ಕುಟುಂಬ ಸುಟ್ಟ ತಂದೆಯ ಕುಡಿತ!

Team Udayavani, Oct 22, 2019, 10:26 AM IST

bng-tdy-2

ಬೆಂಗಳೂರು: ಕುಡಿತದ ಚಟ ಹತ್ತಿಸಿಕೊಂಡಿದ್ದ ವ್ಯಕ್ತಿಯೊಬ್ಬ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ, ಇಬ್ಬರು ಮಕ್ಕಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಾಟನ್‌ಪೇಟೆಯ ಭಕ್ಷಿ ಗಾರ್ಡನ್‌ನಲ್ಲಿ ನಡೆದಿದೆ.

ಮುರುಳಿ (45) ಕೃತ್ಯ ಎಸಗಿ ಮೃತಪಟ್ಟ ವನು. ತಂದೆಯೇ ಇಟ್ಟ ಬೆಂಕಿಯಿಂದ ಹಾಸಿಗೆಯಲ್ಲಿ ನಿದ್ರಿಸುತ್ತಿದ್ದ ಕಾವೇರಿ (21) ಶ್ರೀಕಾಂತ (15) ಅಸುನೀಗಿದ್ದಾರೆ. ಸುಟ್ಟ ಗಾಯಗಳಿಂದ ಗಂಭೀರವಾಗಿ ಗಾಯಗೊಂಡಿರುವ ಗೀತಾ (42) ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮನೆ ಯಲ್ಲಿ ಮಲಗಲು ಜಾಗವಿಲ್ಲದ ಕಾರಣ ಪಕ್ಕದ ಮನೆಯಲ್ಲಿ ಮಲಗಿದ್ದ ಕಾರ್ತಿಕ್‌ (19) ತಂದೆಯ ದುಷ್ಕೃತ್ಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಮುಂಜಾನೆ ಆರು ಗಂಟೆ ಸುಮಾರಿಗೆ ಟೀ ಕುಡಿಯಲು ಹೊರಗಡೆ ಎದ್ದು ಹೋಗಿದ್ದಾನೆ. ಬಳಿಕ ಮನೆಯ ಬಳಿ ಬಂದವನೇ ಮಲಗಿದ್ದ ಪತ್ನಿ ಗೀತಾ, ಮಕ್ಕಳಾದ ಶ್ರಿಕಾಂತ, ಕಾವೇರಿ ಮೈಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾನೆ. ಬಳಿಕ ತಾನೂ ಬೆಂಕಿ ಹಚ್ಚಿಕೊಂಡಿದ್ದಾನೆ. ಬೆಂಕಿಯ ಕೆನ್ನಾಲಗೆ ಜ್ವಾಲೆ ಕಂಡು ಸ್ಥಳೀಯರು ಕಿರುಚಿಕೊಂಡಿದ್ದು ಪಕ್ಕದ ಮನೆಯಲ್ಲಿ ಮಲಗಿದ್ದ ಕಾರ್ತಿಕ್‌

ಕೂಡ ಓಡಿ ಬಂದು ಸ್ಥಳೀಯರ ಜತೆ ಮನೆ ಯೊಳಗಡೆ ನುಗ್ಗಿ ನಾಲ್ವರನ್ನು ಮನೆಯಿಂದ ಹೊರಗಡೆ ನೂಕಿದ್ದಾನೆ. ಅಷ್ಟರಲ್ಲಾಗಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ದುರಂತದಲ್ಲಿ ಶ್ರೀಕಾಂತ್‌ ಹಾಗೂ ಕಾವೇರಿ ಸ್ಥಳದಲ್ಲಿಯೇ ಮೃತಪಟ್ಟರೆ, ಮುರುಳಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸತ್ತಿದ್ದಾನೆ. ಗೀತಾ ಅವರ ಸ್ಥಿತಿಯೂ ಚಿಂತಾಜನಕ ವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಕಾವೇರಿ ಪದವಿ ಪೂರ್ಣಗೊಳಿಸಿದ್ದು, ಮನೆಯಲ್ಲಿ ದ್ದರು. ಶ್ರೀಕಾಂತ ಎಂಟನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಮತ್ತೂಬ್ಬ ಪುತ್ರ ಕಾರ್ತಿಕ್‌ ಬಿಕಾಂ ವ್ಯಾಸಂಗ ಮಾಡುತ್ತಿ ದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.

ಕುಡಿತದ ಚಟ, ಕೌಟುಂಬಿಕ ಕಲಹ!: ಡಗಿ ಕೆಲಸ ಮಾಡುವ ಮುರುಳಿ ಕುಟುಂಬದ ಜತೆ ಭಕ್ಷಿ ಗಾರ್ಡನ್‌ನಲ್ಲಿ ಮನೆಯಲ್ಲಿ ಕುಟುಂಬದ ಜತೆ ವಾಸವಿದ್ದರು. ವಿಪರೀತ ಕುಡಿತದ ಅಭ್ಯಾಸ ಹೊಂದಿದ್ದ ಮುರುಳಿ, ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಕುಟುಂಬವನ್ನು ನಿರ್ಲಕ್ಷಿಸುತ್ತಿದ್ದ. ಕುಟುಂಬ ನಿರ್ವಹಣೆಗಾಗಿ ಗೀತಾ ಅವರು ಮನೆಯಲ್ಲಿ ಹೂ ಕಟ್ಟಿ ಮಾರಾಟ ಮಾಡುತ್ತಿದ್ದರು. ಇದಕ್ಕೆ ಮಗಳು ಕಾವೇರಿ ಕೈ ಜೋಡಿಸುತ್ತಿದ್ದರು. ಮುರುಳಿ ಕುಡಿದು ಬಂದು ನಿತ್ಯವೂ ಪತ್ನಿ ಜತೆ ಜಗಳ ಮಾಡು¤ದ್ದ. ಸೋಮವಾರ ಮುಂಜಾನೆ ಟೀ ಕುಡಿಯಲು ಹೊರಗಡೆ ಹೋಗಿ ಬಂದವನು ಈ ಕೃತ್ಯ ಎಸಗಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. ಮುರುಳಿ ಕೃತ್ಯ ಎಸಗಿದ್ದು ಏಕೆ ಎಂಬುದರ ಬಗ್ಗೆ ನಿಖರವಾಗಿ ಗೊತ್ತಾಗಿಲ್ಲ. ಭಾನುವಾರ ರಾತ್ರಿಯೂ ಆತ ಜಗಳ ಮಾಡಿದ್ದನೇ,

ಕೌಟುಂಬಿಕ ಕಲಹ ಹೊರತುಪಡಿಸಿ ಬೇರೆ ಕಾರಣಗಳಿವೆಯೇ ಎಂಬುದರ ಕುರಿತು ತನಿಖೆ ಮುಂದುವರಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ಈ ಕುರಿತು ಕಾಟನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.