Drugs Sell: ಚಿಕಿತ್ಸೆಗೆ ಬಂದು ಡ್ರಗ್ಸ್‌ ದಂಧೆ ನಡೆಸುತ್ತಿದ್ದ ನೈಜೀರಿಯಾ ಪ್ರಜೆ!

Team Udayavani, Dec 8, 2023, 12:26 PM IST

Drugs Sell: ಚಿಕಿತ್ಸೆಗೆ ಬಂದು ಡ್ರಗ್ಸ್‌ ದಂಧೆ ನಡೆಸುತ್ತಿದ್ದ ನೈಜೀರಿಯಾ ಪ್ರಜೆ!

ಬೆಂಗಳೂರು: ದೆಹಲಿಯಿಂದ ಮಾದಕ ವಸ್ತು ತರಿಸಿಕೊಂಡು ನಗರದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಮಾನ್ಯೂಯಲ್‌ ಲೋಟೋಚುಕುವಾ (27) ಬಂಧಿತ ನೆಜೀರಿಯಾ ಪ್ರಜೆ. ಆರೋಪಿಯಿಂದ 5 ಲಕ್ಷ ರೂ. ಮೌಲ್ಯದ 23 ಗ್ರಾಂ ಕೋಕೇನ್‌, 238 ಗ್ರಾಂ ಸಿಂಥೆಟಿಕ್‌ ಡ್ರಗ್ಸ್‌, 57 ಸಾವಿರ ರೂ. ನಗದು, 2 ಮೊಬೈಲ್‌ ಗಳನ್ನು, ಎಲೆಕ್ಟ್ರಾನಿಕ್‌ ತೂಕದ ಯಂತ್ರ ಹಾಗೂ ಇತರೆ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ.

ಮೂರು ವರ್ಷಗಳ ಹಿಂದೆ ವೈದ್ಯಕೀಯ ವೀಸಾ ಪಡೆದು ಬೆಂಗಳೂರಿಗೆ ಬಂದಿರುವ ಆರೋಪಿ, ವಿದ್ಯಾರಣ್ಯಪುರದ ವಡೇರಹಳ್ಳಿ ಯಲ್ಲಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಆರಂಭದಲ್ಲಿ ವೈದ್ಯಕೀಯ ಪರೀಕ್ಷೆಗೊಳಪಟ್ಟು ಚಿಕಿತ್ಸೆ ಪಡೆದುಕೊಂಡಿದ್ದ ಆರೋಪಿ, ಆ ನಂತರ ಜೀವನ ನಿರ್ವಹಣೆಗಾಗಿ ದೆಹಲಿಯಿಂದ ಮಾದಕ ವಸ್ತು ಕೋಕೇನ್‌ ಹಾಗೂ ಸಿಂಥೆಟಿಕ್‌ ಡ್ರಗ್ಸ್‌ಗಳನ್ನು ತರಿಸುತ್ತಿದ್ದ. ಬಳಿಕ ಅವುಗಳನ್ನು ಕೊರಿಯರ್‌ ಹಾಗೂ ಫ‌ುಡ್‌ ಡೆಲವರಿ ಬಾಯ್‌ ಗಳ ಮೂಲಕ ಗ್ರಾಹಕರಿಗೆ ಪೂರೈಕೆ ಮಾಡಿ, ಆನ್‌ ಲೈನ್‌ ಮೂಲಕ ಹಣ ಪಡೆಯುತ್ತಿದ್ದ. ಈ ಮಾಹಿತಿ ಮೇರೆಗೆ ಠಾಣಾಧಿಕಾರಿ ಸಿ.ಬಿ.ಶಿವಸ್ವಾಮಿ, ಪಿಎಸ್‌ಐ ಕೆ.ಎಲ್‌.ಪ್ರಭು ನೇತೃತ್ವದ ತಂಡ ಆತನ ಮನೆ ಮೇಲೆ ದಾಳಿ ನಡೆಸಿ ಮಾದಕ ವಸ್ತು ಸಮೇತ ಬಂಧಿಸಿದೆ. ಈತನ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆ ಅಡಿ ಕೇಸ್‌ ದಾಖಲಿಸಬಹುದು ಎಂದು ಪೊಲೀಸರು ಹೇಳಿದರು.

ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.