oct 5, 2018, 6:00 AM IST

181004kpn77.jpg

ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್‌ ಸಚಿವರಿಗೆ ಗುರುವಾರ ತಮ್ಮ ನಿವಾಸದಲ್ಲಿ ಉಪಹಾರ ಕೂಟ ಆಯೋಜಿಸಿದ್ದು, ರಾಜಕೀಯವಾಗಿ ನಾನಾ ವಿಶ್ಲೇಷಣೆಗಳಿಗೆ ಕಾರಣವಾಗಿದೆ.

ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಬೆಂಬಲವಾಗಿ ನಿಂತಿರುವ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ನಂತರ ಪರ್ಯಾಯ ಶಕ್ತಿಯಾಗಿ ಗುರುತಿಸಿಕೊಳ್ಳಲು ತೆರೆ ಮರೆಯಲ್ಲಿ ಕಸರತ್ತು ನಡೆಸಿದ್ದು, ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕ, ಶಾಸಕರ ಅಸಮಾಧಾನ ಎಲ್ಲ ಸಮಸ್ಯೆಗಳಿಗೂ ಸಚಿವರು-ಶಾಸಕರು ಸಿದ್ದರಾಮಯ್ಯ ಅವರ ಬಳಿಯೇ ತೆರಳುತ್ತಿರುವುದರಿಂದ ನಾನೂ ಪಕ್ಷದ ನಾಯಕನಾಗಿ ನಿಮ್ಮ ನೆರವಿಗೆ ಬರುತ್ತೇನೆ ಎಂಬ ಸಂದೇಶ ರವಾನಿಸಲು ಉಪಹಾರ ಕೂಟ ಆಯೋಜಿಸಲಾಗಿತ್ತು.

ಸಚಿವರುಗಳನ್ನು ವಿಶ್ವಾಸಕ್ಕೆ ಇಟ್ಟುಕೊಂಡು ತಮ್ಮ ಇಲಾಖೆ ಕೆಲಸಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಬಳಿ ಪ್ರಭಾವ ಬಳಸಿ ಮಾಡಿಸಿಕೊಡುವ ಭರವಸೆ ಮೂಡಿಸುವ ಮೂಲಕ ತಮ್ಮದೇ ಆದ ಪ್ರಭಾವವನ್ನು ಉಳಿಸಿಕೊಳ್ಳುವ ಪ್ರಯತ್ನ ಇದಾಗಿದೆ. ಡಿ.ಕೆ.ಶಿವಕುಮಾರ್‌ ಪಕ್ಷದ ಸಚಿವರಿಗೆ ಉಪಹಾರ ಕೂಟ ಏರ್ಪಡಿಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡುವ ಪ್ರಯತ್ನ ನಡೆಸಿದ್ದಾರೆ. ಜತೆಗೆ ಸಚಿವರನ್ನು ಜತೆಗಿಟ್ಟುಕೊಳ್ಳುವ ಕಸರತ್ತು ಮಾಡಿದ್ದಾರೆ. ಹೈಕಮಾಂಡ್‌ ಸೂಚನೆ ಮೇರೆಗೆ ಇಂತಹ ಪ್ರಯತ್ನ ನಡೆದಿದೆ ಎಂದು ಹೇಳಲಾಗಿದೆ.

ಕ್ರೆಸೆಂಟ್‌ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಪಕ್ಷದ ಸಚಿವರಿಗೆ ಏರ್ಪಡಿಸಿದ್ದ ಉಪಹಾರ ಕೂಟದಲ್ಲಿ ಪ್ರಮುಖವಾಗಿ, ಸಚಿವ ಸಂಪುಟ ವಿಸ್ತರಣೆ, ಹೊಸದಾಗಿ ಸಂಪುಟ ಸೇರುವ ಸಚಿವರಿಗೆ ಕೆಲವು ಹಾಲಿ ಸಚಿವರ ಖಾತೆ ಬಿಟ್ಟು ಕೊಡುವುದು, ಕೆಲವು ಹಾಲಿ ಸಚಿವರನ್ನು ಕೈ ಬಿಡುವ ಹಾಗೂ ಖಾತೆ ಬದಲಾವಣೆಯ ಪ್ರಸ್ತಾಪದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಹೆಚ್ಚಿನ ಬದಲಾವಣೆ ಮಾಡುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತವಾಯಿತು ಎಂದು ತಿಳಿದು ಬಂದಿದೆ.

ಚುನಾವಣೆ ಬಗ್ಗೆಯೂ ಚರ್ಚಿಸಿದ್ದೇವೆ:
ಉಪಹಾರ ಕೂಟದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಶೀಘ್ರವೇ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚೆ ಮಾಡಿದ್ದೇವೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಎಲ್ಲ ಸಂದರ್ಭದಲ್ಲಿ ಕರೆಯಲು ಆಗುವುದಿಲ್ಲ. ಯಾವಾಗ ಅವರ ಅಗತ್ಯ ಇದೆಯೋ ಆಗ ಮಾತ್ರ ಕರೆಯುತ್ತೇವೆ. ಸಿದ್ದರಾಮಯ್ಯ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅವರ ಮನೆಯಲ್ಲಿ ನಡೆದ ಸಭೆಯಲ್ಲಿನ ಸಲಹೆ ಸೂಚನೆಯಂತೆಯೇ ಇಂದಿನ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ ಎಂದರು.

ಇನ್ನು ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಖಾತೆಗಳ ಬದಲಾವಣೆ ಆಗುವುದಿಲ್ಲ. ಕೇವಲ ಸಂಪುಟ ವಿಸ್ತರಣೆಯಾಗಲಿದ್ದು, ವಿಸ್ತರಣೆ ಮಾಡುವುದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ಚುನಾವಣೆಗೆ ಅಭ್ಯರ್ಥಿಗಳನ್ನು ಹೈ ಕಮಾಂಡ್‌ ನಿರ್ಧಾರ ಮಾಡುತ್ತದೆ. ಆದಾಯ ತೆರಿಗೆ ಇಲಾಖೆ ದಾಳಿ ಟಾರ್ಗೆಟ್‌ ಮಾಡುತ್ತಿರುವ ಬಗ್ಗೆ ಕಾಲ ಬಂದಾಗ ಉತ್ತರ ನೀಡುತ್ತೇನೆ ಎಂದು ಹೇಳಿದರು.

ಉಪಹಾರ ಕೂಟ ನಿರಂತರ?
ಮತ್ತೂಂದು ಮೂಲಗಳ ಪ್ರಕಾರ, ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ ಸಚಿವರಲ್ಲಿ ಒಗ್ಗಟ್ಟಿದೆ ಎನ್ನುವುದು ತೋರಿಸಲು ಪ್ರತಿ ಸಂಪುಟ ಸಭೆ ನಡೆಯುವ ದಿನ ಬೆಳಗ್ಗೆ ಯಾರಾದರೊಬ್ಬರು ಸಚಿವರ ಮನೆಯಲ್ಲಿ ಉಪಹಾರ ಕೂಟ ಏರ್ಪಡಿಸಿ ಅಂದಿನ ಸಂಪುಟ ಸಭೆಯಲ್ಲಿ ಬರುವ ವಿಷಯಗಳ ಬಗ್ಗೆ ಚರ್ಚಿಸಿ ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮಗಳನ್ನೂ ಗಮನದಲ್ಲಿಟ್ಟುಕೊಂಡೇ ಒಮ್ಮತದ ತೀರ್ಮಾನ ಕೈಗೊಳ್ಳಬೇಕು. ಜತೆಗೆ ಸಂಪುಟದಲ್ಲೂ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಅವರ ಸೂಚನೆ ಮೇರೆಗೆ ಉಪಹಾರ ಕೂಟ ಆಯೋಜಿಸಲಾಗುತ್ತಿದೆ. ಮುಂದಿನ ಉಪಹಾರ ಕೂಟದ ಜವಾಬ್ದಾರಿ ಆರ್‌.ವಿ.ದೇಶಪಾಂಡೆಯವರದು ಎಂದು ಹೇಳಲಾಗಿದೆ.

ಬೆಳ್ಳಿ ತಟ್ಟೆಯಲು ಉಪಹಾರ
ಸಚಿವ ಡಿ.ಕೆ. ಶಿವಕುಮಾರ್‌ ಅವರ ಸರ್ಕಾರಿ ನಿವಾಸ ಗುರುವಾರ ಸಚಿವರ ಸ್ವಾಗತಕ್ಕಾಗಿ ಹೂಗಳಿಂದ ಅಲಂಕಾರಗೊಂಡಿತ್ತು. ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಉಪಹಾರ ಕೂಟಕ್ಕೆ ಆಗಮಿಸಿದ ಸಚಿವರಿಗೆ ಬೆಳ್ಳಿ ತಟ್ಟೆ ಹಾಗೂ ಲೋಟದಲ್ಲಿ ಉಪಹಾರ ಬಡಿಸಲಾಗಿತ್ತು. ಇಡ್ಲಿ, ವಡೆ, ಚೌಚೌ ಬಾತ್‌, ಮಸಾಲೆ ದೋಸೆ, ಸೆಟ್‌ದೋಸೆ, ಪೂರಿ ಸಾಗು, ನೀರ್‌ ದೋಸೆ, ಪೊಂಗಲ್‌ ಹಾಗೂ ಮುಳಬಾಗಿಲು ದೋಸೆ ವಿಶೇಷವಾಗಿತ್ತು.

ಉಪಹಾರ ಕೂಟಕ್ಕೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌, ಆರ್‌.ವಿ ದೇಶಪಾಂಡೆ, ಕೆ.ಜೆ. ಜಾರ್ಜ್‌, ಯು.ಟಿ.ಖಾದರ್‌, ವೆಂಕಟರಮಣಪ್ಪ, ಕೃಷ್ಣ ಬೈರೇಗೌಡ, ಪುಟ್ಟರಂಗ ಶೆಟ್ಟಿ, ಪ್ರಿಯಾಂಕ್‌ ಖರ್ಗೆ, ಶಿವಾನಂದ ಪಾಟೀಲ್‌, ರಾಜಶೇಖರ ಪಾಟೀಲ್‌, ಶಿವಶಂಕರ ರೆಡ್ಡಿ, ಜಯಮಾಲಾ, ಜಮೀರ್‌ ಅಹಮದ್‌ ಖಾನ್‌ ಹಾಗೂ ಆರ್‌. ಶಂಕರ್‌ ಪಾಲ್ಗೊಂಡಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಕೂಡ ಪಾಲ್ಗೊಂಡಿದ್ದರು.

ರಮೇಶ್‌ ಗೈರು
ಡಿ.ಕೆ.ಶಿವಕುಮಾರ್‌ ಜೊತೆ ಮುನಿಸಿಕೊಂಡಿದ್ದ ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಉಪಹಾರ ಕೂಟದಿಂದ ದೂರ ಉಳಿದರು. ಮುಂಬೈನಲ್ಲಿರುವ ರಮೇಶ್‌ ಜಾರಕಿಹೊಳಿಯನ್ನು ಡಿ.ಕೆ. ಶಿವಕುಮಾರ್‌ ದೂರವಾಣಿ ಮೂಲಕ ಸಂಪರ್ಕಿಸಿದರು ಎಂದು ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ವಿದೇಶ ಪ್ರವಾಸಕ್ಕೆ ತೆರಳಿದ್ದರಿಂದ ಅವರು ಸಭೆಗೆ ಹಾಜರಾಗಿರಲಿಲ್ಲ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.