Drug peddler: ಪ್ರತ್ಯೇಕ ಪ್ರಕರಣ: 8 ಅಂತಾರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳ ಸೆರೆ


Team Udayavani, Sep 5, 2023, 4:03 PM IST

Drug peddler: ಪ್ರತ್ಯೇಕ ಪ್ರಕರಣ: 8 ಅಂತಾರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳ ಸೆರೆ

ಬೆಂಗಳೂರು:  ಮೂರು ಪ್ರತ್ಯೇಕ ಮಾದಕ ವಸ್ತು ಮಾರಾಟ ಪ್ರಕರಣಗಳ ಕಾರ್ಯಾಚರಣೆಯಲ್ಲಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಹಾಗೂ ಸ್ಥಳೀಯ ಪೊಲೀಸರು ಆರು ಅಂತಾರಾಜ್ಯ ಪೆಡ್ಲರ್‌ಗಳು ಸೇರಿ ಎಂಟು ಮಂದಿ ಬಂಧಿಸಿದ್ದಾರೆ.

ಆನ್‌ಲೈನ್‌ನ ಮೂಲಕ ಹಣಕಾಸು ವ್ಯವಹಾರ ನಡೆಸಿ, ಲೊಕೇಷನ್‌ ಕಳುಹಿಸಿ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ರಾಜಸ್ಥಾನ ಮೂಲದ ಮೂವರು ಸೇರಿ ನಾಲ್ವರು ಕೊಡಿಗೇಹಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಜಸ್ಥಾನದ ನೇಮಿಚಂದ್‌ (40), ಓಂಪ್ರಕಾಶ್‌ (35), ಪ್ರೇಮರಾಜ್‌(40) ಮತ್ತು ಬೆಂಗಳೂರಿನ ಥಣಿಸಂದ್ರ ನಿವಾಸಿ ಮಲ್ಲೇಶ್‌(35) ಬಂಧಿತರು. ಆರೋಪಿಗಳಿಂದ ಮೂರು ಲಕ್ಷ ರೂ. ಮೌಲ್ಯದ 61 ಗ್ರಾಂ ತೂಕದ ಹೆರಾಯಿನ್‌, ಮೂರು ಮೊಬೈಲ್‌, ಒಂದು ಕಾರು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಇತ್ತೀಚೆಗೆ ಆರೋಪಿಗಳು ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳು, ಐಟಿ ಕಂಪನಿಯ ಉದ್ಯೋಗಿಗಳಿಗೆ ಪೂರೈಕೆ ಮಾಡು ತ್ತಿದ್ದರು. ಈ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿ  ಸ ಲಾಗಿದೆ. ಕೆಲ ವರ್ಷಗಳ ಹಿಂದೆಯೇ ಬೆಂಗ ಳೂರಿಗೆ ಬಂದಿದ್ದ ರಾಜಸ್ಥಾನ ಮೂಲದ ಆರೋಪಿ ಗಳು ನಗರದಲ್ಲಿ ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿದ್ದರು. ಇನ್ನು ಮಲ್ಲೇಶ್‌ ಕೂಡ ಆರೋಪಿಗಳಿಗೆ ಪರಿಚಯಸ್ಥನಾಗಿದ್ದ. ಹೀಗಾಗಿ ರಾಜಸ್ಥಾನದಲ್ಲಿ ಕೆಲ ವ್ಯಕ್ತಿಗಳನ್ನು ಪರಿಚಯಿಸಿಕೊಂಡು ಅಲ್ಲಿಂದಲೇ ಮಾದಕ ವಸ್ತುಗಳನ್ನು ನಗರಕ್ಕೆ ತರಿಸುತ್ತಿದ್ದರು. ತಮಗೆ ಕರೆ ಮಾಡುತ್ತಿದ್ದ ನಿರ್ದಿಷ್ಟ ಗ್ರಾಹಕರಿಂದ ಆನ್‌ಲೈನ್‌ ಮೂಲಕ ಹಣ ಪಡೆದುಕೊಂಡು, ನಿರ್ಜನ ಪ್ರದೇಶದಲ್ಲಿ ಮಾದಕ ವಸ್ತುವಿನ ಪೊಟ್ಟಣ ಇರಿಸಿ, ಲೋಕೇಷನ್‌ ಕಳುಹಿಸುತ್ತಿದ್ದರು. ಬಳಿಕ ಗ್ರಾಹಕ ಆ ಲೋಕೇಷನ್‌ಗೆ ಬಂದು ಪೊಟ್ಟಣ ತೆಗೆದುಕೊಂಡು ಹೋಗುತ್ತಿದ್ದ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಯಲಹಂಕ ಉಪವಿಭಾಗದ ಎಸಿಪಿ ಆರ್‌.ಮಂಜುನಾಥ್‌, ಠಾಣಾಧಿಕಾರಿ ಎಂ.ಎ.ಮಹೇಶ್‌, ಪಿಎಸ್‌ಐ ಲಕ್ಷ್ಮೀಕಾಂತ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂವರು ಒಡಿಶಾದವರ ಬಂಧನ: ಒಡಿಶಾದಿಂದ ಮಾದಕ ವಸ್ತು ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ಮೂವರನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಸುಧೀರ್‌ ರಾಣಾ(32), ಸಂತೋಷ್‌ ರಾಣಾ(28) ಮತ್ತು ಕ್ಯಾಬನ್‌ ಬಾಗ್‌(38) ಬಂಧಿತರು. ಆರೋಪಿಗಳಿಂದ 11 ಲಕ್ಷ ರೂ. ಮೌಲ್ಯದ 21.14 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಇತ್ತೀಚೆಗೆ ಒಡಿಶಾದಿಂದ ಭಾರೀ ಪ್ರಮಾಣದಲ್ಲಿ ಮಾದಕ ವಸ್ತು ತಂದು ನಗರದಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಠಾಣಾಧಿಕಾರಿ ಬಿ.ಗೋವಿಂದರಾಜು, ಪಿಎಸ್‌ಐ ಡಿ.ಕೆ.ಶ್ರೀಶೈಲಾ, ಎಂ.ಎಲ್‌.ಸುಷ್ಮಾ, ಕೆ.ಸಿ.ಹೇಮಂತ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಯಲಹಂಕ ನ್ಯೂಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಟ್‌-ಎನ್‌ಡಿಪಿಎಸ್‌ ಅಡಿ ಬಂಧನ:

ಪದೇಪದೆ ಮಾದಕ ವಸ್ತು ಮಾರಾಟ ದಂಧೆಯಲ್ಲಿ ಭಾಗಿಯಾಗುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಪಿಟ್‌ – ಎನ್‌ಡಿಪಿಎಸ್‌ ಕಾಯ್ದೆ ಅಡಿ ಬಂಧಿಸಿದ್ದಾರೆ. ಬಿಹಾರ ಮೂಲದ ಅಖೀಲೇಶ್‌ ಕುಮಾರ್‌(30) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ನಿರಂತರವಾಗಿ ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗುತ್ತಿದ್ದ. ಇತ್ತೀಚೆಗೆ ಡ್ರಗ್ಸ್‌ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ. ಜಾಮೀನು ಪಡೆದು ಬಿಡುಗಡೆ ಬಳಿಕ ಕೋರ್ಟ್‌ನ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಅಲ್ಲದೆ, ತನ್ನ ಸಹಚರರ ಮೂಲಕ ಡ್ರಗ್ಸ್‌ ದಂಧೆ ನಡೆಸುತ್ತಿದ್ದ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.