ತ.ನಾಡಿಗೆ ನೀರು ಬಿಡಬೇಡಿ: ಸಿಎಂಗೆ ಅಂಬರೀಶ್‌ ಪತ್ರ


Team Udayavani, Jan 16, 2018, 6:20 AM IST

Ambareesh-800.jpg

ಬೆಂಗಳೂರು: ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡಬಾರದು ಎಂದು ಮಾಜಿ ಸಚಿವ ಹಾಗೂ ಮಂಡ್ಯ ಶಾಸಕ ಅಂಬರೀಶ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಬರಗಾಲ ಇರುವುದರಿಂದ ಜಲಾಶಯಗಳಲ್ಲಿ ನೀರು ಸಂಗ್ರಹವಾಗಿಲ್ಲ. ಈಗಿರುವ ಪ್ರಮಾಣ ಲೆಕ್ಕ ಹಾಕಿದರೆ
ಬೆಂಗಳೂರಿಗೆ ಮತ್ತು ಕಾವೇರಿ ಕೊಳ್ಳದಲ್ಲಿರುವ ಪ್ರದೇಶಗಳ ಜನರಿಗೆ ಕುಡಿಯಲು, ಜಾನುವಾರುಗಳಿಗೆ ಹಾಗೂ ಬೆಳೆದು ನಿಂತಿರುವ ಬೆಳೆಗಳಿಗೆ ನೀಡುವುದೂ ಕಷ್ಟ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಟ್ಟರೆ ಹಾಹಾಕಾರವಾಗುತ್ತದೆ. ಹೀಗಾಗಿ,ತಮಿಳುನಾಡಿಗೆ ನೀರು ಬಿಡಬಾರದು ಎಂದು ಆ ಭಾಗದ ಜನಪ್ರತಿನಿಧಿಯಾಗಿ ಮತ್ತು ರೈತರ ಪರವಾಗಿ ಮನವಿ ಮಾಡುತ್ತೇನೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಪತ್ರದ ಸಾರಾಂಶ: ಕಾವೇರಿ ಜಲಾಶಯದಿಂದ ನೀರು ಬಿಡುವಂತೆ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿಯವರು ತಮಗೆ ಬರೆದಿರುವ ಪತ್ರಕ್ಕೆ ಸ್ಪಂದಿಸಬಾರದು. ತಾವು ಸ್ಪಂದಿಸುವುದಿಲ್ಲ ಎಂಬ ವಿಶ್ವಾಸ ನನ್ನದು. ಈಗಾಗಲೇ ತಾವು ನೀರು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ನಿಮ್ಮ ನಿಲುವನ್ನು ನಾನು ಸೇರಿದಂತೆ ಕಾವೇರಿ ಅಚ್ಚುಕಟ್ಟು ಪ್ರದೇಶದ ಎಲ್ಲ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ರೈತ ಸಂಘಟನೆಗಳು,ಹೋರಾಟಗಾರರು ಸ್ವಾಗತಿಸುತ್ತೇವೆ. ಜೊತೆಗೆ ನಿಮ್ಮ ಜತೆ ನಿಲ್ಲುತ್ತೇವೆ. ನ್ಯಾಯಾಧಿಕರಣದ ತೀರ್ಪಿನ ಅನ್ವಯ ನೀರು ಬಿಡಲು ತಮಿಳುನಾಡಿನ ಮುಖ್ಯಮಂತ್ರಿಯವರು ಕೋರಿದ್ದಾರೆ. ಆದರೆ, ನಮ್ಮಲ್ಲೇ ನೀರಿಲ್ಲದಿದ್ದರೆ ತಮಿಳುನಾಡಿಗೆ ಎಲ್ಲಿಂದ ಬಿಡುವುದು.

ರಾಜ್ಯದ ಮುಖ್ಯಮಂತ್ರಿಗಳಾದ ತಾವು ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ಬಿಡದೆ ರೈತರ ಹಿತವನ್ನು ಕಾಪಾಡಬೇಕು. ಅಗತ್ಯವಾದರೆ ಜನಪ್ರತಿನಿಧಿಗಳು, ರೈತ ಸಂಘಟನೆಗಳು ಹಾಗೂ ಹೋರಾಟಗಾರರ ಮತ್ತು ಸರ್ವ ಪಕ್ಷದ ಮುಖಂಡರ ಸಭೆ ಕರೆದು ಚರ್ಚಿಸಬೇಕು ಎಂದು ಕೋರುತ್ತೇನೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.