5ನೇ ದಿನದತ್ತ ವೈದ್ಯರ ಪ್ರತಿಭಟನೆ

Team Udayavani, Nov 6, 2019, 10:19 AM IST

bng-tdy-3

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಕಿರಿಯ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರವೂ (ನಾಲ್ಕನೇದಿನ) ಮುಂದುವರಿಯಿತು.

ವಿಕ್ಟೋರಿಯ ಸಮುತ್ಛಯದ ಮುಂಭಾಗ ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೂ ಪ್ರತಿಭಟನೆ ನಡೆಯಿತು. ಹಲ್ಲೆ ಮಾಡಿರುವ ಅಶ್ವಿ‌ನಿ ಗೌಡ ಸೇರಿಂದಂತೆ ಕರವೇ ಕಾರ್ಯಕರ್ತರನ್ನು ಬಂಧಿಸಬೇಕು. ಜೀವ ರಕ್ಷಿಸುವವೈದ್ಯರಿಗೆ ರಕ್ಷಣೆ ನೀಡಬೇಕು ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಈ ಪ್ರತಿಭಟನೆಗೆ ಭಾರತೀಯ ವೈದ್ಯ ಸಂಘವೂ (ಐಎಂಎ) ಪ್ರತಿಭಟನೆಗೆ ಬೆಂಬಲ ಸೂಚಿಸುವ ಹಿನ್ನೆಲೆ ಕರವೇ ಕಾರ್ಯಕರ್ತರ ಮೇಲೆ ಕಾನೂನು ಕ್ರಮ ಕೈಗೊಂಡು ಬಂಧಿಸದಿದ್ದರೆ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಈ ಕುರಿತು ಮಾತನಾಡಿರುವ ಐಎಂಎ ಕಾರ್ಯ ದರ್ಶಿ ಡಾ.ಎಸ್‌.ಶ್ರೀನಿವಾಸ್‌, ಕರವೇ ಕಾರ್ಯಕರ್ತರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದು, ವೈದ್ಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾರ್ಯಕರ್ತರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು. ವೇದಿಕೆಯ ಮಹಿಳಾ ಘಟಕದ  ಅಧ್ಯಕ್ಷೆ ಅಶ್ವಿ‌ನಿ ಗೌಡ ಕ್ಷಮೆ ಕೋರಬೇಕು ಎಂದು ವೈದ್ಯರು ಒತ್ತಾಯಿಸಿದರು.

ಹೊರರೋಗಿಗಳ ವಿಭಾಗ (ಒಪಿಡಿ) ಸೇವೆ ನಿಲ್ಲಿಸಿದರೆ ರೋಗಿಗಳಿಗೆ ತೊಂದರೆ ಯಾಗುತ್ತದೆ. ಹೀಗಾಗಿ, ವೈದ್ಯರ ಮೇಲೆ ಹಲ್ಲೆ ಖಂಡಿಸಿ ರಾಜ್ಯಾದ್ಯಂತ ಕಪ್ಪುಪಟ್ಟಿ ಧರಿಸಿ ಐಎಂಎ ವೈದ್ಯರು ಸೇವೆ ಸಲ್ಲಿಸಿದ್ದಾರೆ. ಮುಂದಿನ ಎರಡು ದಿನದಲ್ಲಿ ಕರವೇ ಕಾರ್ಯಕರ್ತರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಶುಕ್ರವಾರ (ನ.8) ಐಎಂಎ ವತಿಯಿಂದ ರಾಜ್ಯಾದ್ಯಂತ ಹೊರರೋಗಿಗಳ ಸೇವೆ (ಒಪಿಡಿ) ಬಂದ್‌ ಮಾಡಿ ಪ್ರತಿಭಟಿಸಲಾಗುವುದು. ಗುರುವಾರ ಹಾಗೂ ಶುಕ್ರವಾರ ಕಪ್ಪುಬಟ್ಟೆ ಪಟ್ಟಿ ಧರಿಸಿಯೇ ವೈದ್ಯರು ಸೇವೆ ಸಲ್ಲಿಸುತ್ತಾರೆ ಎಂದು ತಿಳಿಸಿದರು.

ರೋಗಿಗಳ ಪರದಾಟ: ವಿಕ್ಟೋರಿಯಾ ಸಮುತ್ಛಯದ ಆಸ್ಪತ್ರೆಗಳಲ್ಲಿ ಹೊರರೋಗಿಗಳ ವಿಭಾಗದಲ್ಲಿ ಮಂಗಳವಾರ ಹೆಚ್ಚು ಸಂಖ್ಯೆಯಲ್ಲಿ ರೋಗಿಗಳು ಬಂದಿದ್ದು, ವೈದ್ಯರ ಸಂಖ್ಯೆ ಕಡಿಮೆಯಿದ್ದ ಪರಿಣಾಮ ಸಮಯಕ್ಕೆ ಚಿಕಿತ್ಸೆಗಾಗಿ ಪರದಾಡಿದರು. ವಿವಿಧ ಚಿಕಿತ್ಸಾ ವಿಭಾಗಗಳ ಮುಂದೆ ರೋಗಿಗಳು ಸಾಲುಗಟ್ಟಿ ನಿಂತಿದ್ದರು.

ವಿಕ್ಟೋರಿಯಾ ಸಮುತ್ಛಯದ ಪ್ರಮುಖ ದ್ವಾರದ ಬಳಿ ಪ್ರತಿಭಟನೆ ನಡೆಯುತ್ತಿದ್ದರಿಂದ ಚಿಕಿತ್ಸೆಗಾಗಿ ಬಂದ ರೋಗಿಗಳು ಆಸ್ಪತ್ರೆ ಪ್ರವೇಶಕ್ಕೆ ಕಷ್ಟಪಡಬೇಕಾಯಿತು. ಇನ್ನು ವೈದ್ಯರ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರ ಇತರೆ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ತೊಂದರೆಯಾಗ ದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುನ್ನೆಚ್ಚರಿಕೆ ಕೈಗೊಂತ್ತು. ಹೀಗಾಗಿ ಇತರೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತು. ಕೆ.ಸಿ. ಜನರಲ್‌, ಜಯನಗರ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆಯಲ್ಲಿ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.