ಬತ್ತಿದ ಬೋರ್‌ವೆಲ್‌; ಟ್ಯಾಂಕರ್‌ ನೀರು ಇಲ್ಲ!

Team Udayavani, Mar 9, 2019, 6:27 AM IST

battida.jpg

ಬೆಂಗಳೂರು: ಬೇಸಿಗೆ ಬಿಸಿ ನಗರಕ್ಕೆ ಮುಂಚಿತವಾಗಿಯೇ ತಟ್ಟಲು ಶುರುವಾಗಿದ್ದು, ಈಗಾಗಲೇ ಒಂದೊಂದಾಗಿ ಕೊಳವೆಬಾವಿಗಳು ಬತ್ತಲು ಆರಂಭಿಸಿವೆ. ಜಲ ಮಂಡಳಿ ವ್ಯಾಪ್ತಿ ಸೇರಿ ನಗರದ ಶೇ.5ರಿಂದ 10ರಷ್ಟು ಕೊಳವೆಬಾವಿಗಳ ಈಗಾಗಲೇ ಬತ್ತಿದ್ದು, ಉಳಿದವುಗಳಲ್ಲಿ ನೀರಿನ ಪ್ರಮಾಣವೂ ಕುಸಿಯುತ್ತಿದೆ.

ಪರಿಣಾಮ ಟ್ಯಾಂಕರ್‌ ನೀರಿನ ಪೂರೈಕೆಯಲ್ಲೂ ಕುಸಿತ ಕಂಡುಬಂದಿದ್ದು, ಕಾವೇರಿ ಸಂಪರ್ಕ ಇರುವ ಪ್ರದೇಶಗಳೂ ಸೇರಿ ಹಲವೆಡೆ ನೀರಿನ ಹಾಹಾಕಾರ ಕೇಳಿಬರುತ್ತಿದೆ. ಈಚೆಗೆ ಮಹದೇವಪುರ ವಲಯದಲ್ಲಿ ನಡೆದ ವಾರ್ಡ್‌ ಕಮಿಟಿಯಲ್ಲಿ ಅಪಾರ್ಟ್‌ಮೆಂಟ್‌ಗಳ ನಿವಾಸಿಗಳು ಬಹಿರಂಗವಾಗೇ ಅಳಲು ತೋಡಿಕೊಂಡರು. ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಅತ್ತ ಕಾವೇರಿ ನೀರಿನ ಪೂರೈಕೆಯೂ ಕಡಿಮೆ ಆಗಿದೆ.

ಇತ್ತ ಹಣ ಕೊಟ್ಟರೂ ಸಮರ್ಪಕವಾಗಿ ಟ್ಯಾಂಕರ್‌ ನೀರು ಸಿಗುತ್ತಿಲ್ಲ. ಬೇಸಿಗೆಗೂ ಮೊದಲೇ ಹೀಗಾದರೆ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಹೇಗೆ ಎಂದು ಪ್ರಶ್ನಿಸಿದರು. “ವೈಟ್‌ಫೀಲ್ಡ್‌ ರೈಸಿಂಗ್‌’ ಈಚೆಗೆ ತನ್ನ ಫೇಸ್‌ಬುಕ್‌ ಪೇಜ್‌ನಲ್ಲಿ ನಿವಾಸಿಗಳಿಂದ ನೀರಿನ ಲಭ್ಯತೆ ಕುರಿತು ಅಭಿಪ್ರಾಯ ಸಂಗ್ರಹಿಸಿದ್ದು, ಅದರಲ್ಲಿ “ಅಗತ್ಯಕ್ಕಿಂತ ಅರ್ಧದಷ್ಟು ನೀರು ಮಾತ್ರ ಪೂರೈಕೆ ಆಗುತ್ತಿದೆ’ ಎಂದು ಅಸಹಾಯಕತೆ ತೋಡಿಕೊಂಡಿದ್ದಾರೆ.

ಹೂಳೆತ್ತಲು ಒತ್ತಾಯ: ಈ ಮಧ್ಯೆ ವರ್ತೂರು ಕೆರೆಯಲ್ಲಿ ಹೂಳು ತುಂಬಿಕೊಂಡಿರುವುದರಿಂದ ಕೆರೆ ನೀರು ಬಹುತೇಕ ದಕ್ಷಿಣ ಭಾಗದಲ್ಲೇ ಹರಿಯುತ್ತಿದೆ. ಇದರಿಂದ ಉತ್ತರದಲ್ಲಿನ ಕೊಳವೆಬಾವಿಗಳು ಬರಿದಾಗುತ್ತಿವೆ. ಆದ್ದರಿಂದ ತ್ವರಿತವಾಗಿ ಹೂಳೆತ್ತುವ ಕಾರ್ಯ ಕೈಗೆತ್ತಿಕೊಳ್ಳುವ ಅವಶ್ಯಕತೆ ಇದೆ ಎಂದು ವೈಟ್‌ಫೀಲ್ಡ್‌ ರೈಸಿಂಗ್‌ನ ಇಳಂಗೋವನ್‌ ತಿಳಿಸಿದರು.

ಟ್ಯಾಂಕರ್‌ ಮಾಲಿಕರು ನೆಲಮಂಗಲ, ಕೆಂಗೇರಿ, ಹೊಸಕೋಟೆ ಹಾಗೂ ಹೊರವಲಯದ ನಿವಾಸಿಗಳು ಬೋರ್‌ವೆಲ್‌ಗ‌ಳನ್ನೇ ಅವಲಂಬಿಸಿದ್ದಾರೆ. ಪಾಲಿಕೆಗೆ ಈಚೆಗೆ ಸೇರ್ಪಡೆಗೊಂಡ 110 ಹಳ್ಳಿಗಳು ಸೇರಿದಂತೆ ಕಾವೇರಿ ಸಂಪರ್ಕ ಇಲ್ಲದ ಪ್ರದೇಶಗಳಲ್ಲಿ ಕೊಳವೆಬಾವಿಗಳ ಮೇಲೆ ಬೇಸಿಗೆಯಲ್ಲಿ ಒತ್ತಡ ಬೀಳುತ್ತದೆ.

ಇದರಿಂದ ಅಂತರ್ಜಲ ಕಡಿಮೆಯಾಗಿ ಬೋರ್‌ಗಳು ಬತ್ತುತ್ತಿವೆ ಎಂದು ಜಲಮಂಡಳಿ ಅಧಿಕಾರಿಯೊಬ್ಬರು ತಿಳಿಸುತ್ತಾರೆ. ನಗರದಲ್ಲಿ ಅಂದಾಜು ಎರಡೂವರೆ ಲಕ್ಷ ಕೊಳವೆಬಾವಿಗಳಿದ್ದು, ನೀರು 500ರಿಂದ 1,000 ಅಡಿ ಆಳದಲ್ಲಿದೆ ಎನ್ನಲಾಗಿದೆ. ಕೆರೆ-ಕುಂಟೆಗಳಿರುವ ಭಾಗಗಳಲ್ಲಿ ಅಂತರ್ಜಲ ಮಟ್ಟ ತುಸು ಮೇಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.