ಮಳೆ ನೀರು ಕಾಲುವೆ ಮೇಲೆ ದ್ರೋಣ್‌ ಕ್ಯಾಮೆರಾ ಕಾವಲು


Team Udayavani, Nov 16, 2017, 10:32 AM IST

7gHk9Kff.jpg

ಬೆಂಗಳೂರು: ಬಿಬಿಎಂಪಿ ವತಿಯಿಂದ ನಗರದ ವಿವಿಧೆಡೆ ನಡೆಸುತ್ತಿರುವ ಬೃಹತ್‌ ಮಳೆನೀರು ಕಾಲುವೆ ಅಭಿವೃದ್ಧಿ ಕಾಮಗಾರಿಗಳನ್ನು ದ್ರೋಣ್‌ ಕ್ಯಾಮೆರಾ ಮೂಲಕ ಚಿತ್ರೀಕರಿಸುವಂತೆ ಮೇಯರ್‌ ಆರ್‌.ಸಂಪತ್‌ರಾಜ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ಮಹದೇವಪುರ ವಲಯದಲ್ಲಿನ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿನ ಬೃಹತ್‌ ಮಳೆನೀರು ಕಾಲುವೆ ಕಾಮಗಾರಿಗಳನ್ನು ವಾರ್ಡ್‌ವಾರು ವಿಂಗಡಿಸಿ ದ್ರೋಣ್‌ ಕ್ಯಾಮೆರಾ ಮೂಲಕ ಚಿತ್ರೀಕರಿಸಿ ಕಾಮಗಾರಿಯ ಮಾಹಿತಿಯನ್ನು ಪಾಲಿಕೆಯ ವೆಬ್‌ಸೈಟ್‌ಗೆ ಅಪ್‌ ಲೋಡ್‌ ಮಾಡುವಂತೆ ಮಳೆನೀರು ಕಾಲುವೆ ಮುಖ್ಯ ಎಂಜಿನಿಯರ್‌ಗೆ ಆದೇಶಿಸಿದರು. 

ದ್ರೋಣ್‌ ಮೂಲಕ ನಗರದ ವಿವಿಧ ಸ್ಥಳಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಳೀಯ ಸದಸ್ಯರು ಹಾಗೂ ಅಧಿಕಾರಿಗಳು ಪರಿಶೀಲಿಸಬಹುದಾಗಿದೆ. ಹೀಗಾಗಿ ಶೀಘ್ರ ಈ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ತಿಳಿಸಿದ ಅವರು, ಇದರೊಂದಿಗೆ ಕಾಲುವೆಗಳಲ್ಲಿ ಹೂಳು ತೆಗೆದಿರುವ ಪ್ರಮಾಣ ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗಳ  ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಿಳಿಸಿದರು.

ಮಹದೇವಪುರ ವಲಯದ ಕಾಲುವೆಗಳ ಅಭಿವೃದ್ಧಿಗೆ ಸಿಎಂ, 30 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿ ಗಳಿಂದ ಮಾಹಿತಿ ಪಡೆದರು. ವಲಯದಲ್ಲಿ ಒಟ್ಟು 178 ಕಿ.ಮೀ. ಉದ್ದದ ಬೃಹತ್‌ ನೀರುಗಾಲುವೆ ಯಿದ್ದು, 9 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸರ್ವೆಯರ್‌ಗಳನ್ನು ಕಾಯಂ ಆಗಿ ನೇಮಿಸಿ ಕೊಳ್ಳಿ: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಸರ್ವೆಯರ್‌ಗಳ ಕೊರತೆ ಎದುರಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮೇಯರ್‌ ಸಂಪತ್‌ರಾಜ್‌, ಕಾರ್ಯಾಚರಣೆಗಾಗಿಯೇ ಹತ್ತು ಜನ ಸರ್ವೆಯರ್‌ಗಳನ್ನು ಪಾಲಿಕೆಗೆ ನಿಯೋಜನೆ ಮಾಡಿಕೊಳ್ಳುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಆದೇಶಿಸಿದರು. ನಗರೋತ್ಥಾನ, ರಾಜ್ಯ ಸರ್ಕಾರದ ವಿಶೇಷ ಅನುದಾನದಡಿ ವಿವಿಧ ಕಾಮಗಾರಿ ನಡೆಯುತ್ತಿದ್ದು, ಡಿ.15ರೊಳಗೆ ಎಲ್ಲ ರಸ್ತೆಗಳಿಗೆ ಡಾಂಬರೀಕರಣ ಕಾಮಗಾರಿ ಮುಗಿಸುವಂತೆ ತಿಳಿಸಿದ ಅವರು, ಟಿಡಿಆರ್‌ ನೀಡಿ ಕೆಲವೊಂದು ಆಸ್ತಿಗಳನ್ನು ಪಾಲಿಕೆ ಪಡೆಯಲಾಗಿದೆ. ಇಂತಹ ಆಸ್ತಿಗಳು ಪಾಲಿಕೆಯ ಸುಪರ್ದಿಗೆ ಬಂದಿವೆಯೇ ಎಂಬ ದಾಖಲೆಗಳನ್ನು ಒದಗಿಸುವಂತೆ ಅವರು ಅಧಿಕಾರಿಗಳಿಗೆ ಹೇಳಿದರು.

ತೆರಿಗೆ ಸಂಗ್ರಹ ಅಭಿಯಾನ ಆರಂಭಿಸಿ ಮಹದೇವಪುರ ವಲಯದಲ್ಲಿ ತೆರಿಗೆ ಸಂಗ್ರಹ ಸಮರ್ಪಕವಾಗಿ ಆಗುತ್ತಿಲ್ಲ. ತೆರಿಗೆ ಸಂಗ್ರಹ ಅಭಿಯಾನ ಆರಂಭಿಸುವಂತೆ ಸಂಪತ್‌ರಾಜ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಸಕ್ತ ಸಾಲಿನಲ್ಲಿ ಬಹುಮಹಡಿ ಕಟ್ಟಡಗಳು, ಮಾಲ್‌ಗಳು, ಟೆಕ್‌ಪಾರ್ಕ್‌ಗಳಿಂದ ಸಮರ್ಪಕವಾಗಿ ತೆರಿಗೆ ಸಂಗ್ರಹವಾಗಿಲ್ಲ. ಹೀಗಾಗಿ ಪ್ರತಿಯೊಂದು ಆಸ್ತಿಗೂ ಪಿಐಡಿ ಸಂಖ್ಯೆ ನೀಡುವ ಕೆಲಸವನ್ನು ಆರಂಭಿಸುವಂತೆ ಸೂಚಿಸಿದರು. ಜತೆಗೆ ಟೋಟಲ್‌ ಸ್ಟೇಷನ್‌ ಸರ್ವೆಯಿಂದ ಪಾಲಿಕೆಗೆ ತಪ್ಪು ಮಾಹಿತಿ ನೀಡಿರುವ ಅಂಶ ಬಯಲಾಗಿದ್ದು, ಅಂತಹ ಕಟ್ಟಡಗಳಿಂದ ಬಾಕಿ, ದಂಡ ಹಾಗೂ ಬಡ್ಡಿಯೊಂದಿಗೆ ತೆರಿಗೆ ವಸೂಲಿ ಮಾಡಿ ಎಂದು ಆದೇಶಿಸಿದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.