ಜೈವಿಕ ಡೀಸೆಲ್‌ ಕಾರು ಜಾಥಾಕ್ಕೆ ಚಾಲನೆ

Team Udayavani, Feb 18, 2017, 12:38 PM IST

ananath-kum,ar.jpg

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಎನ್ನಲಾದ ಜೈವಿಕ ಇಂಧನವನ್ನೇ ಬಳಸಿದ ಕಾರು (ಡೀಸೆಲ್‌ ಕಾರ್‌ ಡ್ರೈವಥಾನ್‌) ಜಾಥಾಗೆ ಕೇಂದ್ರ ಸಚಿವ ಅನಂತಕುಮಾರ್‌ ಶುಕ್ರವಾರ ಚಾಲನೆ ನೀಡಿದರು.

ಶೃಂಗೇರಿ ಶಾರದಾ ಪೀಠ ಹಾಗೂ ಜ್ಯೋತಿ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಸಂಸ್ಥೆ ಸ್ಥಾಪಿಸಿರುವ ಸೆಂಟರ್‌ ಫಾರ್‌ ಇನೋವೇಶನ್‌, ರಿಸರ್ಚ್‌ ಕನ್‌ಸಲ್ಟೆನ್ಸಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಜಾಥಾದಲ್ಲಿ 35 ಕಾರುಗಳು ಪಾಲ್ಗೊಂಡಿದ್ದವು. ಜಾಥಾ ಬೆಂಗಳೂರಿನಿಂದ  ಶೃಂಗೇರಿಗೆ ತೆರಳಿ ಭಾನುವಾರ ನಗರಕ್ಕೆ ಹಿಂತಿರುಗಲಿವೆ. 

ಈ ವೇಳೆ ಶೃಂಗೇರಿ ಸೇರಿ ಪವಿತ್ರ ಕ್ಷೇತ್ರಗಳಲ್ಲಿ ಜೈವಿಕ ಇಂಧನಕ್ಕಾಗಿ ಬೆಳೆಸುವ ಗಿಡಗಳನ್ನು ನೆಟ್ಟು ಸ್ಥಳೀಯರಲ್ಲಿ ಜಾಗೃತಿ ಮೂಡಿಸುವುದು ಜಾಥಾದ ಉದ್ದೇಶವಾಗಿದೆ. ಜಾಥಾಗೆ ಚಾಲನೆ ನೀಡಿದ ಕೇಂದ್ರ ಸಚಿವ ಅನಂತಕುಮಾರ್‌, “ದೇಶದಲ್ಲಿ ಮಾಲಿನ್ಯ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಜೈವಿಕ ಇಂಧನ ಬಳಕೆ ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ.

ಈಗಾಗಲೇ ಪೆಟ್ರೋಲ್‌ಗೆ ಶೇ.5ರಷ್ಟು ಮದ್ಯಸಾರ ಮಿಶ್ರಣ ಮಾಡಿ ಬಳಸಲು ಪ್ರೋತ್ಸಾಹಿಸುತ್ತಿದ್ದು, ಈ ಪ್ರಮಾಣವನ್ನು ಶೇ.10ಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಡೀಸೆಲ್‌ಗ‌ೂ ಜೈವಿಕ ಡೀಸೆಲ್‌ ಅನ್ನು ಶೇ.5 ಇಲ್ಲವೇ ಶೇ.10ರಷ್ಟು ಮಿಶ್ರಣ ಮಾಡಿ ಬಳಸುವ ಸಂಬಂಧ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೆàಂದ್ರ ಪ್ರಧಾನ್‌ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.

ದೆಹಲಿ, ಬೆಂಗಳೂರು ಸೇರಿ ಇತರೆ ಮಹಾನಗರಗಳಲ್ಲಿ ಜೈವಿಕ ಡೀಸೆಲ್‌ ಬಳಕೆ ಬಗ್ಗೆ ಯೋಜನೆ ರೂಪಿಸಿ ನಂತರ ಇತರೆ ನಗರಗಳಿಗೆ ವಿಸ್ತರಿಸಲಾಗುವುದು. ಒಂದು ಕೋಟಿ ಜನ ನೆಲೆಸಿರುವ ಬೆಂಗಳೂರಿನಲ್ಲಿ 75 ಲಕ್ಷ ವಾಹನಗಳಿದ್ದು, ಮಾಲಿನ್ಯ ಪ್ರಮಾಣ ತಗ್ಗಿಸಲು ಜೈವಿಕ ಇಂಧನ ಬಳಕೆಯೇ ಪರಿಹಾರ ಎಂದು ತಿಳಿಸಿದರು.

ನ್ಯಾಷನಲ್‌ ಬಯೋಡೀಸೆಲ್‌ ವರ್ಕಿಂಗ್‌ ಗ್ರೂಪ್‌ ಅಧ್ಯಕ್ಷ ವೈ.ಬಿ.ರಾಮಕೃಷ್ಣ, “ಬಯೋಡೀಸೆಲ್‌ ಪಿತಾಮಹ ಉಡುಪಿ ಶ್ರೀನಿವಾಸ್‌ ಅವರೊಂದಿಗೆ ರಾಜ್ಯದಲ್ಲಿ 2003ರಲ್ಲೇ ರಾಷ್ಟ್ರೀಯ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಆಗ ಕೇಂದ್ರ ನಗರಾಭಿವೃದ್ಧಿ ಸಚಿವರಾಗಿದ್ದ ಅನಂತಕುಮಾರ್‌ ನೆರವು ನೀಡಿದ್ದರು. ಇದೀಗ ಕೇಂದ್ರ ಸರ್ಕಾರ ಕೈಗೊಂಡಿರುವ ಹಲವು ಕ್ರಮಗಳು ಜೈವಿಕ ಇಂಧನ ಬಳಕೆಗೆ ಪ್ರೇರಣೆ ನೀಡುವಂತಿವೆ ಎಂದರು.

ಶೃಂಗೇರಿ ಮಠದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ವಿ.ಆರ್‌.ಗೌರಿಶಂಕರ್‌, ಸಿಐಐಆರ್‌ಸಿ ಕೇಂದ್ರ ಸ್ಥಾಪನೆಯಾಗಿ ಐದು ತಿಂಗಳು ಕಳೆಯುವುದರೊಳಗೆ ಇಂತಹ ಜಾಥಾ ಹಮ್ಮಿಕೊಂಡಿರುವುದು ಸಂತಸದ ಸಂಗತಿ ಎಂದು ಹೇಳಿದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.