ಡ್ರಗ್ಸ್ ಮಾರಾಟ: ಕಿರುತೆರೆ ನಟ ಸೇರಿ ಮೂವರ ಸೆರೆ
Team Udayavani, Sep 24, 2022, 1:10 PM IST
ಬೆಂಗಳೂರು: ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕೇರಳದ ಕಿರುತೆರೆ ನಟ ಸೇರಿ ಮೂವರು ಆರೋಪಿಗಳನ್ನು ಎಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಸಿಹಾಜ್ ಮೊಹಮ್ಮದ್(26), ಮೊಹಮ್ಮದ್ ಸಾಹೀದ್(30) ಮತ್ತು ಜೀತಿನ್ (32) ಬಂಧಿತರು. ಆರೋಪಿಗಳಿಂದ ಆರು ಲಕ್ಷ ರೂ. ಮೌಲ್ಯದ 101 ಗ್ರಾಂ ಎಂಡಿಎಂಎ ಮಾತ್ರೆಗಳು ಮತ್ತು 1.50 ಲಕ್ಷ ರೂ. ಮೌಲ್ಯದ 2 ಕೆ.ಜಿ. 80 ಗ್ರಾಂ ಗಾಂಜಾ ಹಾಗೂ ಎರಡೂವರೆ ಸಾವಿರ ರೂ. ನಗದು, ಮೊಬೈಲ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿಗಳು ಸೆ.19 ರಂದು ಠಾಣಾ ವ್ಯಾಪ್ತಿಯ ಕಾಲೇಜೊಂದರ ಬಳಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ.
ಕೇರಳದಿಂದ ಡ್ರಗ್ಸ್ಗಳನ್ನು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು. ಆರೋಪಿಗಳ ಪೈಕಿ ಸಿಹಾಜ್ ಮೊಹಮ್ಮದ್ ಕೇರಳದಲ್ಲಿ ಕಿರುತೆರೆ ನಟನಾಗಿದ್ದು, ಮಾದಕ ವಸ್ತು ವ್ಯಸನಿಯಾಗಿದ್ದ. ಜತೆಗೆ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಮೊಬೈಲ್ ಅಂಗಡಿ ನಡೆಯುತ್ತಿದ್ದ ಮೊಹಮ್ಮದ್ ಸಾಹಿದ್ ಜತೆ ಸೇರಿಕೊಂಡು ಡ್ರಗ್ಸ್ ದಂಧೆಗೆ ಇಳಿದಿದ್ದಾನೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ