Arrested: ನಶೆಯಲ್ಲಿ ನಿಂದನೆ; ಸ್ನೇಹಿತನ ಹತ್ಯೆಗೈದಿದ್ದ ಐವರ ಬಂಧನ

Team Udayavani, Apr 22, 2024, 1:11 PM IST

Arrested: ನಶೆಯಲ್ಲಿ ನಿಂದನೆ; ಸ್ನೇಹಿತನ ಹತ್ಯೆಗೈದಿದ್ದ ಐವರ ಬಂಧನ

ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಫ‌ುಡ್‌ ಡೆಲಿವರಿ ಬಾಯ್‌ ಕೊಲೆಗೈದಿದ್ದ ಐವರು ಆರೋಪಿಗಳನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ.

ದೊಮ್ಮಲೂರಿನ ಎಸ್‌.ಸಂತೋಷ್‌(36), ಇಂದಿರಾನಗರದ ಎಂ.ಪವನ್‌ ಕುಮಾರ್‌ (26), ತಿಪ್ಪಸಂದ್ರ ರಂಜಿತ್‌ ಕುಮಾರ್‌ (33),  ದೊಮ್ಮಲೂರು ಲೇಔಟ್‌ ನಿವಾಸಿ ಜೆ.ವಿನೋದ್‌ ಮ್ಯಾಥ್ಯೂವ್‌(35) ಮತ್ತು ರಂಗನಾಥ್‌(41) ಬಂಧಿತರು.

ಆರೋಪಿಗಳು: ಏ.19ರಂದು ರಾತ್ರಿ ಫ‌ುಡ್‌ ಡೆಲಿವರಿ ಬಾಯ್‌, ಶಿವಾಜಿನಗರ ನಿವಾಸಿ ಸತೀಶ್‌ ಕುಮಾರ್‌ ಮದ್ಯದ ಅಮಲಿನಲ್ಲಿ ಆರೋಪಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಅದರಿಂದ ಆಕ್ರೋಶಗೊಂಡ ಆರೋಪಿಗಳು ಸಿಮೆಂಟ್‌ ಇಟ್ಟಿಗೆ ಎತ್ತಿಹಾಕಿ ಹತ್ಯೆಗೈದಿದ್ದರು ಎಂದು ಪೊಲೀಸರು ಹೇಳಿದರು.

ಆರೋಪಿಗಳು ಹಾಗೂ ಸತೀಶ್‌ ಕುಮಾರ್‌ ಸ್ನೇಹಿತರಾಗಿದ್ದಾರೆ. ಏ.19ರಂದು ಸತೀಶ್‌ ಕುಮಾರ್‌ ಶಿವಾಜಿನಗರದಿಂದ ದೊಮ್ಮಲೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದಾನೆ. ಅದೇ ಕಾರ್ಯಕ್ರಮದಲ್ಲಿ ಆರೋಪಿಗಳು ಇದ್ದರು. ಈ ವೇಳೆ ಹಳೇ ಸ್ನೇಹಿತರೆಲ್ಲಾ ಒಟ್ಟಾಗಿ ಸಿಕ್ಕಿದ್ದಾರೆ. ಹೀಗಾಗಿ ಎಲ್ಲರೂ ಒಟ್ಟಾಗಿ ಮದ್ಯ ಸೇವಿಸಲು ದೊಮ್ಮಲೂರಿನ ಬಿಡಿಎ ಪಾರ್ಕ್‌ ಬಳಿ ಹೋಗಿದ್ದಾರೆ. ಎಲ್ಲರೂ ಕಂಠಪೂರ್ತಿ ಮದ್ಯ ಸೇವಿಸಿದ್ದರು. ಆಗ ಸತೀಶ್‌ ಕುಮಾರ್‌, ಸಂತೋಷ್‌ ಮತ್ತು ಪವನ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಎಲ್ಲರನ್ನು ಎಳೆದಾಡಿದ್ದ. ಈ ಹಿಂದೆಯೂ ಇದೇ ರೀತಿ ಸತೀಶ್‌ ಮದ್ಯದ ಅಮಲಿನಲ್ಲಿ ಜಗಳ ಮಾಡಿದ್ದ.

ಅದರಿಂದ ಆಕ್ರೋಶಗೊಂಡ ಸಂತೋಷ್‌, ಪವನ್‌ ಹಾಗೂ ಇತರರು ಸತೀಶ್‌ ಕುಮಾರ್‌ ಮೇಲೆ ಹಲ್ಲೆ ನಡೆಸಿ ಸಿಮೆಂಟ್‌ ಇಟ್ಟಿಗೆಯನ್ನು ಆತನ ತಲೆಮೇಲೆ ಎತ್ತಿ ಹಾಕಿ ಕೊಲೆಗೈದು ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಮದ್ಯ ಪಾರ್ಟಿ ಮಾಡಿದಾಗಲೆಲ್ಲ ಸತೀಶ್‌ ಕುಮಾರ್‌, ಆರೋಪಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಅದರಿಂದ ಆಕ್ರೋಶಗೊಂಡು ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಹೇಳಿದರು. ಹಲಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.